AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Review Meeting: ಕರ್ನಾಟಕದಲ್ಲಿ ವ್ಯಾಪಿಸುತ್ತಿರುವ ಕೊರೊನಾ: ತಜ್ಞರ ಸಮಿತಿಯೊಂದಿಗೆ ನಾಳೆ ಮುಖ್ಯಮಂತ್ರಿ ಸಭೆ

Covid Guidelines: ಕೊರೊನಾ ಹಿನ್ನೆಲೆಯಲ್ಲಿ ಜಾರಿಗೊಳಿಸಿರುವ ನಿರ್ಬಂಧಗಳು ಜ.19ಕ್ಕೆ ಅಂತ್ಯವಾಗಲಿವೆ. ಕಠಿಣ ನಿಯಮಗಳನ್ನು ಮುಂದುವರಿಸುವ ಬಗ್ಗೆ ಹಾಗೂ ಫೆಬ್ರುವರಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ.

Corona Review Meeting: ಕರ್ನಾಟಕದಲ್ಲಿ ವ್ಯಾಪಿಸುತ್ತಿರುವ ಕೊರೊನಾ: ತಜ್ಞರ ಸಮಿತಿಯೊಂದಿಗೆ ನಾಳೆ ಮುಖ್ಯಮಂತ್ರಿ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jan 16, 2022 | 6:45 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು (Coronavirus) ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಸೋಮವಾರ (ಜ.17) ತಜ್ಞರ ಸಮಿತಿಯೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಸಭೆ ನಿಗದಿಯಾಗಿದ್ದು, ವಿಡಿಯೋ ಕಾನ್ಫರೆನ್ಸ್​ ಮೂಲಕ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಕಂದಾಯ ಸಚಿವ ಆರ್​.ಅಶೋಕ್ ಮತ್ತು ಕೊವಿಡ್​-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಹಿನ್ನೆಲೆಯಲ್ಲಿ ಜಾರಿಗೊಳಿಸಿರುವ ನಿರ್ಬಂಧಗಳು ಜ.19ಕ್ಕೆ ಅಂತ್ಯವಾಗಲಿವೆ. ಕಠಿಣ ನಿಯಮಗಳನ್ನು ಮುಂದುವರಿಸುವ ಔಚಿತ್ಯ ಮತ್ತು ಫೆಬ್ರುವರಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ.

ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರಿಗೆ ಕೊರೊನಾ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Mekedatu padayatra) ಸಂದರ್ಭದಲ್ಲಿ ಕೋಲಾರ ಜಿಲ್ಲೆಯಿಂದ ಭದ್ರತೆಗಾಗಿ 160 ಪೊಲೀಸರು ರಾಮನಗರಕ್ಕೆ ತೆರಳಿದ್ದರು. ಈ ಪೈಕಿ ಈವರೆಗೆ 63 ಪೊಲೀಸರಿಗೆ (Police) ಕೊರೊನಾ ಪಾಸಿಟಿವ್ ಬಂದಿದೆ. ಇನ್ನು ಕೆಲ ಪೊಲೀಸರ ಕೊವಿಡ್ (covid 19) ಟೆಸ್ಟ್ ರಿಪೋರ್ಟ್​ ಬರಬೇಕಿದ್ದು, ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ನಿನ್ನೆಯವರೆಗೂ ಒಟ್ಟು 32 ಜನ ಪೊಲೀಸರಲ್ಲಿ ಸೋಂಕು ಕಾಣಿಸಿಕೊಂಡಿತ್ತು, ಇಂದು ಹೊಸದಾಗಿ 31 ಜನ ಪೊಲೀಸರಿಗೆ ಸೋಂಕು ಪತ್ತೆಯಾಗಿದೆ.

ಚಾಮರಾಜನಗರ: ಕೊಳ್ಳೇಗಾಲ ಟೌನ್​ ಠಾಣೆಯ 9 ಪೊಲೀಸರಿಗೆ ಕೊರೊನಾ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಟೌನ್ ಪೊಲೀಸ್​ ಠಾಣೆಯ 9 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ವಾರ ಪಿಎಸ್​ಐ, ಕಾನ್ಸ್​ಟೇಬಲ್​ಗೆ ಸೋಂಕು ತಗುಲಿತ್ತು. ಹೀಗಾಗಿ 45 ಸಿಬ್ಬಂದಿಗಳಿಗೆ ಆರ್​ಟಿಪಿಸಿಆರ್​ ಟೆಸ್ಟ್ ಮಾಡಿಸಲಾಗಿತ್ತು. ಸದ್ಯ 45 ಪೊಲೀಸರ ಪೈಕಿ 9 ಪೊಲೀಸರಿಗೆ ಕೊರೊನಾ ಪಾಸಿಟಿವ್​ ಬಂದಿದೆ. ಕೊಳ್ಳೇಗಾಲ ಟೌನ್ ಪೊಲೀಸ್ ಠಾಣೆಗೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

ವಿಜಯಪುರ: ಜಿಲ್ಲೆಯಲ್ಲಿ 102 ಜನರಿಗೆ ಕೊರೊನಾ ದೃಢ ವಿಜಯಪುರ ಜಿಲ್ಲೆಯಲ್ಲಿಂದು 102 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಪಾಸಿಟಿವ್ ಪೀಡಿತರ ಸಂಖ್ಯೆ 436ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ 25 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಂ ಐಸೋಲೇಷನ್​ನಲ್ಲಿ 411 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ 27 ರೋಗಿಗಳು ಬಿಡುಗಡೆಯಾಗಿದ್ದಾರೆ. ಇನ್ನೂ 1,537 ಜನರ ಗಂಟಲು ದ್ರವ ಇಂದು ಸಂಗ್ರಹಿಲಾಗಿದೆ. 1,360 ಜನರ ಗಂಟಲು ದ್ರವ ವರದಿಗೆ ಕಾಯಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಾಲೇಜು ವಿದ್ಯಾರ್ಥಿಗಳಿಗೆ ಸೋಂಕು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಎಎಂಸಿ ಕಾಲೇಜಿನ 42 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಎಎಂಸಿ ಇಂಜಿನಿಯರ್​ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಆಗಿದೆ. ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿರುವ 30 ಜನರಿಗೆ ಈಗಾಗಲೇ ಕೊವಿಡ್​ ಟೆಸ್ಟ್​ ಮಾಡಿಸಲಾಗಿದೆ. ಆರೋಗ್ಯ ಅಧಿಕಾರಿಗಳಿಂದ ಕಾಲೇಜಿನಲ್ಲಿ ತಪಾಸಣೆ ನಡೆಸಿದ್ದು, ಇಂದು ಸಂಜೆಯ ವೇಳೆಗೆ ಇನ್ನಷ್ಟು ಪಾಸಿಟಿವ್ ಕೇಸ್ ಪತ್ತೆ ಆಗುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಕಾಲೇಜಿನಲ್ಲಿರುವ ಹಾಸ್ಟೆಲ್​ನಲ್ಲಿಯು ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ವಿದ್ಯಾರ್ಥಿಗಳ ಸ್ವಾಬ್ ಟೆಸ್ಟ್ ಮಾಡಲಾಗಿದೆ. ಎರಡು ಹಾಸ್ಟೆಲುಗಳನ್ನು ಕಂಟೋನ್ಮೆಂಟ್ ಮಾಡಲಾಗಿದೆ.

ಇದನ್ನೂ ಓದಿ:

Published On - 6:45 pm, Sun, 16 January 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ