Covid 19 Karnataka Update: 373 ಮಂದಿಗೆ ಸೋಂಕು, ನಾಲ್ವರು ಸಾವು

ರಾಜ್ಯದಲ್ಲಿ ಈವರೆಗೆ ಒಟ್ಟು 38,253 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ ಒಟ್ಟು 29,99,471 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,53,857 ಮಂದಿ ಚೇತರಿಸಿಕೊಂಡಿದ್ದಾರೆ

Covid 19 Karnataka Update: 373 ಮಂದಿಗೆ ಸೋಂಕು, ನಾಲ್ವರು ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 09, 2021 | 8:06 PM

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ 373 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 292 ಮಂದಿ ಸೋಂಕಿನಿಂದ ಚೇತರಿಸಿಕೊಂಡು, ವಿವಿಧ ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 7332 ಸಕ್ರಿಯ ಪ್ರಕರಣಗಳಿದ್ದು ಸೋಂಕು ಖಚಿತಗೊಳ್ಳುವ ಸರಾಸರಿ ಪ್ರಮಾಣ ಶೇ 0.31 ಮತ್ತು ಸೋಂಕಿತರ ಸಾವಿನ ಪ್ರಮಾಣ ಶೇ 1.07 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 38,253 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ ಒಟ್ಟು 29,99,471 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,53,857 ಮಂದಿ ಚೇತರಿಸಿಕೊಂಡಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ 211 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 133 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 5509 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 16,358 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 12,58,330 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,36,462 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ 16,358 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 211, ಶಿವಮೊಗ್ಗ 30, ಮೈಸೂರು 18, ಹಾಸನ 12, ಬೆಳಗಾವಿ, ಚಿಕ್ಕಬಳ್ಳಾಪುರ, ಧಾರವಾಡ 9, ಬಾಗಲಕೋಟೆ, ವಿಜಯಪುರ, ಕೋಲಾರ 1, ಬೆಂಗಳೂರು ಗ್ರಾಮಾಂತರ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 2, ದಕ್ಷಿಣ ಕನ್ನಡ 11, ಕೊಡಗು 21, ಮಂಡ್ಯ 4, ತುಮಕೂರು 11, ಉಡುಪಿ 6, ಉತ್ತರ ಕನ್ನಡ 8.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 4

ಸೋಂಕಿನಿಂದ ಮೃತಪಟ್ಟವರಿಗೆ ನೆರವು ಬಿಡುಗಡೆ ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಕೇಂದ್ರ ಸರ್ಕಾರವು ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 15,999 ಮಂದಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 9080 ಬಿಪಿಎಲ್, 6918 ಎಪಿಎಲ್ ಕುಟುಂಬಗಳು. ವಿವಿಧ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಸಿಕ್ಕಿದ್ದ 9647 ಪ್ರಕರಣಗಳಿಗೆ ಕೇಂದ್ರ ಸರ್ಕಾರವು ತಲಾ ₹ 50,000 ಬಿಡುಗಡೆ ಮಾಡಿದೆ.

ಇದನ್ನೂ ಓದಿ: 2021ರಲ್ಲಿ ಸರ್ಕಾರಕ್ಕೆ ಸಂಬಂಧಿಸಿದ ಟ್ವೀಟ್​​ಗಳಲ್ಲಿ ಹೆಚ್ಚು ಮರುಟ್ವೀಟ್ ಆಗಿದ್ದು ಮೋದಿ ಕೊವಿಡ್ ಲಸಿಕೆ ಪಡೆಯುತ್ತಿರುವ ಚಿತ್ರ ಇದನ್ನೂ ಓದಿ: ವಿದೇಶದಿಂದ ಬಂದು ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿ ಬೆಂಗಳೂರಿನಲ್ಲಿ ಪತ್ತೆ