ಬೆಂಗಳೂರಿನಲ್ಲಿ ನಡೆಯುತ್ತಿದೆ ಬ್ರಾಂಡೆಡ್ ಸಿಗರೇಟ್, ಬಟ್ಟೆಗಳ ನಕಲು, ಅಂಗಡಿಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು ನಗರದಲ್ಲಿ ನೆಲೆಸಿರುವ ಒಂದಷ್ಟು ಮಂದಿ ಬ್ರಾಂಡೆಡ್ ವಸ್ತುಗಳು, ಬಟ್ಟೆಗಳನ್ನು ಖರೀದಿಸುತ್ತಾರೆ. ಅಂತಹವರು ಈ ಸುದ್ದಿಯನ್ನು ನೋಡಿದರೆ ಅಚ್ಚರಿಗೊಳ್ಳುವುದರಲ್ಲಿ ಸಂಶಯವೇ ಇಲ್ಲ. ಬೆಂಗಳೂರಿನಲ್ಲಿ ವಿಶ್ವಮಾನ್ಯ ಬ್ರಾಂಡ್ ಬಟ್ಟೆಗಳನ್ನು ನಕಲು ಮಾಡಿ ಮಾರಾಟ ಮಾಡುತ್ತಿರುವ ವಿಚಾರ ತಿಳಿದ ಸಿಸಿಬಿ ಪೊಲೀಸರು ಎರಡು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿದೆ ಬ್ರಾಂಡೆಡ್ ಸಿಗರೇಟ್, ಬಟ್ಟೆಗಳ ನಕಲು, ಅಂಗಡಿಗಳ ಮೇಲೆ ಸಿಸಿಬಿ ದಾಳಿ
ಬೆಂಗಳೂರಿನಲ್ಲಿ ಬ್ರಾಂಡೆಡ್ ಬಟ್ಟೆ, ಸಿಗರೇಟ್​ಗಳನ್ನು ನಕಲು ಮಾಡಿ ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಸಿಸಿಬಿ ದಾಳಿ
Follow us
Prajwal Kumar NY
| Updated By: Rakesh Nayak Manchi

Updated on:Nov 30, 2023 | 12:38 PM

ಬೆಂಗಳೂರು, ನ.30: ನಗರದಲ್ಲಿ (Bengaluru) ವಿಶ್ವಮಾನ್ಯ ಬ್ರಾಂಡ್ ಬಟ್ಟೆಗಳನ್ನು ನಕಲು ಮಾಡುತ್ತಿದ್ದ ಅಂಗಡಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ನೀವೆಲ್ಲಾ ಅಸಲಿ ಎಂದು ಅಂದುಕೊಂಡು ಬಳಸುತ್ತಿರುವ ಎಲ್ಲಾ ವಸ್ತುಗಳು ಕೂಡ ಅಸಲಿಯೇ ಎಂದು ನೀವು ಭಾವಿಸಿರಬಹುದು. ಆದರೆ, ನೀವು ಇಲ್ಲಿ ಖರೀದಿಸಿದ ಬಟ್ಟೆಗಳಾಗಿದ್ದರೆ ಒಂದು ಬಾರಿ ಪರೀಕ್ಷಿಸುವುದು ಉತ್ತಮ.

ಬೊಮ್ಮನಹಳ್ಳಿ ಮತ್ತು ಕೆಆರ್ ಮಾರ್ಕೆಟ್ ಬಳಿ ಗಾರ್ಮೆಂಟ್ಸ್ ಮಾದರಿಯಲ್ಲಿ ಹಲವಾರು ಜನರನ್ನು ಕೆಲಸಕ್ಕೆ ಇಟ್ಟುಕೊಂಡು ನಕಲಿ ಬ್ರಾಂಡ್ ಬಟ್ಟೆಗಳನ್ನು ತಯಾರು ಮಾಡಲಾಗುತ್ತಿತ್ತು. ಬೊಮ್ಮನಹಳ್ಳಿಯಲ್ಲಿ ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ ಸೇರಿದಂತೆ ವಿವಿಧ ಪ್ರತಿಷ್ಠಿತ ಬ್ರಾಂಡ್‌ಗಳ ನಕಲಿ ಬಟ್ಟೆಗಳನ್ನು ತಯಾರು ಮಾಡಲಾಗುತ್ತಿತ್ತು.

ನಂತರ ಇದೆಲ್ಲವೂ ಅಸಲಿ ಎಂದು ಸಾರ್ವಜನಿಕರನ್ನು ನಂಬಿಸಿ ಮಾರಾಟ ಮಾಡುತ್ತಿದ್ದರು. ಈ ವಿಚಾರ ತಿಳಿದ ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಟೇಲ್ ಎಕ್ಸಪೋರ್ಟ್ ಎಂದು ಕಂಪನಿ ಹೆಸರು ಇಟ್ಟುಕೊಂಡು ನಕಲು ದಂಧೆ ನಡೆಸುತ್ತಿದ್ದ ಭರತ್ ಕುಮಾರ್, ರಾಧ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಗ್ರಾಹಕರ ಅಸಲಿ ಬಂಗಾರ ಎಗರಿಸಿ ನಕಲಿ ಚಿನ್ನ ತಂದಿಟ್ಟ ಬ್ಯಾಂಕ್ ಸಿಬ್ಬಂದಿ: ಆಡಿಟ್​ನಲ್ಲಿ ಅಕ್ರಮ ಬಯಲಿಗೆ

ದಾಳಿ ವೇಳೆ ಒಂದು ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ಪೊಲೀಸರ ದಾಳಿ ವಿಚಾರ ತಿಳಿಯುತ್ತಿದ್ದಂತೆ ಮಾಲೀಕರು, ಇಟ್ಟುಕೊಂಡಿದ್ದ ಕೆಲಸಗಾರರನ್ನು ಒಂದು ಕಡೆ ಕೂಡಿ ಹಾಕಿದ್ದರು. ನಂತರ ಸಿಸಿಬಿ ಪೊಲೀಸರು ಬಿಡಿಸಿದ್ದಾರೆ.

ಕೆಆರ್ ಮಾರ್ಕೆಟ್ ಬಳಿ ಸ್ರೀಕೇಟ್ ಚೇಂಬರ್

ಕೆಆರ್ ಮಾರ್ಕೆಟ್ ಬಳಿ ನಡೆದ ಸಿಸಿಬಿ ದಾಳಿ ವೇಳೆ ಸೀಕ್ರೆಟ್ ಚೇಂಬರ್​ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಿದೇಶಿ ನಕಲಿ ಸಿಗರೇಟ್​ಗಳು ಪತ್ತೆಯಾಗಿವೆ. ಪ್ರತಿಷ್ಠಿತ ಐಟಿಸಿ ಬ್ರಾಂಡ್ ಸಹ ನಕಲಿ ಮಾಡಲಾಗಿದೆ. ಬ್ಲಾಕ್, ಮಾಂಡ್, ಸಿಗರ್ ಎಸ್ಸೆಲೈಟ್ಸ್ ಸೇರಿ ಹಲವಾರು ವಿದೇಶಿ ಬ್ರಾಂಡ್‌ಗಳು ನಕಲಿ ಮಾಡಿ ಮಾರಾಟ ಮಾಡಲಾಗುತ್ತಿತ್ತು.

ನಗರದ ವಿವಿಧ ಬೀಡಾ ಸ್ಟಾಲ್ ಪಾನ್ ಶಾಪ್​ಗಳಿಗೆ ಈ ನಕಲಿ ಬ್ರಾಂಡ್ ಸಿಗರೇಟ್​ಗಳನ್ನು ಪೂರೈಕೆ ಮಾಡಲಾಗುತ್ತಿತ್ತು. ಅರೋಪಿಗಳ ಬಳಿ ಅಕ್ರಮ ಹುಕ್ಕಾ ಜಾರ್​ಗಳು ಪತ್ತೆಯಾಗಿದ್ದು, ಘಟನೆ ಸಂಬಂಧ ಲಲಿತ್ ಎಂಬಾತನ ವಿರುದ್ಧ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Thu, 30 November 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ