ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ: ಪ್ರಕರಣ ಮರು ವಿಚಾರಣೆಗೆ ಹೈಕೋರ್ಟ್ ಆದೇಶ

| Updated By: ಆಯೇಷಾ ಬಾನು

Updated on: Sep 07, 2022 | 11:54 AM

ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದ್ದು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಕೋರಿ ಹೈಕೋರ್ಟ್​ಗೆ ಬಿಎಸ್​ವೈ ಪರ ವಕೀಲ ಸಂದೀಪ್ ಪಾಟೀಲ್ ಮನವಿ ಮಾಡಿದ್ದಾರೆ.

ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ: ಪ್ರಕರಣ ಮರು ವಿಚಾರಣೆಗೆ ಹೈಕೋರ್ಟ್ ಆದೇಶ
ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ
Follow us on

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ. ಪ್ರಾಸಿಕ್ಯೂಷನ್​​ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾಗೊಂಡಿತ್ತು. ಸದ್ಯ ಈಗ ಹೈಕೋರ್ಟ್ ವಿಚಾರಣಾ ಕೋರ್ಟ್​​​ ವಜಾ ಆದೇಶ ರದ್ದುಪಡಿಸಿದೆ. ಪ್ರಕರಣ ಮರು ವಿಚಾರಣೆಗೆ ಆದೇಶಿಸಿದೆ.

ಬಿಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ,‌ ಶಶಿಧರ ಮರಡಿ, ಸಂಜಯ್​​ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್​.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರುಪಾಕ್ಷಪ್ಪ ಯಮಕನಮರಡಿ ವಿರುದ್ಧ ಕೇಸ್ ದಾಖಲಾಗಿತ್ತು. ದೂರುದಾರ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಅಮಿಕಸ್ ಕ್ಯೂರಿಯಾಗಿ ವೆಂಕಟೇಶ್ ಅರಬಟ್ಟಿ ವಾದಿಸಿದ್ದರು. ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಕೋರಿ ಹೈಕೋರ್ಟ್​ಗೆ ಬಿಎಸ್​ವೈ ಪರ ವಕೀಲ ಸಂದೀಪ್ ಪಾಟೀಲ್ ಮನವಿ ಮಾಡಿದ್ದಾರೆ. ಕಾಲಾವಕಾಶದ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಮಾನಿಸಲಿ ಎಂದು ಬಿ.ಎಸ್.ಯಡಿಯೂರಪ್ಪ ಪರ ವಕೀಲರಿಗೆ ಹೈಕೋರ್ಟ್ ಪ್ರತಿಕ್ರಿಯೆ ನೀಡಿದೆ.

ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್​ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು.  ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್​, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿತ್ತು.

ಅದೇ ವೇಳೆ, ಅರ್ಜಿಯನ್ನು ಮಾರ್ಪಡಿಸಿ ಸಂಬಂಧಿಸಿದ ಪೀಠಕ್ಕೆ ವರ್ಗಾಯಿಸಲು ರಿಜಿಸ್ಟ್ರಾರ್ ಜನರಲ್‌ರಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:45 am, Wed, 7 September 22