AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಹೆಚ್ಚಾಗಲಿದೆ; ಸಿಎಂಗೆ ತಜ್ಞರ ವರದಿ

ಜನವರಿ ಮೊದಲ ವಾರದ ಬಳಿಕ ರಾಜ್ಯದಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ IISC ತಜ್ಞರು ಹಾಗೂ TAC ಎಕ್ಸ್​ಪರ್ಟ್​​ ತಂಡ ವರದಿ ನೀಡಿದೆ. ಜನವರಿ ಮೊದಲ ವಾರದಲ್ಲಿ ಅತಿ ಹೆಚ್ಚು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆ ಸೂಚನೆ ಬೆನ್ನಲ್ಲೆ ಬಿಬಿಎಂಪಿ ವ್ಯಾಪ್ತಿಯಲ್ಲಾಗಿರೋ ಸಿದ್ಧತೆಗಳನ್ನ ಪರಿಶೀಲಿಸಲು ಸಜ್ಜಾಗಿರೋ ಪಾಲಿಕೆ, ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದೆ.

ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಹೆಚ್ಚಾಗಲಿದೆ; ಸಿಎಂಗೆ ತಜ್ಞರ ವರದಿ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ಆಯೇಷಾ ಬಾನು

Updated on: Dec 21, 2023 | 11:46 AM

ಬೆಂಗಳೂರು, ಡಿ.21: ಕೇರಳದಲ್ಲಿ ಕೋವಿಡ್ (Covid 19) ಹೊಸ ವೈರಸ್ ಅಬ್ಬರಿಸುತ್ತಿರೋ ಹೊತ್ತಲ್ಲೇ ರಾಜ್ಯದಲ್ಲೂ ಕೋವಿಡ್ ಆತಂಕ ಶುರುವಾಗಿದೆ. ಇತ್ತ ರಾಜ್ಯ ರಾಜಧಾನಿ ಬೆಂಗಳೂರಲ್ಲೂ ಕೋವಿಡ್ ಎದುರಿಸೋಕೆ ಬಿಬಿಎಂಪಿ (BBMP) ಸಜ್ಜಾಗ್ತಿದೆ. ಹೊಸ ವರ್ಷ, ಕ್ರಿಸ್ ಮಸ್ ಆಚರಣೆಯಿಂದ ಕೊರೊನಾ ಹೆಚ್ಚಾಗುತ್ತ ಎಂಬ ಭಯ ಕಾಡುತ್ತಿದೆ. ಇದರ ನಡುವೆ ಜನವರಿ ಮೊದಲ ವಾರ ರಾಜ್ಯದಲ್ಲಿ ಕೊರೊನಾ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂದು IISC ತಜ್ಞರು ಹಾಗೂ TAC ಎಕ್ಸ್​ಪರ್ಟ್​​ ತಂಡ ಮಾಹಿತಿ ನೀಡಿದೆ.

ಜನವರಿ ಮೊದಲ ವಾರದ ಬಳಿಕ ರಾಜ್ಯದಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ IISC ತಜ್ಞರು ಹಾಗೂ TAC ಎಕ್ಸ್​ಪರ್ಟ್​​ ತಂಡ ವರದಿ ನೀಡಿದೆ. ಜನವರಿ ಮೊದಲ ವಾರದಲ್ಲಿ ಅತಿ ಹೆಚ್ಚು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಜನವರಿ ಮೊದಲ ವಾರಿ ಕೊರೊನಾ ಏರಿಕೆಯಾಗಿ ಫೆಬ್ರವರಿ ಕೊನೆ ವಾರ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕೇರಳದಲ್ಲಿ ಕೇಸ್ ಏರಿಕೆ ಕಂಡ ಎರಡರಿಂದ ಮೂರು ವಾರಗಳ ನಂತರ ರಾಜ್ಯದಲ್ಲಿ ಕೇಸ್ ಏರಿಕೆ ಸಾಧ್ಯತೆ ಇದೆ. ಜನವರಿ ತಿಂಗಳು ಡೇಂಜರ್ ಆಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಅತಿ ಹೆಚ್ಚು ಕೊವಿಡ್​ ಟೆಸ್ಟ್​​ ಮಾಡಲು ನಿರ್ಧಾರ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ರತಿ ದಿನ‌ 2,500 ಕೊವಿಡ್ ಟೆಸ್ಟ್ ಮಾಡಲು ನಿರ್ಧರಿಸಲಾಗಿದ್ದು ILI, SARI ರೋಗಿಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ಒಂದೇ ದಿನ 300ಕ್ಕೂ ಹೆಚ್ಚು ಕೋವಿಡ್ ಪ್ರಕರಣ, ಮೂವರು ಸಾವು

ಆರೋಗ್ಯ ಇಲಾಖೆ ಸೂಚನೆ ಬೆನ್ನಲ್ಲೆ ಬಿಬಿಎಂಪಿ ವ್ಯಾಪ್ತಿಯಲ್ಲಾಗಿರೋ ಸಿದ್ಧತೆಗಳನ್ನ ಪರಿಶೀಲಿಸಲು ಸಜ್ಜಾಗಿರೋ ಪಾಲಿಕೆ, ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದೆ. ಸದ್ಯ ಪಾಲಿಕೆ ವ್ಯಾಪ್ತಿಯಲ್ಲಿ 450 ಲ್ಯಾಬ್ ಟೆಕ್ನಿಷಿಯನ್,350 ವೈದ್ಯರು, 2 ಸಾವಿರ ಆಕ್ಸಿಜನ್ ಕಾನ್ಸೆಟ್ರೇಟರ್ಸ್ ಗಳ ಜೊತೆಗೆ 144 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇವೆಗೆ ಸಜ್ಜಾಗಿದೆ ಅಂತಾ ಬಿಬಿಎಂಪಿ ಆರೋಗ್ಯ ವಿಭಾಗ ಮಾಹಿತಿ ಬಿಚ್ಚಿಟ್ಟಿದೆ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ