ವಿಧಾನಸೌಧ ಮುಂಭಾಗ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದಂಪತಿ

| Updated By: ವಿವೇಕ ಬಿರಾದಾರ

Updated on: Jan 10, 2024 | 1:51 PM

ಬೆಂಗಳೂರಿನ ಜೆಜೆ ನಗರದ ನಿವಾಸಿಗಳಾದ ಶಾಯಿಸ್ತಾ ದಂಪತಿ ವಿಧಾನಸೌಧ ಮುಂಭಾಗದಲ್ಲೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬೆಂಗಳೂರು, ಜನವರಿ 10: ವಿಧಾನಸೌಧ (Vidhana Soudha) ಮುಂಭಾಗದಲ್ಲೇ ಸೀಮೆಎಣ್ಣೆ ಸುರಿದುಕೊಂಡು ದಂಪತಿ (Cople) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಜೆಜೆ ನಗರದ ಶಾಯಿಸ್ತಾ ದಂಪತಿ ಬ್ಯಾಂಕ್‌ನಿಂದ ಸಾಲಪಡೆದಿದ್ದರು. ಸಾಲ ಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್​ನವರು ಜಮೀನು ಹರಾಜು ಹಾಕಿದ್ದರು. ಇದರಿಂದ ಮನನೊಂದು ​​ಶಾಯಿಸ್ತಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೆ ದಂಪತಿಯನ್ನು ತಡೆದಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದ ದಂಪತಿ ಶಾಯಿಸ್ತಾ ಬಾನು, ಮೊಹಮ್ಮದ್ ಮುನಾಯಿದ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಐಪಿಸಿ ಸೆಕ್ಷನ್ 309, 290ರ ಅಡಿಯಲ್ಲಿ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಮುಚ್ಚಳಿಕೆ ಬರೆಸಿಕೊಂಡು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಿದ್ದಾರೆ.

ಪ್ರಕರಣ ಸಂಬಂಧ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿ, ನಾನು ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಈ ವಿಷಯವೇ ನನಗೆ ಗೊತ್ತಿಲ್ಲ ಎಂದು ಹೇಳಿದರು.

ಹೆಚ್ಚಿನ ಮಾಹಿತಿ ಅಪ್ಡೇಟ್​ ಮಾಡಲಾಗುತ್ತಿದೆ….​

Published On - 12:46 pm, Wed, 10 January 24