ದಿ.ಜಯಲಲಿತಾ ಒಡವೆ ಹಿಂದಿರುಗಿಸಲು ದಿನಾಂಕ‌ ನಿಗದಿಪಡಿಸಿದ ಕೋರ್ಟ್: 6 ಟ್ರಂಕ್ ತರಲು ಸೂಚನೆ

Jayalalithaa: ತಮಿಳುನಾಡಿನ ಅನಭಿಷಿಕ್ತ ನಾಯಕಿ ದಿ. ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ಜಯಲಲಿತಾ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ‌ ಹಸ್ತಾಂತರಿಸಲು ಕರ್ನಾಟಕ ಹೈಕೋರ್ಟ್​​ ಮಾರ್ಚ್ 6 ಮತ್ತು 7ರಂದು ದಿನಾಂಕ‌ ನಿಗದಿಪಡಿಸಿದೆ. ಒಡವೆ ತೆಗೆದುಕೊಂಡು ಹೋಗಲು 6 ಟ್ರಂಕ್​ಗಳನ್ನು ತರುವಂತೆ ಕೋರ್ಟ್ ಸೂಚನೆ ನೀಡಿದೆ.

ದಿ.ಜಯಲಲಿತಾ ಒಡವೆ ಹಿಂದಿರುಗಿಸಲು ದಿನಾಂಕ‌ ನಿಗದಿಪಡಿಸಿದ ಕೋರ್ಟ್: 6 ಟ್ರಂಕ್ ತರಲು ಸೂಚನೆ
ದಿ.ಜಯಲಲಿತಾ
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on:Feb 19, 2024 | 7:40 PM

ಬೆಂಗಳೂರು, ಫೆಬ್ರವರಿ 19: ದಿ.ಜಯಲಲಿತಾ (Jayalalithaa) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ಜಯಲಲಿತಾ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ‌ ಹಸ್ತಾಂತರಿಸಲು ಕರ್ನಾಟಕ ಹೈಕೋರ್ಟ್​​ ಮಾರ್ಚ್ 6 ಮತ್ತು 7ರಂದು ದಿನಾಂಕ‌ ನಿಗದಿಪಡಿಸಿದೆ. ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕ ಮಾಡಲಾಗಿದೆ. ತಮಿಳುನಾಡು ಗೃಹ ಪ್ರಧಾನ ಕಾರ್ಯದರ್ಶಿ ಮತ್ತು ಐಜಿಪಿ ವಿಜಿಲೆನ್ಸ್ ಹಾಜರಿರಬೇಕು. ಒಡವೆ ತೆಗೆದುಕೊಂಡು ಹೋಗಲು 6 ಟ್ರಂಕ್​ಗಳನ್ನು ತರುವಂತೆ ಕೋರ್ಟ್ ಸೂಚನೆ ನೀಡಿದೆ. ವಿಡಿಯೋಗ್ರಾಫರ್, ಫೋಟೋಗ್ರಾಫರ್, ಎರಡೂ ದಿನಗಳು ಸಿಟಿ ಸಿವಿಲ್ ಕೋರ್ಟ್​ನಲ್ಲಿ ಭದ್ರತೆ ಒದಗಿಸುವಂತೆ ವಿಶೇಷ ನ್ಯಾಯಾಧೀಶ ಮೋಹನ್​ರಿಂದ ಸೂಚನೆ ನೀಡಲಾಗಿದೆ.

ಕರ್ನಾಟಕಕ್ಕೆ ಕೊಡಬೇಕಾದ‌ 5 ಕೋಟಿ ರೂ. ವ್ಯಾಜ್ಯ ಶುಲ್ಕ ಇನ್ನೂ ಪಾವತಿಯಾಗಿಲ್ಲ. ಕೋರ್ಟ್​ಗೆ ಎಸ್​ಪಿಪಿ ಕಿರಣ್ ಜವಳಿ ಮಾಹಿತಿ ನೀಡಿದ್ದು, ಮುಂದಿನ‌ ವಿಚಾರಣೆ ಮಾರ್ಚ್‌ 6ಕ್ಕೆ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಗೆ ಕೇಸ್​ನಲ್ಲಿ 4 ವರ್ಷ ಶಿಕ್ಷೆ ಅನುಭವಿಸಿದ ಶಶಿಕಲಾಗೆ ಜೈಲುವಾಸ ಅಂತ್ಯ, ಕೊರೊನಾ ಚಿಕಿತ್ಸೆ ಬಳಿಕ ರಿಲೀಸ್ ಆಗಲಿದ್ದಾರಾ ಚಿನ್ನಮ್ಮ?

1996ರಲ್ಲಿ ಜಯಲಲಿತಾ ಅವರು ಅಕ್ರಮ ಆಸ್ತಿಗಳಿಸಿದ್ದಾರೆಂಬ ಆರೋಪದಲ್ಲಿ ಸಿಬಿಐ ದಾಳಿ ಅಧಿಕಾರಿಗಳು ಮಾಡಿದ್ದರು. 1997ರಲ್ಲಿ ಪ್ರಕರಣದ ಚಾರ್ಜ್‌ಶೀಟ್‌ ಕೂಡ ಸಲ್ಲಿಕೆಯಾಗಿತ್ತು. ಇದರ ವಿಚಾರಣೆ ನಡೆದು ಶಿಕ್ಷೆ ಪ್ರಕಟವಾಗುವ ಮುನ್ನವೇ ಜಯಲಲಿತಾ ಅವರು 2016 ರಲ್ಲಿ‌ ಮೃತಪಟ್ಟಿದ್ದರು.

ಜಯಲಲಿತಾ ಅವರು 1991ರಿಂದ 96 ನಡುವೆ ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಚೆನ್ನೈನಲ್ಲಿ ಐಷಾರಾಮಿ ಬಂಗಲೆಗಳನ್ನು ಹೊಂದಿದ್ದರು, ಹೈದರಾಬಾದ್‌ ಬಳಿ ಫಾರ್ಮ್‌ ಹೌಸ್‌, ತಮಿಳುನಾಡಿನ ನೀಲಗಿರಿ ಪ್ರದೇಶದಲ್ಲಿ ಭಾರಿ ಚಹಾ ತೋಟ, ಬೆಲೆಬಾಳುವ ಆಭರಣ, ಕಾರ್ಖಾನೆಗಳು, ಬ್ಯಾಂಕ್‌ ಖಾತೆಗಳಲ್ಲಿ ಸಂಪತ್ತು ಕ್ರೋಢೀಕರಣ, ಐಷಾರಾಮಿ ಕಾರುಗಳನ್ನು ಹೊಂದಿದ್ದರು.

ಇದನ್ನೂ ಓದಿ: ಶಶಿಕಲಾ ನಟರಾಜನ್​, ಇಳವರಸಿ ವಿರುದ್ಧ ಜಾಮೀನು ರಹಿತ ಬಂಧನ​ ವಾರೆಂಟ್ ಜಾರಿ

ಜೆ.ಜಯಲಲಿತಾ ಜತೆ ಸೇರಿ ಅಕ್ರಮ ಆಸ್ತಿ ಸಂಪಾದನೆಗೆ ಶಶಿಕಲಾ ಸಂಚು ನಡೆಸಿದ್ದರು. ಇತರೆ ಅಪರಾಧಿಗಳೊಂದಿಗೆ ಸೇರಿ ಒಳಸಂಚು ನಡೆಸಿದ್ದ ಶಶಿಕಲಾ, ಜಯಾ ಹಣದಿಂದಲೇ ಸಾವಿರಾರು ಎಕರೆ ಭೂಮಿ ಖರೀದಿಸಿದ್ದರು. ವಿವಿಧ ಕಂಪನಿಗಳು, ವೈಯಕ್ತಿಕ ಹೆಸರಿನಲ್ಲಿ ಜಮೀನು ಖರೀದಿಸಿದ್ದರು. ಜಯಲಲಿತಾ ಶಶಿಕಲಾರನ್ನು ಇರಿಸಿಕೊಂಡಿದ್ದಕ್ಕೆ ಕಾರಣವಿಲ್ಲ, ಮಾನವೀಯ ಅಥವಾ ಸಾಮಾಜಿಕ ಕಾರಣವಾಗಲೀ ಇಲ್ಲ. ಜಯಲಲಿತಾ ಆಸ್ತಿ ಹಂಚಿಕೊಳ್ಳಲೆಂದೇ ಇವರೆಲ್ಲರೂ ಜೊತೆಯಲ್ಲಿ ವಾಸವಾಗಿದ್ದರು ಎಂದು ಸುಪ್ರೀಂಕೋರ್ಟ್ ತಿಳಿಸಿತ್ತು.

ಜಯಲಲಿತಾ ಗಳಿಸಿದ ಅಕ್ರಮ ಹಣ ವರ್ಗಾವಣೆಗೆ ಅಪರಾಧಿಗಳು ಸಂಚು ನಡೆಸಿದ್ದರು. ಅಕ್ರಮ ಹಣವನ್ನು ವಿವಿಧ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದರು. ಒಬ್ಬರ ಖಾತೆಯಿಂದ ಮತ್ತೊಬ್ಬರ ಖಾತೆಗೆ ಹಣ ವರ್ಗಾವಣೆಯಾಗಿತ್ತು. ಈ ಹಣದಿಂದಲೇ ಅಪರಾಧಿಗಳು ಅಕ್ರಮವಾಗಿ ಆಸ್ತಿ ಗಳಿಸಿದ್ದರು. ಅಪರಾಧಿಗಳು ಒಳಸಂಚಿನಲ್ಲಿ ಭಾಗಿಯಾಗಿದ್ದಕ್ಕೆ ಇದು ಸಾಕ್ಷಿ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 pm, Mon, 19 February 24

ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಬೆಂಗಳೂರಿನ ಬಯೋ ಇನ್ನೋವೇಶನ್ ಸೆಂಟರ್​ನಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಬಯೋ ಇನ್ನೋವೇಶನ್ ಸೆಂಟರ್​ನಲ್ಲಿ ಅಗ್ನಿ ಅವಘಡ
ಬಿಗ್ ಬಾಸ್ ಮುಗಿದ ಬಳಿಕ ಎಲ್​ಎಲ್​ಬಿ ಓದಲು ರೆಡಿ ಆದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮುಗಿದ ಬಳಿಕ ಎಲ್​ಎಲ್​ಬಿ ಓದಲು ರೆಡಿ ಆದ ಚೈತ್ರಾ ಕುಂದಾಪುರ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್​​ಗೆ ಚಿಕಿತ್ಸೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್​​ಗೆ ಚಿಕಿತ್ಸೆ
ಕಾರು ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಬೆನ್ನು ಮೂಳೆ ಮುರಿತ!
ಕಾರು ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಬೆನ್ನು ಮೂಳೆ ಮುರಿತ!
ಮಂಡ್ಯ: ಶಿವಲಿಂಗಕ್ಕೆ ಸ್ಪರ್ಶಿಸದ ಸೂರ್ಯ ರಶ್ಮಿ, ಕಾದಿದೆಯಾ ಗಂಡಾಂತರ?
ಮಂಡ್ಯ: ಶಿವಲಿಂಗಕ್ಕೆ ಸ್ಪರ್ಶಿಸದ ಸೂರ್ಯ ರಶ್ಮಿ, ಕಾದಿದೆಯಾ ಗಂಡಾಂತರ?
ರನೌಟ್​ನೊಂದಿಗೆ ವಿದೇಶಿ ಲೀಗ್ ಆರಂಭಿಸಿದ ದಿನೇಶ್ ಕಾರ್ತಿಕ್
ರನೌಟ್​ನೊಂದಿಗೆ ವಿದೇಶಿ ಲೀಗ್ ಆರಂಭಿಸಿದ ದಿನೇಶ್ ಕಾರ್ತಿಕ್
‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು
‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ