ಬೆಂಗಳೂರು: ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಾಹಾಮಾರಿ ಕೊರೋನಾ ವೈರಸ್(Coronavirus) ಉಲ್ಬಣಗೊಂಡಿದೆ. ಇದರ ಬೆನ್ನಲ್ಲೆ ಕರ್ನಾಟಕ ಸರ್ಕಾರವು ಸಹ ಎಚ್ಚೆತ್ತುಕೊಂಡಿದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು((ಡಿ.22) ಬೆಳಗಾವಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರೋಗ್ಯ ಇಲಾಖೆಯ ಸಭೆ ನಡೆಸಿದರು. ಸಭೆಯಲ್ಲಿ ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡಾಯ ಸೇರಿದಂತೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಈ ಕುರಿತಾಗಿ ಸುವರ್ಣಸೌಧದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Sudhakar) ಮಾಹಿತಿ ನೀಡಿದ್ದಾರೆ.
ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಧರಿಸಬೇಕು. ತಕ್ಷಣಕ್ಕೆ ಎಲ್ಲಾ ಕಡೆ ಸ್ಕ್ರೀನಿಂಗ್ ಮಾಡಲ್ಲ. ದೇಶದಿಂದ ಬರುವ ಶೇ.3ರಷ್ಟು ಜನರಿಗೆ ವಿಮಾನ ನಿಲ್ದಾಣದಲ್ಲಿ ರ್‍ಯಾಂಡಮ್ ಸ್ಯಾಂಪಲ್ ಪರೀಕ್ಷೆ ಮಾಡಲಾಗುವುದು ರಾಜ್ಯದಲ್ಲಿ ಸದ್ಯ 4 ಸಾವಿರ ಕೋವಿಡ್ ಟೆಸ್ಟ್ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕೋವಿಡ್ ಟೆಸ್ಟ್ ಪ್ರಮಾಣ ಹೆಚ್ಚಿಸುತ್ತೇವೆ. ಕೊರೊನಾ ರೂಪಾಂತರಿ ತಳಿ ವೇಗವಾಗಿ ಹರಡುವ ಮಾಹಿತಿಯಿದೆ. ಮತ್ತಷ್ಟು ವರದಿ ಬಂದ ನಂತರ ಅಧ್ಯಯನ ಮಾಡಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
Hon’ble CM Shri @BSBommai chaired a high-level meeting today to take stock of the Covid-19 situation and discuss measures to prevent and mitigate the spread of infection.
?Experts of Technical Advisory Committee briefed about prevailing global situation and new variants.
1/4 pic.twitter.com/FqNq1gz078
— Dr Sudhakar K (@mla_sudhakar) December 22, 2022
ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಕೊರೋನಾ ಭೀತಿ: ಕೊವಿಡ್ ನಿಯಮ ಜಾರಿಗೆ ಹೋಟೆಲ್ ಮಾಲೀಕರ ಸಂಘ ವಿರೋಧ
ಆದಷ್ಟು ಬೇಗ ಎಲ್ಲರೂ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು. ಜಿಲ್ಲಾಸ್ಪತ್ರೆಗಳಲ್ಲಿ ಕೊವಿಡ್ ಚಿಕಿತ್ಸೆಗೆ ಹಾಸಿಗೆ ಮೀಸಲಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಚಿಕಿತ್ಸೆಗೆ ಹಾಸಿಗೆ ಮೀಸಲಿಡಲಾಗಿದೆ. ಕೋವಿಡ್ ಕಡಿಮೆಯಾದ ಹಿನ್ನೆಲೆ ಲಸಿಕೆ ಪಡೆಯಲು ಮೀನಮೇಷ ಮಾಡಬಾರದು. ಎಲ್ಲರೂ ಬೂಸ್ಟರ್ ಡೋಸ್ ಪಡೆಯಬೇಕು. ಶೇಕಡಾ 20ರಷ್ಟು ಜನರು ಮಾತ್ರ ಬೂಸ್ಟರ್ ಡೋಸ್ ಪಡೆದಿದ್ದಾರೆ. ಎಲ್ಲಾ ಕಡೆ ಕ್ಯಾಂಪ್ ಮಾಡಿ ಬೂಸ್ಟರ್ ಡೋಸ್ ನೀಡಲು ನಿರ್ಧಾರ ಮಾಡಲಾಗಿದೆ.
ಬೂಸ್ಟರ್ ಡೋಸ್ ಲಸಿಕೆ ಪಡೆದರೆ ಯಾವುದೇ ಅಪಾಯ ಆಗುವುದಿಲ್ಲ. ಸೈಡ್ ಎಫೆಕ್ಟ್ಗೂ ಲಸಿಕೆಗೂ ಯಾವುದೇ ಸಂಬಂಧ ಇಲ್ಲ. ಇನ್ನು ಹೊಸ ವರ್ಷ, ಕ್ರಿಸ್ಮಸ್ ಆಚರಣೆಗೆ ಅನುಮತಿ ನೀಡುವ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಸಂಜೆಯೊಳಗೆ ಸ್ಪಷ್ಟವಾದ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ. ಗೈಡ್ಲೈನ್ಸ್ ಕುರಿತು ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿಸಿದರು.
ಹೊಸ ವರ್ಷ ಹಾಗೂ ಕ್ರಿಸ್ ಮಸ್ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಸಂಜೆವೊಳಗೆ ಸ್ಪಷ್ಟವಾದ ಮಾರ್ಗಸೂಚಿ ಮಾಡುತ್ತೇವೆ. ಸದ್ಯ ಅದರ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಒಳಾಂಗಣದಲ್ಲಿ ಮಾಸ್ಕ್ ಧರಿಸಬೇಕು ಎಂದರು. ಭಾರತ್ ಜೋಡೋ ಯಾತ್ರೆ ತಡೆಯಲು ಕೋವಿಡ್ ನೆಪ ಆರೋಪ ಮಾಡಿದ್ದು, ಕಳೆದ 3 ತಿಂಗಳಿಂದ ಕೋವಿಡ್ ಬಗ್ಗೆ ಯಾವುದೇ ಮಾತನಾಡಿಲ್ಲ. ಚೀನಾ, ಅಮೆರಿಕ ಸೇರಿದಂತೆ ಹಲವು ದೇಶದಲ್ಲಿ ಜಾಸ್ತಿಯಾಗುತ್ತಿದೆ. ಅಲ್ಲೆಲ್ಲ ನಾವು ಕೊರೊನಾ ಪ್ರಕರಣ ಹೆಚ್ಚಿಸಿದ್ವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಚಿವ ಡಾ.ಸುಧಾಕರ್ ಟಾಂಗ್ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:59 pm, Thu, 22 December 22