ವಿಧಾನಸೌಧ ಮುಂಭಾಗ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದಂಪತಿ
ಬೆಂಗಳೂರಿನ ಜೆಜೆ ನಗರದ ನಿವಾಸಿಗಳಾದ ಶಾಯಿಸ್ತಾ ದಂಪತಿ ವಿಧಾನಸೌಧ ಮುಂಭಾಗದಲ್ಲೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಬೆಂಗಳೂರು, ಜನವರಿ 10: ವಿಧಾನಸೌಧ (Vidhana Soudha) ಮುಂಭಾಗದಲ್ಲೇ ಸೀಮೆಎಣ್ಣೆ ಸುರಿದುಕೊಂಡು ದಂಪತಿ (Cople) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಜೆಜೆ ನಗರದ ಶಾಯಿಸ್ತಾ ದಂಪತಿ ಬ್ಯಾಂಕ್‌ನಿಂದ ಸಾಲಪಡೆದಿದ್ದರು. ಸಾಲ ಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್ನವರು ಜಮೀನು ಹರಾಜು ಹಾಕಿದ್ದರು. ಇದರಿಂದ ಮನನೊಂದು ಶಾಯಿಸ್ತಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೆ ದಂಪತಿಯನ್ನು ತಡೆದಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ್ದ ದಂಪತಿ ಶಾಯಿಸ್ತಾ ಬಾನು, ಮೊಹಮ್ಮದ್ ಮುನಾಯಿದ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 309, 290ರ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಮುಚ್ಚಳಿಕೆ ಬರೆಸಿಕೊಂಡು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಿದ್ದಾರೆ.
ಪ್ರಕರಣ ಸಂಬಂಧ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿ, ನಾನು ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಈ ವಿಷಯವೇ ನನಗೆ ಗೊತ್ತಿಲ್ಲ ಎಂದು ಹೇಳಿದರು.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುತ್ತಿದೆ….
Published On - 12:46 pm, Wed, 10 January 24