ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ಹಿನ್ನೆಲೆ ಡಿಕೆ ಶಿವಕುಮಾರ್ಗೆ ಕೋರ್ಟ್ನಿಂದ ವಾರೆಂಟ್ ಜಾರಿ
ಕೊರೊನಾ ನಿಯಮ ಉಲ್ಲಂಘಿಸಿ ರೈತರ ಪ್ರತಿಭಟನೆ, ಪೆಟ್ರೋಲ್, ಡಿಸೇಲ್ ದರ ಏರಿಕೆ ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆ ಕೋರ್ಟ್ ನನಗೆ ವಾರೆಂಟ್ ಜಾರಿ ಮಾಡಿದೆ. -ಡಿಕೆ ಶಿವಕುಮಾರ್
ಬೆಂಗಳೂರು: ಕೊರೊನಾ ನಿಯಮ ಉಲ್ಲಂಘನೆ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ನ್ಯಾಯಾಲಯದಿಂದ ನೋಟಿಸ್ ಬಂದಿದೆ. ಕೊರೊನಾ ನಿಯಮ ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಸಂಬಂಧಿಸಿ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕೊರೊನಾ ನಿಯಮ ಉಲ್ಲಂಘಿಸಿ ರೈತರ ಪ್ರತಿಭಟನೆ, ಪೆಟ್ರೋಲ್, ಡಿಸೇಲ್ ದರ ಏರಿಕೆ ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆ ಕೋರ್ಟ್ ನನಗೆ ವಾರೆಂಟ್ ಜಾರಿ ಮಾಡಿದೆ. ಹೀಗಾಗಿ ಕೋರ್ಟ್ ಗೆ ಹೋಗುತ್ತಿದ್ದೇನೆ. ಆಮೇಲೆ ಮಾತನಾಡ್ತೀನಿ ಎಂದು ಡಿಕೆ ಶಿವಕುಮಾರ್ ತಿಳಿಸಿ ಕೋರ್ಟ್ನತ್ತ ಧಾವಿಸಿದ್ದಾರೆ.
ಸಿಎಂ ಮನೆಗೆ ಮುತ್ತಿಗೆ ವಿಚಾರ; ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ಸೇರಿ 36 ಜನರ ವಿರುದ್ಧ ಎಫ್ಐಆರ್ ದಾಖಲು ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah), ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಸೇರಿದಂತೆ 36 ಜನರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಏಪ್ರಿಲ್ 13ರಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಹೀಗಾಗಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 36 ಜನರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 103 ಐಪಿಸಿ ಸೆಕ್ಷನ್ 341, 143ರ ಅಡಿ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ: ಬೋರಿಸ್ ಜಾನ್ಸನ್- ನರೇಂದ್ರ ಮೋದಿ ಭೇಟಿ; ಭಾರತಕ್ಕೆ ಯುದ್ಧ ವಿಮಾನ ತಯಾರಿಕೆಗೆ ತರಬೇತಿ ನೀಡಲು ಮುಂದಾದ ಇಂಗ್ಲೆಂಡ್
Nuclear War: ಆವರಿಸುತ್ತಿದೆ ಅಣ್ವಸ್ತ್ರ ದಾಳಿಯ ಭೀತಿ: 5 ಕೋಟಿ ಜನರ ಸಾವಿನ ಆತಂಕ, ಇಡೀ ಜಗತ್ತಿಗೆ ಬರಗಾಲದ ಬಾಧೆ
Published On - 11:30 am, Fri, 22 April 22