AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು KRIDL ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಆಗ್ರಹಿಸಿ ಸಿಎಂಗೆ ಶಾಸಕ ಅಶೋಕ್​​ ಕುಮಾರ್​​ ರೈ ಪತ್ರ

ಮಂಗಳೂರು KRIDL ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಸಮಗ್ರ ಇಲಾಖಾ ತನಿಖೆಗೆ ಆಗ್ರಹಿಸಿ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಸಿಎಂ ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದಿದ್ದಾರೆ. ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡಿ, ಶೇ.7ರಷ್ಟು ವರೆಗೆ ಹೆಚ್ಚುವರಿ ಹಣವನ್ನು ಪಡೆಯಲಾಗುತ್ತಿದೆ. ಈ ಬಗ್ಗೆ ಪ್ರಶ್ನಿಸಿದ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡಿರುವ ಬಗ್ಗೆ ಗಂಭೀರ ಆರೋಪಗಳು ಹಾಗೂ ದೂರುಗಳು ಬಂದಿರುತ್ತವೆ ಎಂದವರು ಪತ್ರದಲ್ಲಿ ತಿಳಿಸಿದ್ದಾರೆ.

ಮಂಗಳೂರು KRIDL ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಆಗ್ರಹಿಸಿ ಸಿಎಂಗೆ ಶಾಸಕ ಅಶೋಕ್​​ ಕುಮಾರ್​​ ರೈ ಪತ್ರ
ಸಿಎಂಗೆ ಶಾಸಕ ಅಶೋಕ್​​ ಕುಮಾರ್​​ ರೈ ಪತ್ರ Image Credit source: Tv9 Kannada
ಪ್ರಸನ್ನ ಗಾಂವ್ಕರ್​
| Edited By: |

Updated on:Aug 30, 2026 | 2:10 PM

Share

ಮುಖ್ಯಾಂಶಗಳು

  • KRIDL ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ
  • ಮಂಗಳೂರಿನ ಅಧಿಕಾರಿಗಳ ವಿರುದ್ಧ ಶಾಸಕರ ಪತ್ರ
  • ಸಿಎಂಗೆ ಪತ್ರ ಬರೆದ ಶಾಸಕ ಅಶೋಕ್ ಕುಮಾರ್​​ ರೈ

ಬೆಂಗಳೂರು/ಮಂಗಳೂರು, ಆಗಸ್ಟ್​​ 30: ಮಂಗಳೂರು ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ ಮಾಡಿ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್​​ ರೈ ಅವರು ಸಿಎಂ ಡಿ.ಕೆ.ಶಿವಕುಮಾರ್​​ಗೆ ಪತ್ರ ಬರೆದಿದ್ದಾರೆ. KRIDL ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ವಿರುದ್ಧ ಭ್ರಷ್ಟಾಚಾರ ನಡೆಸಿರುವ ಆರೋಪಗಳಿವೆ. ಹೀಗಾಗಿ ಈ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಅಧಿಕಾರಿಗಳನ್ನು ಅಮಾನತುಗೊಳಿಸಿ ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

ಅಶೋಕ್ ಕುಮಾರ್​​ ರೈ ಪತ್ರದಲ್ಲೇನಿದೆ?

ಮಂಗಳೂರು ಕೆ.ಆರ್.ಐ.ಡಿ.ಎಲ್. ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಮತ್ತು ಕಿರಿಯ ಇಂಜಿನಿಯರ್ ಪ್ರಜ್ವಲ್ ವಿರುದ್ಧ ಕರ್ತವ್ಯ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಹಾಗೂ ದೂರುಗಳು ಕೇಳಿಬಂದಿರುತ್ತವೆ. ವಿಶೇಷವಾಗಿ, ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇಲಾಖೆಯ ಸಚಿವರಿಗೆ ಮಾಸಿಕವಾಗಿ ಹಣ ಸಂದಾಯ ಮಾಡಬೇಕಾಗುತ್ತದೆ ಎಂದು ಹೇಳಿ, ಕೆ.ಆರ್.ಐ.ಡಿ.ಎಲ್. ಚಾರ್ಜ್ ಹೆಸರಿನಲ್ಲಿ ಶೇ.7ರಷ್ಟು ವರೆಗೆ ಹೆಚ್ಚುವರಿ ಹಣವನ್ನು ಪಡೆಯಲಾಗುತ್ತಿದೆ. ಈ ಬಗ್ಗೆ ಪ್ರಶ್ನಿಸಿದ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡಿರುವ ಬಗ್ಗೆ ಗಂಭೀರ ಆರೋಪಗಳು ಹಾಗೂ ದೂರುಗಳು ಬಂದಿರುತ್ತವೆ.

ಇದನ್ನೂ ಓದಿ:  ಬಿಜೆಪಿ ಮುಖಂಡರು, ಪಾಲಿಕೆ ಅಧಿಕಾರಿ ವಿರುದ್ಧ ಮರಗಳ್ಳತನ ಆರೋಪ: ಕಾಂಗ್ರೆಸ್​​ನಿಂದ ದೂರು

ಸಾರ್ವಜನಿಕ ಹಣದಿಂದ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಹಾಗೂ ನಿಯಮಾನುಸಾರ ಕಾರ್ಯನಿರ್ವಹಣೆ ಅತ್ಯಂತ ಅಗತ್ಯವಾಗಿರುತ್ತದೆ. ಆದರೆ, ಈ ಅಧಿಕಾರಿಗಳ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಸತ್ಯವಾಗಿದ್ದಲ್ಲಿ, ಅದು ಸಾರ್ವಜನಿಕ ಹಣದ ದುರುಪಯೋಗಕ್ಕೆ ಕಾರಣವಾಗುವುದಲ್ಲದೆ, ಇಲಾಖೆಯ ಘನತೆ ಹಾಗೂ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುವ ಗಂಭೀರ ವಿಷಯವಾಗಿದೆ. ಆದ್ದರಿಂದ, ಅಧಿಕಾರಿಗಳ ವಿರುದ್ಧ ಈಗಾಗಲೇ ಬಂದಿರುವ ದೂರುಗಳು ಮತ್ತು ಆರೋಪಗಳ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸುವಂತೆ ಮನವಿ ಮಾಡುತ್ತಿದ್ದೇನೆ. ಅಲ್ಲದೆ, ತನಿಖೆ ಪೂರ್ಣಗೊಳ್ಳುವವರೆಗೆ ಆರೋಪಗಳ ಗಂಭೀರತೆಯನ್ನು ಪರಿಗಣಿಸಿ, ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸುವುದು ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರುತ್ತೇನೆ.

ತನಿಖೆಯಲ್ಲಿ ಆರೋಪಗಳು, ಸಾಬೀತಾದಲ್ಲಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಅನ್ವಯಿಸುವ ಸೇವಾ ನಿಯಮಗಳು ಹಾಗೂ ಇಲಾಖಾ ನಿಯಮಾವಳಿಗಳನ್ವಯ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಸರ್ಕಾರದ ಹಣಕ್ಕೆ ನಷ್ಟ ಉಂಟಾಗಿರುವುದು ಅಥವಾ ಅಕ್ರಮವಾಗಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ದೃಢಪಟ್ನಲ್ಲಿ, ಅಂತಹ ಮೊತ್ತವನ್ನು ವಸೂಲಿ ಮಾಡುವುದರ ಜೊತೆಗೆ ಕಾನೂನುಬದ್ಧ ಕ್ರಮ ಜರುಗಿಸಬೇಕು ಎಂದು ಪತ್ರದಲ್ಲಿ ಅಶೋಕ್ ಕುಮಾರ್​​ ರೈ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:40 am, Sun, 30 August 26

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ