Suraj Reavanna: ಡಾ.ಸೂರಜ್ ರೇವಣ್ಣಗೆ ಹೈಕೋರ್ಟ್‌ನಿಂದ ಸಮನ್ಸ್ ಜಾರಿ
ವಿವಾಹದ ಮಾಹಿತಿ ಮುಚ್ಚಿಟ್ಟ ಆರೋಪ, ಪತ್ನಿಯ ಆಸ್ತಿ, ಆಭರಣದ ಮಾಹಿತಿ ನೀಡದ ಆರೋಪ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದನ್ನು ಅಸಿಂಧು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಸದ್ಯ ಈ ಕುರಿತು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರು: ಡಾ.ಸೂರಜ್ ರೇವಣ್ಣ(Suraj Reavanna) ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅಸಿಂಧು ಕೋರಿ ಹೈಕೋರ್ಟ್ಗೆ(High court) ಅರ್ಜಿ ಸಲ್ಲಿಸಲಾಗಿತ್ತು. ಎಲ್.ಹನುಮೇಗೌಡ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ಇಂದು(ಮಾರ್ಚ್ 11, ಶುಕ್ರವಾರ) ನಡೆದಿದೆ. ಅಸಮರ್ಪಕ ಮಾಹಿತಿಯುಳ್ಳ ನಾಮಪತ್ರ ಸಲ್ಲಿಕೆ ಆರೋಪ ಮಾಡಿದ್ದು, ವಿಚಾರಣೆ ನಂತರ ಡಾ.ಸೂರಜ್ ರೇವಣ್ಣಗೆ ಹೈಕೋರ್ಟ್‌ನಿಂದ ಸಮನ್ಸ್( summons) ಜಾರಿ ಮಾಡಿದೆ.
ವಿವಾಹದ ಮಾಹಿತಿ ಮುಚ್ಚಿಟ್ಟ ಆರೋಪ, ಪತ್ನಿಯ ಆಸ್ತಿ, ಆಭರಣದ ಮಾಹಿತಿ ನೀಡದ ಆರೋಪ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿ (ಮೇಲ್ಮನೆ) ಆಯ್ಕೆಯಾಗಿದ್ದನ್ನು ಅಸಿಂಧು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಸದ್ಯ ಈ ಕುರಿತು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಸಮನ್ಸ್ ಜಾರಿ ಮಾಡಿದೆ. ವಿಧಾನ ಪರಿಷತ್ ಸದಸ್ಯರಾಗಿ ಜನವರಿ 28 ಸೂರಜ್ ರೇವಣ್ಣ ಪ್ರಮಾಣವಚನ ಸ್ವೀಕರಿಸಿದ್ದರು.
ಈ ಹಿಂದೆ ಅಂದರೆ ಎಂಎಲ್ಸಿ ಚುನಾವಣೆಗೂ ಮುನ್ನವೇ ಸೂರಜ್ ರೇವಣ್ಣನವರ ಸ್ಪರ್ಧೆಗೆ ಆಕ್ಷೇಪ ವ್ಯಕ್ತವಾಗಿದೆ. ಸೂರಜ್ ರೇವಣ್ಣನವರ ನಾಮಪತ್ರವನ್ನು ತಿರಸ್ಕರಿಸುವಂತೆ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಕುಂದೂರು ಗ್ರಾಮ ಪಂಚಾಯ್ತಿ ಸದಸ್ಯ ಕೆ.ಎಲ್. ಹರೀಶ್ ಅವರು ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಎಂಎಲ್ಸಿ ಅಭ್ಯರ್ಥಿ ಸೂರಜ್ ರೇವಣ್ಣಗೆ ನೋಟಿಸ್ ನೀಡಲಾಗಿತ್ತು. ಚುನಾವಣಾ ಆಯೋಗಕ್ಕೂ ಹೈಕೋರ್ಟ್ ನೋಟಿಸ್ ನೀಡಿತ್ತು. ಸೂರಜ್ ರೇವಣ್ಣ ನಾಮಪತ್ರ ಸಲ್ಲಿಸುವಾಗ ಸಲ್ಲಿಸಿದ ಅಫಿಡವಿಟ್ನಲ್ಲಿ ತನ್ನ ಮದುವೆ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದಾರೆಂದು ಆರೋಪ ಕೇಳಿಬಂದಿತ್ತು. ತಮ್ಮ ಆಸ್ತಿಯನ್ನು ಮಾತ್ರ ಘೋಷಣೆ ಮಾಡಿರುವ ಸೂರಜ್ ರೇವಣ್ಣ ತಮ್ಮ ಪತ್ನಿ, ಆಕೆಯ ಆಸ್ತಿಯ ಮಾಹಿತಿ ನೀಡಿಲ್ಲವೆಂದು ಆರೋಪಿಸಲಾಗಿದತ್ತು. ಮದುವೆ ಕಾಲಂನಲ್ಲಿ ಅನ್ವಯ ಇಲ್ಲ ಎಂದು ಉಲ್ಲೇಖ ಮಾಡಲಾಗಿರುವುದರಿಂದ ಅವರ ನಾಮಪತ್ರ ತಿರಸ್ಕರಿಸುವಂತೆ ತಕರಾರು ಮಾಡಲಾಗಿತ್ತು. ಆದರೆ, ಚುನಾವಣಾಧಿಕಾರಿ ಆ ತಕರಾರನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಮತ್ತೆ ಈಗ ಸೂರಜ್ ರೇವಣ್ಣ ಅವರ ವಿಧಾನ ಪರಿಷತ್ ಸದಸ್ಯತ್ವದ ಕುರಿತು ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ:
ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಸೂರಜ್ ರೇವಣ್ಣ ಪ್ರಮಾಣ ವಚನ ಸ್ವೀಕಾರ
Published On - 9:08 pm, Fri, 11 March 22