ಭ್ರಷ್ಟಾಚಾರ ಆರೋಪ: ಸಿದ್ದರಾಮಯ್ಯ ಸಂಪುಟದ ಮತ್ತೋರ್ವ ಸಚಿವ ವಿರುದ್ಧ ರಾಜ್ಯಪಾಲರಿಗೆ ದೂರು

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಕಂದಾಯ ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿನ ಅಕ್ರಮ ಜಮೀನು ವ್ಯವಹಾರದಲ್ಲಿ ಸಚಿವರ ಪಾತ್ರವಿದೆ ಎಂದು ಆರೋಪಿಸಲಾಗಿದೆ. ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸರ್ಕಾರ ವಿಫಲವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಭ್ರಷ್ಟಾಚಾರ ಆರೋಪ: ಸಿದ್ದರಾಮಯ್ಯ ಸಂಪುಟದ ಮತ್ತೋರ್ವ ಸಚಿವ ವಿರುದ್ಧ ರಾಜ್ಯಪಾಲರಿಗೆ ದೂರು
ಭ್ರಷ್ಟಾಚಾರ ಆರೋಪ: ಸಿದ್ದರಾಮಯ್ಯ ಸಂಪುಟದ ಮತ್ತೋರ್ವ ಸಚಿವ ವಿರುದ್ಧ ರಾಜ್ಯಪಾಲರಿಗೆ ದೂರು
Edited By:

Updated on: Jan 15, 2025 | 3:04 PM

ಬೆಂಗಳೂರು, ಜನವರಿ 15: ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಈ ಕುರಿತಾಗಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್​​ ಕಲ್ಲಹಳ್ಳಿ ದೂರು ನೀಡಿದ್ದಾರೆ. ಹಗರಣಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಧಿಕಾರಶಾಹಿ ಆಶಿಸ್ತಿನಂತಹ ಪ್ರಕರಣಗಳಿಗೆ ಕಡಿವಾಣ ಹಾಕಿ ಬಿಗಿ ಕ್ರಮಗಳನ್ನು ಕೈಗೊಳ್ಳದ ಸಚಿವ ಕೃಷ್ಣಬೈರೇಗೌಡ ಅವರು ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ದೂರು ನೀಡಿದರು ಸಹ ದೂರಿಗೆ ಸ್ಪಂದಿಸದೆ ಅಕ್ರಮ, ವ್ಯವಹಾರದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ರಕ್ಷಣೆ ಮಾಡುತ್ತಿರುವ ಸಚಿವರ ವಿರುದ್ಧ ಕ್ರಮ ಕೈಗೊಂಡು ಈ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸುವಂತೆ ಕೋರಿದ್ದಾರೆ.

ಇದನ್ನೂ ಓದಿ: ಕೃಷ್ಣ ಬೈರೇಗೌಡ ಭೇಟಿ ವೇಳೆ ಕರ್ತವ್ಯಕ್ಕೆ ಗೈರು, ಓರ್ವ ಅಧಿಕಾರಿ ಸಸ್ಪೆಂಡ್, 11 ಜನರಿಗೆ ನೋಟಿಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೆ ಸಂಖ್ಯೆ: 150 ರಲ್ಲಿ ಚೆನ್ನ ವೀರಯ್ಯ ಎನ್ನುವವರಿಗೆ ಎರಡು ಎಕರೆ ಸಾಗುವಳಿದಾರರಿಗೆ ಸರ್ಕಾರಿ ಜಮೀನನ್ನು ಸಾಗುವಳಿ ಮತ್ತು ಹಂಗಾಮಿ ಸಾಗುವಳಿ ಚೀಟಿಯನ್ನು ಮಂಜೂರು ಮಾಡಲಾಗಿದೆ. ಆದರೆ ಜಮೀನು ವ್ಯವಹಾರ ನಡೆದಿದ್ದು, ಸರ್ವೆ ನಂಬರ್ 150ರಲ್ಲಿರುವ ಜಮೀನು ಪೋಡಿ, ನಕ್ಷೆ ಆಗದೇ ಸಾಗುವಳಿದಾರರು ಅಕ್ರಮವಾಗಿ ಜಮೀನನ್ನು ಪಲ್ಟಿತ್ ಡೆವಲಪರ್ಸ್ ಎಲ್​ಎಲ್​ಪಿ ಕಂಪನಿಗೆ ಮಾರಾಟ ಮಾಡಿರುವುದಾಗಿ ಆರೋಪಿಸಿದ್ದಾರೆ.

ಸರ್ಕಾರದಿಂದ ಮಂಜೂರಾದ ಜಮೀನನ್ನು ಪೋಡಿ, ದುರಸ್ತಿ ಮಾಡದೇ ತಹಶೀಲ್ದಾರ್​​​​, ಉಪ‌ವಿಭಾಗಾಧಿಕಾರಿಗಳು ಪಲ್ಟಿತ್ ಡೆವಲಪರ್ಸ್ ಜೊತೆಗೆ ನೇರವಾಗಿ ಭಾಗಿಯಾಗಿ ಭ್ರಷ್ಟಾಚಾರ ಎಸಗಿರುವ ಇವರ ವಿರುದ್ಧ ಕೂಡ ಕಾನೂನು ಕ್ರಮಕೈಗೊಂಡು ಸರ್ಕಾರಿ ಜಮೀನನ್ನು ರಕ್ಷಿಸಬೇಕಿದೆ.

ಇದನ್ನೂ ಓದಿ: ಡೆಹ್ರಾಡೂನ್​​ನಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದ ಕೃಷ್ಣ ಬೈರೇಗೌಡ

ಈ ಪ್ರಕರಣದಲ್ಲಿ ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದರೆ ಹುಲಿಕುಂಟೆ ಗ್ರಾಮದ ಮೇಲ್ಕಂಡ ಸರ್ವೆ ನಂಬರ್ ಜಮೀನುಗಳು ಸರ್ಕಾರಿ ಗೋಮಾಳ ಆಗಿದ್ದು, ಈ ಜಮೀನನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಗರಣಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ಗೆ ದಿನೇಶ್​ ಕಲ್ಲಹಳ್ಳಿ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:58 pm, Wed, 15 January 25

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us