ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು (Coronavirus Infection) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 40,499 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ, 23,209 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕೊವಿಡ್ ಸೋಂಕಿಗೆ (Covid 19) 21 ಜನರು ಮೃತಪಟ್ಟಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷ ದಾಟಿದೆ. ರಾಜ್ಯದಲ್ಲಿ ಪ್ರಸ್ತುತ 2,67,650 ಜನರಲ್ಲಿ ಸೋಂಕು ಸಕ್ರಿಯವಾಗಿದೆ. ಕೊರೊನಾ ಪಾಸಿಟಿವಿಟಿ ದರ ಶೇಕಡಾ 18.80 ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 33,29,199 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 30,23,034 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 0.05 ಇದೆ. ಈವರೆಗೆ ಒಟ್ಟು 38,486 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 24,135 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ 14,82,484 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,81,636 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 1,84,377 ಸಕ್ರಿಯ ಪ್ರಕರಣಗಳಿವೆ. ಒಟ್ಟು 16,479 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ಬಾಗಲಕೋಟೆ 56, ಬಳ್ಳಾರಿ 736, ಬೆಳಗಾವಿ 390, ಬೆಂಗಳೂರು ಗ್ರಾಮಾಂತರ 785, ಬೆಂಗಳೂರು ನಗರ 24,135, ಬೀದರ್ 291, ಚಾಮರಾಜನಗರ 261, ಚಿಕ್ಕಬಳ್ಳಾಪುರ 863, ಚಿಕ್ಕಮಗಳೂರು 355, ಚಿತ್ರದುರ್ಗ 382, ದಕ್ಷಿಣ ಕನ್ನಡ 983, ದಾವಣಗೆರೆ 171, ಧಾರವಾಡ 637, ಗದಗ 100, ಹಾಸನ 1785, ಹಾವೇರಿ 55, ಕಲಬುರಗಿ 872, ಕೊಡಗು 165, ಕೋಲಾರ 491, ಕೊಪ್ಪಳ 162, ಮಂಡ್ಯ 1340, ಮೈಸೂರು 1341, ರಾಯಚೂರು 153, ರಾಮನಗರ 367, ಶಿವಮೊಗ್ಗ 382, ತುಮಕೂರು 1804, ಉಡುಪಿ 683, ಉತ್ತರ ಕನ್ನಡ 522, ವಿಜಯಪುರ 151, ಯಾದಗಿರಿ 81.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ಬೆಂಗಳೂರು ನಗರ 5, ಮೈಸೂರು 4, ದಕ್ಷಿಣ ಕನ್ನಡ 3, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಗದಗ, ಹಾಸನ, ರಾಯಚೂರು, ವಿಜಯಪುರ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಕೊರೊನಾ 3ನೇ ಅಲೆ ಉತ್ತುಂಗದಲ್ಲಿ ಪ್ರತಿದಿನದ ಸೋಂಕು ಪ್ರಕರಣಗಳು 1 ಲಕ್ಷ ದಾಟಬಹುದು: ಆರೋಗ್ಯ ಸಚಿವ ಸುಧಾಕರ