ಗುತ್ತಿಗೆ ಆಧರಿತ ಕೊರೊನಾ ವಾರಿಯರ್ಸ್ ಕೆಲಸದಿಂದ ವಜಾ, ಇಲಾಖೆ ನಡೆ ವಿರೋಧಿಸಿ ಪ್ರತಿಭಟನೆ

ನರ್ಸಿಂಗ್ ಸ್ಟಾಫ್, ಲ್ಯಾಬ್ ಟೆಕ್ನಿಷಿಯನ್, ಡಿ.ಗ್ರೂಪ್ ನೌಕರರು ಎಲ್ಲರನ್ನೂ ಸೆಪ್ಟೆಂಬರ್ ಅಂತ್ಯಕ್ಕೆ ಕರ್ತವ್ಯದಿಂದ ಮುಕ್ತಿಗೊಳಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಿ ಕೊರೊನಾ ಆಸ್ಪತ್ರೆಗಳಲ್ಲಿ, ವಾರ್ಡ್ ಗಳಲ್ಲಿ ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದವರನ್ನು ಕೈ ಬಿಡಲಾಗುತ್ತಿದೆ.

ಗುತ್ತಿಗೆ ಆಧರಿತ ಕೊರೊನಾ ವಾರಿಯರ್ಸ್ ಕೆಲಸದಿಂದ ವಜಾ, ಇಲಾಖೆ ನಡೆ ವಿರೋಧಿಸಿ ಪ್ರತಿಭಟನೆ
ಗುತ್ತಿಗೆ ಆಧರಿತ ಕೊರೊನಾ ವಾರಿಯರ್ಸ್ ಕೆಲಸದಿಂದ ವಜಾ, ಇಲಾಖೆ ನಡೆ ವಿರೋಧಿಸಿ ಪ್ರತಿಭಟನೆ
Follow us
TV9 Web
| Updated By: ಆಯೇಷಾ ಬಾನು

Updated on: Sep 22, 2021 | 12:13 PM

ಬೆಂಗಳೂರು: ಮಹಾಮಾರಿ ಕೊರೊನಾ ಮೂರನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದರೂ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವರ್ತನೆ ತೋರುತ್ತಿದೆ. ಏಕಾಏಕಿ ಎಲ್ಲಾ ಗುತ್ತಿಗೆ ಆಧರಿತ ಕೊರೊನಾ ವಾರಿಯರ್ಸ್ ಗಳಾದ ನರ್ಸಿಂಗ್ ಸ್ಟಾಫ್, ಲ್ಯಾಬ್ ಟೆಕ್ಷಿಷಿಯನ್ಸ್, ಡಿ ಗ್ರೂಪ್ ನೌಕರರನ್ನ ಕರ್ತವ್ಯದಿಂದ ಕೈಬಿಡಲು ಆರೋಗ್ಯ ಇಲಾಖೆ ಮುಂದಾಗಿದ್ದು ಇಲಾಖೆಯ ನಡೆ ವಿರೋಧಿಸಿ ಕೊರೊನಾ ವಾರಿಯರ್ಸ್ ಪ್ರತಿಭಟನೆ ನಡೆಸುತ್ತಿದ್ದಾರೆ.

ನರ್ಸಿಂಗ್ ಸ್ಟಾಫ್, ಲ್ಯಾಬ್ ಟೆಕ್ನಿಷಿಯನ್, ಡಿ.ಗ್ರೂಪ್ ನೌಕರರು ಎಲ್ಲರನ್ನೂ ಸೆಪ್ಟೆಂಬರ್ ಅಂತ್ಯಕ್ಕೆ ಕರ್ತವ್ಯದಿಂದ ಮುಕ್ತಿಗೊಳಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಿ ಕೊರೊನಾ ಆಸ್ಪತ್ರೆಗಳಲ್ಲಿ, ವಾರ್ಡ್ ಗಳಲ್ಲಿ ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದವರನ್ನು ಕೈ ಬಿಡಲಾಗುತ್ತಿದೆ.

ಕೊರೊನಾ ಕಡಿಮೆ ಆಗುತ್ತಿದ್ದಂತೆ ಒಂದುವರೆ ವರ್ಷ ಕೊರೊನಾ ಸೇವೆ ಮಾಡಿದ ಕೊರೊನಾ ವಾರಿಯರ್ಸ್ ಬದುಕು ಬೀದಿಗೆ ಬಿದ್ದಿದೆ. ಹೀಗಾಗಿ ಗುತ್ತಿಗೆ ಆಧರಿತ ಕೊರೊನಾ ವಾರಿಯರ್ಸ್ ಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮೌರ್ಯ ಸರ್ಕಲ್ನ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆ ಕ್ಯಾಂಪಸ್ನಲ್ಲಿ ಸೋಂಕು ಉಲ್ಬಣ ಇನ್ನು ಮತ್ತೊಂದು ಕಡೆ ಕೊವಿಡ್ಗೆ ಚಿಕಿತ್ಸೆ ಕೊಡುವ ಜಾಗದಲ್ಲೇ ಕೊವಿಡ್ ಸ್ಫೋಟವಾಗುತ್ತಿದೆ. ವಿಕ್ಟೋರಿಯಾ ಆಸ್ಪತ್ರೆ ಕ್ಯಾಂಪಸ್ನಲ್ಲಿ ಸೋಂಕು ಉಲ್ಬಣವಾಗುತ್ತಿದೆ. ಸರ್ಕಾರಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ಸಾಲು ಸಾಲು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ.

ವಿಕ್ಟೋರಿಯಾ ಕ್ಯಾಂಪಸ್ ಒಳಗಿರುವ ನರ್ಸಿಂಗ್ ಕಾಲೇಜು ಹಾಸ್ಟೆಲ್ ( ನೇತ್ರಾವತಿ ಹಾಸ್ಟೆಲ್)7 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಷ್ಟಾದರೂ ನರ್ಸಿಂಗ್ ಕಾಲೇಜಿನ ಆಡಳಿತದಿಂದ ನಿರ್ಲಕ್ಷ್ಯ ಮುಂದುವರೆದಿದೆ. ಹಾಸ್ಟೆಲ್ ಸ್ಯಾನಿಟೈಸ್ ಮಾಡಲು ಮೀನಾ ಮೇಷ ಎಣಿಸುತ್ತಿದೆ. ಹಾಸ್ಟೆಲ್ ನಲ್ಲಿ 250 ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು ತಗುಲುವ ಭೀತಿ ಕಾಡುತ್ತಿದೆ. ಸೋಂಕಿನ ಮಧ್ಯೆ ಸಾಲು ಸಾಲು ಸಮಾರಂಭ ಆಯೋಜನೆ ಮಾಡಲಾಗುತ್ತಿದೆ. ಇಂದಿನಿಂದ ವಿಕ್ಟೋರಿಯಾ ಹಾಸ್ಪಿಟಲ್ ಕ್ಯಾಂಪಸ್ ನಲ್ಲಿ ಸಾಂಸ್ಕೃತಿಕ ಸಮಾರಂಭ ಆರಂಭವಾಗಲಿದೆ. ಕಾಲೇಜು ಆಡಳಿತ ವಿದ್ಯಾರ್ಥಿಗಳ ಬಾಳಿನಲ್ಲಿ ಚೆಲ್ಲಾಟ ಆಡುತ್ತಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟ ಮುಗಿಯುತ್ತಿದ್ದಂತೆ ಕೊರೊನಾ ವಾರಿಯರ್ಸ್ಗೆ ಕರ್ತವ್ಯದಿಂದ ಮುಕ್ತಿಗೊಳಿಸಲು ಮುಂದಾದ ಆರೋಗ್ಯ ಇಲಾಖೆ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ