ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೋಮ್ಯಾನ್ಸ್ ವಿಡಿಯೋ ವೈರಲ್: ಛೀ, ಥೂ ಎಂದ ನೆಟ್ಟಿಗರು

ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜೋಡಿಯೊಂದು ಅಸಭ್ಯವಾಗಿ ವರ್ತಿಸಿದೆ ಎನ್ನಲಾಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಾರ್ವಜನಿಕವಾಗಿ ರೊಮ್ಯಾನ್ಸ್ ಮಾಡುತ್ತಾ ಅಸಭ್ಯವಾಗಿ ವರ್ತಿಸಿದ್ದಕ್ಕೆ ಆಕ್ಷೇಪವೂ ವ್ಯಕ್ತವಾಗಿದೆ. ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿಯೂ ದೆಹಲಿ ಮೆಟ್ರೋ ಮಾದರಿ ಶುರುವಾಗುತ್ತಿದೆಯೇ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ವೈರಲ್ ವಿಡಿಯೋ ಹಾಗೂ ವಿವರ ಇಲ್ಲಿದೆ.

ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೋಮ್ಯಾನ್ಸ್ ವಿಡಿಯೋ ವೈರಲ್: ಛೀ, ಥೂ ಎಂದ ನೆಟ್ಟಿಗರು
ವೈರಲ್ ವಿಡಿಯೋದ ಸ್ಕ್ರೀನ್​ಗ್ರ್ಯಾಬ್
Image Credit source: Twitter

Updated on: Apr 11, 2025 | 12:41 PM

ಬೆಂಗಳೂರು, ಏಪ್ರಿಲ್ 11: ಅಕ್ಕಪಕ್ಕ ಜನರಿದ್ದರೂ ಕ್ಯಾರೇ ಎನ್ನದೆ ಜೋಡಿಯೊಂದು ಅಸಭ್ಯವಾಗಿ ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ (Social Media) ವೈರಲ್ ಆಗುತ್ತಿದ್ದು, ಬೆಂಗಳೂರಿನ ಮೆಜೆಸ್ಟಿಕ್ ನಮ್ಮ ಮೆಟ್ರೋ (Namma Metro) ನಿಲ್ದಾಣದ ಪ್ಲಾಟ್​ಫಾರ್ಮ್​ 3 ರಲ್ಲಿ ನಡೆದ ಘಟನೆ ಇದು ಎನ್ನಲಾಗುತ್ತಿದೆ. ಮತ್ತೊಂದು ಮೂಲದ ಪ್ರಕಾರ, ಮಾದಾವರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ‘ಕರ್ನಾಟಕ ಪೋರ್ಟ್​​ಫೋಲಿಯೋ’ ಎಂಬ ಎಕ್ಸ್​​ ಹ್ಯಾಂಡಲ್​​ನಲ್ಲಿ, ‘‘ಬೆಂಗಳೂರು ಮೆಟ್ರೋ ಕೂಡ ದೆಹಲಿ ಮೆಟ್ರೋ ಸಂಸ್ಕೃತಿಯತ್ತ ಸಾಗುತ್ತಿದೆಯೇ?’’ ಎಂದು ಪ್ರಶ್ನಿಸಿ ಪೋಸ್ಟ್ ಮಾಡಲಾಗಿರುವ ಈ ವಿಡಿಯೋಗೆ (Viral Video) ಈಗ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ. ಜೋಡಿಯ ವರ್ತನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪೊಲೀಸರು ಅಥವಾ ಬಿಎಂಆರ್​ಸಿಎಲ್ ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ಯುವ ಜೋಡಿಯೊಂದು ಅಕ್ಕಪಕ್ಕ ಮಹಿಳೆಯರು, ಹಿರಿಯರಿದ್ದರೂ ಕ್ಯಾರೇ ಎನ್ನದೆ ಅಸಭ್ಯವಾಗಿ ವರ್ತಿಸಿರುವುದು ವಿಡಿಯೋದಲ್ಲಿದೆ. ಸುಮಾರು 1 ನಿಮಿಷ 30 ಸೆಕಂಡ್​ನ ವಿಡಿಯೋ ಈಗ ವೈರಲ್ ಆಗುತ್ತಿದೆ.

ಇದನ್ನೂ ಓದಿ
ಆನ್​ಲೈನ್​ ಬೆಟ್ಟಿಂಗ್, ಗೇಮಿಂಗ್ ಆ್ಯಪ್​​ಗೆ ಕಡಿವಾಣ: ಶೀಘ್ರ ಹೊಸ ಮಾನದಂಡ
ರಜೆಯೆಂದು ಮನೆಗೆ ಬೀಗ ಹಾಕಿ ಊರು, ಪ್ರವಾಸ ಹೋಗೋ ಮುನ್ನ ಪೊಲೀಸರ ಸಲಹೆ ಗಮನಿಸಿ
ಇಂದು, ನಾಳೆ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
ಬೆಂಗಳೂರು ಮೈಸೂರು ರೈಲು ಪ್ರಯಾಣಿಕರಿಗೆ ಸಂಕಷ್ಟ

ವೈರಲ್ ವಿಡಿಯೋ ಇಲ್ಲಿ ನೋಡಿ

ಎಕ್ಸ್​ ಸಂದೇಶದಲ್ಲೇನಿದೆ?

‘ಕರ್ನಾಟಕ ಪೋರ್ಟ್​​ಫೋಲಿಯೋ’ ಎಕ್ಸ್​ ಹ್ಯಾಂಡಲ್ ಸಂದೇಶದಲ್ಲಿ, ಜೋಡಿಯ ವರ್ತನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ ಬೆಂಗಳೂರು ಕೂಡ ದೆಹಲಿ ಮೆಟ್ರೋ ಸಂಸ್ಕೃತಿಯತ್ತ ಸಾಗುತ್ತಿದೆಯೇ? ನಮ್ಮ ಮೆಟ್ರೋ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಮುಜುಗರ ಉಂಟುಮಾಡುವ ಸನ್ನಿವೇಶ ಸೃಷ್ಟಿಯಾಯಿತು ಎಂದು ಉಲ್ಲೇಖಿಸಲಾಗಿದೆ.

ಈ ಘಟನೆಯು ಬೆಂಗಳೂರಿನಲ್ಲಿ ಸಭ್ಯತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಮಾಡುವುದನ್ನು ನೋಡುವುದು ಅತ್ಯಂತ ನಿರಾಶಾದಾಯಕ ಮತ್ತು ಕಳವಳಕಾರಿಯಾಗಿದೆ. ಮಾದಾವರ ಬಳಿಯ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇತ್ತೀಚೆಗೆ ನಡೆದ ಘಟನೆಯು ಅನೇಕರನ್ನು ಆಘಾತಗೊಳಿಸಿದೆ ಮತ್ತು ಮುಜುಗರಕ್ಕೀಡು ಮಾಡಿದೆ. ಒಬ್ಬ ಯುವಕ ತನ್ನ ಗೆಳತಿಯೊಂದಿಗೆ ಅತ್ಯಂತ ಅನುಚಿತ ವರ್ತನೆಯಲ್ಲಿ ತೊಡಗಿದ್ದಾನೆ. ಅವಳೊಂದಿಗೆ ಮೆಟ್ರೋಗೆ ಕಾಯುತ್ತಿದ್ದಾಗ ಆಕೆಯ ದಿರಿಸಿನೊಳಗೆ ಕೈಹಾಕಿ ಅಸಭ್ಯ ರೀತಿಯಲ್ಲಿ ವರ್ತಿಸಿರುವುದು ಕಂಡುಬಂದಿದೆ. ಇದು ವೈಯಕ್ತಿಕ ವಿಷಯವೇ ಆಗಿದ್ದರೂ, ವಾತ್ಸಲ್ಯ ಮತ್ತು ಅಸಭ್ಯತೆಯ ನಡುವೆ ಸ್ಪಷ್ಟವಾದ ಗೆರೆ ಅಥವಾ ವ್ಯತ್ಯಾಸ ಇದೆ. ಸಾರ್ವಜನಿಕ ಸಾರಿಗೆಗಾಗಿ ಉದ್ದೇಶಿಸಲಾದ ಜಾಗದಲ್ಲಿ ಆ ಗೆರೆಯನ್ನು ಎಂದಿಗೂ ದಾಟಬಾರದು. ಇನ್ನೂ ಹೆಚ್ಚು ನಿರಾಶಾದಾಯಕ ವಿಷಯವೆಂದರೆ, ಕೆಲವು ಯುವತಿಯರು ತಮ್ಮ ಸಂಗಾತಿಗಳಿಂದ ಅಂತಹ ನಡವಳಿಕೆಯನ್ನು ಸಹಿಸಿಕೊಳ್ಳುವ ಅಥವಾ ಪ್ರೋತ್ಸಾಹಿಸುವ ಮನೋಭಾವ ಕಾಣಿಸುತ್ತಿದೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂಬಂತೆ ವರ್ತಿಸುತ್ತಾರೆ. ಇದು ಧೈರ್ಯ ಅಥವಾ ಸ್ವಾತಂತ್ರ್ಯವಲ್ಲ – ಇದು ನಿರ್ಲಕ್ಷ್ಯ, ಅಗೌರವ ಮತ್ತು ಸಾಮಾಜಿಕ ಅರಿವಿನ ಕೊರತೆ ಎಂದು ‘ಕರ್ನಾಟಕ ಪೋರ್ಟ್​​ಫೋಲಿಯೋ’ ಎಕ್ಸ್​ ಹ್ಯಾಂಡಲ್ ಸಂದೇಶದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್ ಸೆಲೆಬ್ರೇಷನ್ ನೋಡಿ

ಬೆಂಗಳೂರು ಯಾವಾಗಲೂ ಪ್ರಗತಿಪರ, ಗೌರವಾನ್ವಿತ ಸಂಸ್ಕೃತಿಗೆ ಹೆಸರುವಾಸಿಯಾದ ನಗರವಾಗಿದೆ. ದುರದೃಷ್ಟವಶಾತ್, ಈ ರೀತಿಯ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿರುದ್ದುದೆ. ಅಧಿಕಾರಿಗಳು ಅಂತಹ ನಡವಳಿಕೆಯ ವಿರುದ್ಧ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕು ಮತ್ತು ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಸುರಕ್ಷಿತ, ಸ್ವಚ್ಛ ಮತ್ತು ಗೌರವಾನ್ವಿತವಾಗಿ ಉಳಿಯುವಂತೆ ಮಾದರಿಯನ್ನಾಗಿ ಮಾಡಿ ತೋರಿಸಬೇಕು ಎಂದು ಉಲ್ಲೇಖಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:19 am, Fri, 11 April 25