AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 40 ಸಾವಿರ ದಾಟಿದ ಸೋಂಕಿತರ ಸಂಖ್ಯೆ, ಕೊವಿಡ್​ನಿಂದ 21 ಜನರು ಸಾವು

Coronavirus: ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷ ದಾಟಿದೆ. ರಾಜ್ಯದಲ್ಲಿ ಪ್ರಸ್ತುತ 2,67,650 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

Covid 19 Karnataka Update: ಕರ್ನಾಟಕದಲ್ಲಿ 40 ಸಾವಿರ ದಾಟಿದ ಸೋಂಕಿತರ ಸಂಖ್ಯೆ, ಕೊವಿಡ್​ನಿಂದ 21 ಜನರು ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 19, 2022 | 9:02 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು (Coronavirus Infection) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 40,499 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ, 23,209 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕೊವಿಡ್ ಸೋಂಕಿಗೆ (Covid 19) 21 ಜನರು ಮೃತಪಟ್ಟಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷ ದಾಟಿದೆ. ರಾಜ್ಯದಲ್ಲಿ ಪ್ರಸ್ತುತ 2,67,650 ಜನರಲ್ಲಿ ಸೋಂಕು ಸಕ್ರಿಯವಾಗಿದೆ. ಕೊರೊನಾ ಪಾಸಿಟಿವಿಟಿ ದರ ಶೇಕಡಾ 18.80 ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 33,29,199 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 30,23,034 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 0.05 ಇದೆ. ಈವರೆಗೆ ಒಟ್ಟು 38,486 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 24,135 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ 14,82,484 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,81,636 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 1,84,377 ಸಕ್ರಿಯ ಪ್ರಕರಣಗಳಿವೆ. ಒಟ್ಟು 16,479 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬಾಗಲಕೋಟೆ 56, ಬಳ್ಳಾರಿ 736, ಬೆಳಗಾವಿ 390, ಬೆಂಗಳೂರು ಗ್ರಾಮಾಂತರ 785, ಬೆಂಗಳೂರು ನಗರ 24,135, ಬೀದರ್ 291, ಚಾಮರಾಜನಗರ 261, ಚಿಕ್ಕಬಳ್ಳಾಪುರ 863, ಚಿಕ್ಕಮಗಳೂರು 355, ಚಿತ್ರದುರ್ಗ 382, ದಕ್ಷಿಣ ಕನ್ನಡ 983, ದಾವಣಗೆರೆ 171, ಧಾರವಾಡ 637, ಗದಗ 100, ಹಾಸನ 1785, ಹಾವೇರಿ 55, ಕಲಬುರಗಿ 872, ಕೊಡಗು 165, ಕೋಲಾರ 491, ಕೊಪ್ಪಳ 162, ಮಂಡ್ಯ 1340, ಮೈಸೂರು 1341, ರಾಯಚೂರು 153, ರಾಮನಗರ 367, ಶಿವಮೊಗ್ಗ 382, ತುಮಕೂರು 1804, ಉಡುಪಿ 683, ಉತ್ತರ ಕನ್ನಡ 522, ವಿಜಯಪುರ 151, ಯಾದಗಿರಿ 81.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 5, ಮೈಸೂರು 4, ದಕ್ಷಿಣ ಕನ್ನಡ 3, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಗದಗ, ಹಾಸನ, ರಾಯಚೂರು, ವಿಜಯಪುರ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Covid-19: ಕೊವಿಡ್​ನಿಂದ ಮೃತಪಟ್ಟವರ ದೇಹದಲ್ಲೂ 9 ದಿನ ಕೊರೊನಾವೈರಸ್ ಜೀವಂತವಾಗಿರುತ್ತದೆ! ಇದನ್ನೂ ಓದಿ: ಕೊರೊನಾ 3ನೇ ಅಲೆ ಉತ್ತುಂಗದಲ್ಲಿ ಪ್ರತಿದಿನದ ಸೋಂಕು ಪ್ರಕರಣಗಳು 1 ಲಕ್ಷ ದಾಟಬಹುದು: ಆರೋಗ್ಯ ಸಚಿವ ಸುಧಾಕರ

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ