ಕರ್ನಾಟಕದಲ್ಲಿ ಮತ್ತೆ ಕೊರೋನಾ ಭೀತಿ, ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡಾಯ: ಸುಧಾಕರ್

ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಧರಿಸಬೇಕು. ತಕ್ಷಣಕ್ಕೆ ಎಲ್ಲಾ ಕಡೆ ಸ್ಕ್ರೀನಿಂಗ್ ಮಾಡಲ್ಲ. ವಿಮಾನ ನಿಲ್ದಾಣದಲ್ಲಿ ರ್‍ಯಾಂಡಮ್ ಸ್ಯಾಂಪಲ್ ಪರೀಕ್ಷೆ ಮಾಡಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಕರ್ನಾಟಕದಲ್ಲಿ ಮತ್ತೆ ಕೊರೋನಾ ಭೀತಿ, ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡಾಯ: ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್​
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 22, 2022 | 5:18 PM

ಬೆಂಗಳೂರು: ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಾಹಾಮಾರಿ ಕೊರೋನಾ ವೈರಸ್(Coronavirus) ಉಲ್ಬಣಗೊಂಡಿದೆ. ಇದರ ಬೆನ್ನಲ್ಲೆ ಕರ್ನಾಟಕ ಸರ್ಕಾರವು ಸಹ ಎಚ್ಚೆತ್ತುಕೊಂಡಿದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು((ಡಿ.22) ಬೆಳಗಾವಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರೋಗ್ಯ ಇಲಾಖೆಯ ಸಭೆ ನಡೆಸಿದರು. ಸಭೆಯಲ್ಲಿ ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡಾಯ ಸೇರಿದಂತೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಈ ಕುರಿತಾಗಿ ಸುವರ್ಣಸೌಧದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Sudhakar)​ ಮಾಹಿತಿ ನೀಡಿದ್ದಾರೆ.

ಮಾಸ್ಕ್ ಕಡಾಯ: ಡಾ. ಕೆ.ಸುಧಾಕರ್ 

ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಧರಿಸಬೇಕು. ತಕ್ಷಣಕ್ಕೆ ಎಲ್ಲಾ ಕಡೆ ಸ್ಕ್ರೀನಿಂಗ್ ಮಾಡಲ್ಲ. ದೇಶದಿಂದ ಬರುವ ಶೇ.3ರಷ್ಟು ಜನರಿಗೆ ವಿಮಾನ ನಿಲ್ದಾಣದಲ್ಲಿ ರ್‍ಯಾಂಡಮ್ ಸ್ಯಾಂಪಲ್ ಪರೀಕ್ಷೆ ಮಾಡಲಾಗುವುದು ರಾಜ್ಯದಲ್ಲಿ ಸದ್ಯ 4 ಸಾವಿರ ಕೋವಿಡ್ ಟೆಸ್ಟ್ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕೋವಿಡ್ ಟೆಸ್ಟ್​ ಪ್ರಮಾಣ ಹೆಚ್ಚಿಸುತ್ತೇವೆ. ಕೊರೊನಾ ರೂಪಾಂತರಿ ತಳಿ ವೇಗವಾಗಿ ಹರಡುವ ಮಾಹಿತಿಯಿದೆ. ಮತ್ತಷ್ಟು ವರದಿ ಬಂದ ನಂತರ ಅಧ್ಯಯನ ಮಾಡಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಕೊರೋನಾ ಭೀತಿ: ಕೊವಿಡ್ ನಿಯಮ ಜಾರಿಗೆ ಹೋಟೆಲ್ ಮಾಲೀಕರ ಸಂಘ ವಿರೋಧ

ಆದಷ್ಟು ಬೇಗ ಎಲ್ಲರೂ ಬೂಸ್ಟರ್​ ಡೋಸ್ ತೆಗೆದುಕೊಳ್ಳಬೇಕು

ಆದಷ್ಟು ಬೇಗ ಎಲ್ಲರೂ ಬೂಸ್ಟರ್​ ಡೋಸ್ ತೆಗೆದುಕೊಳ್ಳಬೇಕು. ಜಿಲ್ಲಾಸ್ಪತ್ರೆಗಳಲ್ಲಿ ಕೊವಿಡ್​ ಚಿಕಿತ್ಸೆಗೆ ಹಾಸಿಗೆ ಮೀಸಲಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಚಿಕಿತ್ಸೆಗೆ ಹಾಸಿಗೆ ಮೀಸಲಿಡಲಾಗಿದೆ. ಕೋವಿಡ್ ಕಡಿಮೆಯಾದ ಹಿನ್ನೆಲೆ ಲಸಿಕೆ ಪಡೆಯಲು ಮೀನಮೇಷ ಮಾಡಬಾರದು. ಎಲ್ಲರೂ ಬೂಸ್ಟರ್​ ಡೋಸ್​​​ ಪಡೆಯಬೇಕು. ಶೇಕಡಾ 20ರಷ್ಟು ಜನರು ಮಾತ್ರ ಬೂಸ್ಟರ್​ ಡೋಸ್ ಪಡೆದಿದ್ದಾರೆ. ಎಲ್ಲಾ ಕಡೆ ಕ್ಯಾಂಪ್​ ಮಾಡಿ ಬೂಸ್ಟರ್​ ಡೋಸ್ ನೀಡಲು ನಿರ್ಧಾರ ಮಾಡಲಾಗಿದೆ.

ಬೂಸ್ಟರ್​ ಡೋಸ್ ಲಸಿಕೆ ಪಡೆದರೆ ಯಾವುದೇ ಅಪಾಯ ಆಗುವುದಿಲ್ಲ. ಸೈಡ್​ ಎಫೆಕ್ಟ್​​ಗೂ ಲಸಿಕೆಗೂ ಯಾವುದೇ ಸಂಬಂಧ ಇಲ್ಲ. ಇನ್ನು ಹೊಸ ವರ್ಷ, ಕ್ರಿಸ್​​ಮಸ್​ ಆಚರಣೆಗೆ ಅನುಮತಿ ನೀಡುವ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಸಂಜೆಯೊಳಗೆ ಸ್ಪಷ್ಟವಾದ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ. ಗೈಡ್​ಲೈನ್ಸ್​ ಕುರಿತು ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಕೊರೊನಾ ಆತಂಕ: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಬೀಳುತ್ತಾ ಬ್ರೇಕ್? ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಶುರು

ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಟಾಂಗ್ ನೀಡಿದ ಸಚಿವ ಡಾ.ಸುಧಾಕರ್​ 

ಹೊಸ ವರ್ಷ ಹಾಗೂ ಕ್ರಿಸ್ ಮಸ್ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಸಂಜೆವೊಳಗೆ ಸ್ಪಷ್ಟವಾದ ಮಾರ್ಗಸೂಚಿ ಮಾಡುತ್ತೇವೆ. ಸದ್ಯ ಅದರ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಒಳಾಂಗಣದಲ್ಲಿ ಮಾಸ್ಕ್ ಧರಿಸಬೇಕು ಎಂದರು. ಭಾರತ್​ ಜೋಡೋ ಯಾತ್ರೆ ತಡೆಯಲು ಕೋವಿಡ್ ನೆಪ ಆರೋಪ ಮಾಡಿದ್ದು, ಕಳೆದ 3 ತಿಂಗಳಿಂದ ಕೋವಿಡ್ ಬಗ್ಗೆ ಯಾವುದೇ ಮಾತನಾಡಿಲ್ಲ. ಚೀನಾ, ಅಮೆರಿಕ ಸೇರಿದಂತೆ ಹಲವು ದೇಶದಲ್ಲಿ ಜಾಸ್ತಿಯಾಗುತ್ತಿದೆ. ಅಲ್ಲೆಲ್ಲ ನಾವು ಕೊರೊನಾ ಪ್ರಕರಣ ಹೆಚ್ಚಿಸಿದ್ವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಸಚಿವ ಡಾ.ಸುಧಾಕರ್​ ಟಾಂಗ್​ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:59 pm, Thu, 22 December 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ