AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಒಮಿಕ್ರಾನ್ ಆತಂಕದ ನಡುವೆ ಕರ್ನಾಟಕದಲ್ಲಿ 397 ಮಂದಿಗೆ ಕೊವಿಡ್ ಸೋಂಕು, ನಾಲ್ವರು ಸಾವು

ರಾಜ್ಯದಲ್ಲಿ ಪ್ರಸ್ತುತ 7012 ಸಕ್ರಿಯ ಪ್ರಕರಣಗಳಿದ್ದು ಪಾಸಿಟಿವಿಟಿ ಪ್ರಮಾಣ ಶೇ 0.35, ಸೋಂಕಿತರ ಸಾವಿನ ಸರಾಸರಿ ಶೇ 1ರಷ್ಟು ಇದೆ. ರಾಜ್ಯದಲ್ಲಿ ಈವರೆಗೆ 29,97,643 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,52,378 ಮಂದಿ ಚೇತರಿಸಿಕೊಂಡಿದ್ದಾರೆ

Covid 19 Karnataka Update: ಒಮಿಕ್ರಾನ್ ಆತಂಕದ ನಡುವೆ ಕರ್ನಾಟಕದಲ್ಲಿ 397 ಮಂದಿಗೆ ಕೊವಿಡ್ ಸೋಂಕು, ನಾಲ್ವರು ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 04, 2021 | 8:49 PM

Share

ಬೆಂಗಳೂರು: ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಹಲವು ಕಠಿಣ ನಿರ್ಬಂಧಗಳನ್ನು ನಿನ್ನೆ (ನ.3) ಜಾರಿಗೊಳಿಸಿದೆ. ರಾಜ್ಯದಲ್ಲಿ ಟೆಸ್ಟಿಂಗ್ ಹೆಚ್ಚಿಸಲು, ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿರುವ ಪೋಷಕರು ಹಾಗೂ ವಿವಿಧ ವರ್ಗಗಳ ಜನರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಬೆಂಗಳೂರಿನಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಒಮಿಕ್ರಾನ್ ಸೋಂಕು ಪತ್ತೆಯಾಗಿತ್ತು. ಈ ನಡುವೆ ಗುಜರಾತ್​ನ ಜುನಾಗಡದಲ್ಲಿಯೂ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿತ್ತು.

ಕರ್ನಾಟಕದಲ್ಲಿ ಶನಿವಾರ ಒಟ್ಟು 397 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಒಟ್ಟು 277 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 7012 ಸಕ್ರಿಯ ಪ್ರಕರಣಗಳಿದ್ದು ಪಾಸಿಟಿವಿಟಿ ಪ್ರಮಾಣ ಶೇ 0.35, ಸೋಂಕಿತರ ಸಾವಿನ ಸರಾಸರಿ ಶೇ 1ರಷ್ಟು ಇದೆ. ರಾಜ್ಯದಲ್ಲಿ ಈವರೆಗೆ 29,97,643 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,52,378 ಮಂದಿ ಚೇತರಿಸಿಕೊಂಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 207, ಮೈಸೂರು 29, ಧಾರವಾಡ 26, ದಕ್ಷಿಣ ಕನ್ನಡ 22, ಶಿವಮೊಗ್ಗ, ಹಾಸನ, ಕೊಡಗು 19, ಚಿಕ್ಕಮಗಳೂರು 11, ಉಡುಪಿ, ತುಮಕೂರು 8, ಉತ್ತರ ಕನ್ನಡ 7, ಕೋಲಾರ 5, ಚಿತ್ರದುರ್ಗ, ಬೆಳಗಾವಿ 3, ಬಳ್ಳಾರಿ, ಮಂಡ್ಯ, ದಾವಣಗೆರೆ 2, ಬೆಂಗಳೂರು ಗ್ರಾಮಾಂತರ, ಕಲಬುರಗಿ 1.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಒಮಿಕ್ರಾನ್​ 4ನೇ ಪ್ರಕರಣ ಪತ್ತೆ; ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಮಹಾರಾಷ್ಟ್ರದ ವ್ಯಕ್ತಿಯಲ್ಲಿ ಸೋಂಕು ದೃಢ ಇದನ್ನೂ ಓದಿ: ಒಮಿಕ್ರಾನ್​ನಿಂದ ದಕ್ಷಿಣ ಆಫ್ರಿಕಾದಲ್ಲಿ ಸೋಂಕಿತರ ಪ್ರಮಾಣ ಆರು ಪಟ್ಟು ಹೆಚ್ಚಳ: ಭಾರತದಲ್ಲಿ ಹೆಚ್ಚಾಗುತ್ತಿದೆ ಆತಂಕ

Follow Us
TV9 Web
TV9 Web

TV9 Kannada

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ