ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 7 ಕೋಟಿ 80 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದೆ. ಲಸಿಕೆ ನೀಡಿಕೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ....

ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ
ಆರೋಗ್ಯ ಸಚಿವ ಡಾ ಕೆ ಸುಧಾಕರ್
Updated By: ಆಯೇಷಾ ಬಾನು

Updated on: Dec 08, 2021 | 9:55 AM

ಬೆಂಗಳೂರು: ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ. ಆದರೆ ನಿಖರವಾಗಿ ಸಮಯ ಹೇಳುವುದಕ್ಕೆ ಈಗ ಆಗಲ್ಲ. ರಾಜ್ಯಕ್ಕೆ 3, 4ನೇ ಅಲೆ ಬಂದರೂ ದೊಡ್ಡ ಪರಿಣಾಮವಾಗಲ್ಲ. ಆದರೂ ನಾವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸ್ಫೋಟಗೊಳ್ಳುತ್ತಿದೆ. ಶಾಲಾ-ಕಾಲೇಜಿನ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡ ಚರ್ಚೆ ನಡೆಸಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಸದ್ಯ ಬೆಂಗಳೂರಿನಲ್ಲಿ ಇಂದು ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 7 ಕೋಟಿ 80 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಲಸಿಕೆ ನೀಡಿಕೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ರಾಜ್ಯದ ಜನ ಕೂಡ ಲಸಿಕೆ ಪಡೆಯಲು ಮುಂದಾಗುತ್ತಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ತಡೆಗೆ ಕೈಗೊಂಡ ಕ್ರಮಗಳು ಸಮಯೋಚಿತವಾಗಿದೆ. ನಾವು ಕೈಕೊಂಡ ಕ್ರಮಗಳನ್ನು ಇತರರು ಅನುಸರಿಸಬೇಕು. ಒಮಿಕ್ರಾನ್ ಬಗ್ಗೆ ಯಾರೂ ಉದಾಸೀನ ಮಾಡಬಾರದು. ಇದು ಹೊಸ ಪ್ರಭೇದವಾಗಿದ್ದು ತಕ್ಷಣಕ್ಕೆ ಗೊತ್ತಾಗಲ್ಲ ಅಧ್ಯಯನ ಬೇಕು. ಯಾವುದೇ ಸಾಂಕ್ರಾಮಿಕ ರೋಗದ ಇತಿಹಾಸ ನೋಡಿದಾಗ ಮೊದಲ ಹಾಗೂ ಎರಡನೇ ಅಲೆಯೇ ಹೆಚ್ಚು ಅಪಾಯವಾಗಿರುತ್ತೆ. ಮೂರನೇ ಅಲೆಯಲ್ಲಿ ದೊಡ್ಡ ದುಷ್ಪರಿಣಾಮ ಯಾವುದು ಆಗೋದಿಲ್ಲ ಆದ್ರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಒಳ್ಳೆಯದು ಎಂದು ರಾಜ್ಯದ ಜನತೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಹೊಸವರ್ಷ, ಕ್ರಿಸ್‌ಮಸ್ ಆಚರಣೆಗೆ ಗೈಡ್‌ಲೈನ್ಸ್ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಚಿವರು, ಈ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಸಿಎಂ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ ಎಂದು ಸುಮ್ಮನಾದ್ರು.

ಇದನ್ನೂ ಓದಿ: ‘ಪುನೀತ್​ ಅಣ್ಣ ಇಲ್ಲದೇ ನಾವು ತಬ್ಬಲಿ ಆಗಿದ್ದೇವೆ’: ಅಪ್ಪು ಹೇಳಿಕೊಟ್ಟ ಪಾಠಗಳ ಬಗ್ಗೆ ನಿಖಿಲ್​ ಮಾತು

Published On - 9:42 am, Wed, 8 December 21