AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಓಮಿಕ್ರಾನ್ ಹೊಸ ತಳಿ: ಎರಡು ವಾರ ಕಾದು ನೋಡುವ ತಂತ್ರಕ್ಕೆ ಮುಂದಾದ ತಜ್ಞರು

ಓಮಿಕ್ರಾನ್ ಹೊಸ ರೂಪಾಂತರಿ ಮತ್ತೆ ಅಬ್ಬರಿಸೋಕೆ ಶುರುಮಾಡಿದೆ ಎಂಬ ಆತಂಕ ಹೆಚ್ಚಾಗಿದ್ದು ಎರಡು ವಾರಗಳ ಕಾದು ನೋಡುವ ತಂತ್ರಕ್ಕೆ ತಜ್ಞರು ಮುಂದಾಗಿದ್ದಾರೆ.

ಕರ್ನಾಟಕದಲ್ಲಿ ಓಮಿಕ್ರಾನ್ ಹೊಸ ತಳಿ: ಎರಡು ವಾರ ಕಾದು ನೋಡುವ ತಂತ್ರಕ್ಕೆ ಮುಂದಾದ ತಜ್ಞರು
ಸಾಂದರ್ಭಿಕ ಚಿತ್ರImage Credit source: deccan herald
TV9 Web
| Updated By: ಆಯೇಷಾ ಬಾನು|

Updated on:Dec 22, 2022 | 11:59 AM

Share

ಬೆಂಗಳೂರು: ಚೀನಾ, ಜಪಾನ್, ಕೊರಿಯಾ, ಅಮೆರಿಕ, ಬ್ರೆಜಿಲ್ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲೂ ಕೊರೊನಾ ಆತಂಕ ಹೆಚ್ಚಾಗಿದೆ. ಓಮಿಕ್ರಾನ್ ಹೊಸ ರೂಪಾಂತರಿ ಮತ್ತೆ ಅಬ್ಬರಿಸೋಕೆ ಶುರುಮಾಡಿದೆ ಎಂಬ ಆತಂಕ ಹೆಚ್ಚಾಗಿದ್ದು ಎರಡು ವಾರಗಳ ಕಾದು ನೋಡುವ ತಂತ್ರಕ್ಕೆ ತಜ್ಞರು ಮುಂದಾಗಿದ್ದಾರೆ. ದೇಶದಲ್ಲಿ ಎರಡು ವಾರಗಳ ಬಳಿಕ ಕೊರೊನಾ ಆರ್ಭಟದ ಚಿತ್ರಣ ಸಿಗಲಿದೆ ಎಂದು ತಜ್ಞರು ತಿಳಿಸಿದ್ದಾರೆ. ‌

ಒಂದು ವರ್ಷ ಬಳಿಕ ಮತ್ತೆ ಓಮಿಕ್ರಾನ್ ರೂಪಾಂತರಿಗಳು ಎಂಟ್ರಿ ಕೊಡುತ್ತಿವೆ. ಹೊಸ ರೂಪಾಂತರಿಯ ಬಗ್ಗೆ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಚೀನಾದಲ್ಲಿ ಹೆಚ್ಚು ಪತ್ತೆಯಾಗಿರುವ ಓಮಿಕ್ರಾನ್ ಉಪತಳಿ f7 ಸುಮಾರು ದೇಶಗಳಲ್ಲಿ ಕೇಸ್ ಹಾಗೂ ಸಾವಿನ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಜಪಾನ್‌ ನಲ್ಲಿ ಕೊರೊನಾ ಅಟ್ಟಹಾಸಕ್ಕೂ ಉಪತಳಿಗಳೇ ಕಾರಣ. ಅಮೇರಿಕಾದಲ್ಲಿ ನಿನ್ನೆ 384 ಜನರ ಸಾವಾಗಿದೆ. 68 ಸಾವಿರ ಕೊರೊನಾ ದೃಢಪಟ್ಟಿದೆ. ಭಾರತಕ್ಕೆ ಬೇರೆ ಬೇರೆ ದೇಶಗಳಿಂದ ದಿನ ಸುಮಾರು 250 ಫ್ಲೈಟ್ ಸಂಚಾರ ಮಾಡ್ತೀವಿ. ಹೀಗಾಗಿ ಆತಂಕ ಹೆಚ್ಚಾಗಿದೆ.

ಹೊಸ ಮಾರ್ಗಸೂಚಿ ಬಿಡುಗಡೆಗೆ ಮುಂದಾದ ಆರೋಗ್ಯ ಇಲಾಖೆ

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾದ ಹಿನ್ನೆಲೆ ಕೊರೊನಾ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಚೀನಾ ಹಾಗೂ ಅಮೇರಿಕಾದಲ್ಲಿ ಸೋಂಕು ಗಣನೀಯ ಏರಿಕೆ ಕಾಣುತ್ತಿದೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು ಹೊಸ ರೂಪಾಂತರಿಗಳ ಪತ್ತೆಗೆ ರಾಜ್ಯ ಆರೋಗ್ಯ ಇಲಾಖೆಗಳಿಗೆ ಸೂಚನೆ ನೀಡಿದೆ. ಎಲ್ಲಾ ಪಾಸಿಟಿವ್ ಕೇಸ್ ಸಾಂಪಲ್ ಗಳನ್ನ ಜೀನೋಮ್ ಸೀಕ್ವೆನ್ಸಿಂಗ್ ಕಳಿಸುವಂತೆ ಸೂಚನೆ ನೀಡಿದ್ದು ಸೀಕ್ವೆನ್ಸಿಂಗ್ ಮಾಡಲು INSCOG ನ ಅನುಮತಿ ಪಡೆದ ಲ್ಯಾಬ್ ಗಳಿಗೆ ಕಳಿಸುವಂತೆ ಸೂಚನೆ ನೀಡಿದೆ.

ಇದನ್ನೂ ಓದಿ: ರಾಜ್ಯದಲ್ಲೂ ಕೊರೊನಾ ಆತಂಕ: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಬೀಳುತ್ತಾ ಬ್ರೇಕ್? ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ವಿದೇಶಿ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಶುರು

ದೇಶದಲ್ಲಿ 5 ಪೋಲ್ಡ್ ಸೂತ್ರ ಪಾಲನೆ ಮಾಡೋ ಮೂಲಕ ಕೊವಿಡ್ ಆರ್ಭಟಕಕ್ಕೆ ಬ್ರೇಕ್ ಹಾಕಲು ಚಿಂತನೆ ನಡೆದಿದೆ. ಕಳೆದ ಸಭೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಗೆ ಹೊಸ ರೂಪಾಂತರಿಗಳ ಬಗ್ಗೆ ಎಚ್ಚರಿಕೆ ನೀಡಿದ್ದು ಟೆಸ್ಟ್, ಟ್ರಾಕ್, ಟ್ರೀಟ್, ವ್ಯಾಕ್ಸಿನೇಷನ್ ಅನುಸರಣೆ ಮಾಡುವಂತೆ ಸೂಚನೆ ಕೊಟ್ಟಿದೆ. ಮತ್ತೆ ಕೊರೊನಾ ಏರಿಕೆ ಕಂಡ್ರೆ ಕೊರೊನಾ ಮಾರ್ಗಸೂಚಿಗಳ ಜಾರಿ ಅಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ನೀಡಿದೆ.

ನಾವು ಕೂಡ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದೇವೆ

ಇನ್ನು ಕೊರೊನಾ ಸಂಬಂಧ ಮಾತನಾಡಿದ ಸಚಿವ ಸುಧಾಕರ್, ಕೊವಿಡ್ ಬಗ್ಗೆ ರಾಜ್ಯದ ಜನರು ಆತಂಕಪಡಬೇಕಿಲ್ಲ. ಕೊವಿಡ್ ಸಂಬಂಧ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪ್ರಧಾನಿ ಮೋದಿ ಕೂಡ ಸಲಹೆಗಳನ್ನು ನೀಡಲಿದ್ದಾರೆ. ನಾವು ಕೂಡ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:59 am, Thu, 22 December 22

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್