ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್​ ಸೋಂಕಿತ ನಾಪತ್ತೆ; ಮಾಹಿತಿ ಸಂಗ್ರಹಿಸಿ ಹುಡುಕಾಡುತ್ತಿರುವ ಪೊಲೀಸರು

ಬೆಂಗಳೂರಿನಲ್ಲಿ ಮೂವರಿಗೆ ಡೆಲ್ಟಾ ಪ್ಲಸ್ ಕೊರೊನಾ ದೃಢವಾಗಿದ್ದು, ಇಬ್ಬರು ಸೋಂಕಿತರು ನಂದಿನಿ ಲೇಔಟ್‌ನಲ್ಲಿ ಇದ್ದಾರೆ. ಆದರೆ, ಬೊಮ್ಮನಹಳ್ಳಿಯ 29 ವರ್ಷದ ವ್ಯಕ್ತಿಗೆ ಡೆಲ್ಟಾ ಪ್ಲಸ್ ದೃಢವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್​ ಸೋಂಕಿತ ನಾಪತ್ತೆ; ಮಾಹಿತಿ ಸಂಗ್ರಹಿಸಿ ಹುಡುಕಾಡುತ್ತಿರುವ ಪೊಲೀಸರು
ಕೊವಿಡ್-19
Follow us
TV9 Web
| Updated By: Skanda

Updated on: Aug 07, 2021 | 7:53 AM

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳ (Covid 19 Cases) ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಮೂರನೇ ಅಲೆಯ ಭೀತಿ ತಲೆದೋರಿದೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಕೆಲ ತಜ್ಞರು ಲಾಕ್​ಡೌನ್ (Lockdown)​ ಸಡಿಲಿಸಿದ ಕಾರಣ ಜನರ ಓಡಾಟ ಹೆಚ್ಚಾಗಿ ಎರಡನೇ ಅಲೆಯೇ ಉಲ್ಬಣಿಸಿದೆ. ಇದು ಮೂರನೇ ಅಲೆ ಅಲ್ಲ ಎಂದು ಹೇಳಿದ್ದಾರೆ. ಇತ್ತ ಸೋಂಕು ನಿಯಂತ್ರಣದ ಸಲುವಾಗಿ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ (Weekend Curfew) ಘೋಷಿಸಿದ್ದು, ರಾಜ್ಯಾದ್ಯಂತ ನೈಟ್​ ಕರ್ಫ್ಯೂ (Night Curfew) ಜಾರಿ ಮಾಡಿದೆ. ಏತನ್ಮಧ್ಯೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂವರಿಗೆ ಡೆಲ್ಟಾ ಪ್ಲಸ್ (Delta Plus) ಕೊರೊನಾ ದೃಢವಾಗಿದ್ದು, ಸೋಂಕಿತರ ಪೈಕಿ ಓರ್ವ ವ್ಯಕ್ತಿ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿರುವುದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಮೂವರಿಗೆ ಡೆಲ್ಟಾ ಪ್ಲಸ್ ಕೊರೊನಾ ದೃಢವಾಗಿದ್ದು, ಇಬ್ಬರು ಸೋಂಕಿತರು ನಂದಿನಿ ಲೇಔಟ್‌ನಲ್ಲಿ ಇದ್ದಾರೆ. ಆದರೆ, ಬೊಮ್ಮನಹಳ್ಳಿಯ 29 ವರ್ಷದ ವ್ಯಕ್ತಿಗೆ ಡೆಲ್ಟಾ ಪ್ಲಸ್ ದೃಢವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದಾರೆ. ಜುಲೈ 14ರಂದು ವ್ಯಕ್ತಿಗೆ ಡೆಲ್ಟಾ ಪ್ಲಸ್ ಪಾಸಿಟಿವ್ ಇರುವ ಮಾಹಿತಿ ಲಭ್ಯವಾಗಿದೆ. ಆದರೆ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವ ಅವರು ಎಷ್ಟೇ ಹುಡುಕಾಡಿದರೂ ಪತ್ತೆಯಾಗದಿರುವುದು ಪೊಲೀಸರಿಗೆ ತಲೆನೋವಾಗಿದೆ. ಇದೀಗ ನಾಪತ್ತೆಯಾಗಿರುವ ಸೋಂಕಿತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸೋಂಕಿತನ ಮಾಹಿತಿ ಕಲೆ ಹಾಕಿರುವ ಪೊಲೀಸರು, ಆತ ಎಲ್ಲಿಗೆ ತೆರಳಿರುವ ಸಾಧ್ಯತೆ ಇದೆ ಎಂದು ತಲೆ ಕೆಡಿಸಿಕೊಂಡಿದ್ದಾರೆ.

ವೀಕೆಂಡ್​ ಕರ್ಫ್ಯೂ ಜಾರಿಗೆ ವಿರೋಧ ಮೈಸೂರು: ಮೈಸೂರಿನಲ್ಲಿ ರಾಜ್ಯ ಸರ್ಕಾರದ ವೀಕೆಂಡ್ ಕರ್ಫ್ಯೂ ಆದೇಶದ ವಿರುದ್ಧ ವರ್ತಕರು, ಹೋಟೆಲ್ ಮಾಲೀಕರ ಸಂಘ ಹಾಗೂ ವಿವಿಧ ಸಂಘಸಂಸ್ಥೆಗಳು ಧ್ವನಿಯೆತ್ತಿದ್ದು, ಗಡಿಗಳನ್ನು ಬಂದ್ ಮಾಡಿ‌, ನಗರವನ್ನು ಬಂದ್ ಮಾಡಬೇಡಿ ಎಂದು ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಕೈ ಜೋಡಿಸಿದ್ದು, ವೀಕೆಂಡ್ ಕರ್ಫ್ಯೂ ಪಾಲನೆಗೆ ಸಹಕಾರ ನೀಡದೇ ಇರಲು ನಿರ್ಧರಿಸಿದ್ದಾರೆ. ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಗಡಿಗಳನ್ನು ಬಂದ್ ಮಾಡಿ‌ ಆದರೆ ನಗರವನ್ನು ಬಂದ್ ಮಾಡಬೇಡಿ ಎಂದು ಅಭಿಪ್ರಾಯಪಟ್ಟಿರುವ ಅವರು ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ವ್ಯಾಪಾರ ವಹಿವಾಟು ಚಟುವಟಿಕೆಗಳನ್ನು ಬಂದ್​ ಮಾಡುವುದರ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: ವೀಕೆಂಡ್​ ಕರ್ಫ್ಯೂ: ಯಾವ ಯಾವ ಜಿಲ್ಲೆಗಳಲ್ಲಿ ಏನು ಕ್ರಮ? ಮನೆಯಿಂದ ಹೊರಬರುವ ಮುನ್ನ ಗಮನಿಸಿ 

ಗಡಿಗಳನ್ನು ಬಂದ್​ ಮಾಡಿ, ನಗರವನ್ನಲ್ಲ; ವೀಕೆಂಡ್​ ಕರ್ಫ್ಯೂ ಜಾರಿಗೆ ವರ್ತಕರು, ವಿವಿಧ ಸಂಘ ಸಂಸ್ಥೆಗಳ ವಿರೋಧ

(Covid 19 Delta Plus infected person escaped in Bengaluru)

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ