ಕೋವಿಡ್ ಪರಿಣಾಮ: ಬೆಂಗಳೂರಿನ ಶೇ 30ರಷ್ಟು ಮಂದಿಯಲ್ಲಿ ಹೆಚ್ಚಾದ ಗೊರಕೆ ಸಮಸ್ಯೆ

ನಗರ ಪ್ರದೇಶದ ಜನರು ಹೆಚ್ಚಾಗಿ ವ್ಯಾಯಮ ಮತ್ತು ದೈಹಿಕ ಕಲಸ ಮಾಡುತ್ತಿಲ್ಲ. ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದು ಇದರಿಂದ ಅಧಿಕ ತೂಕದಂಥ ಸಮಸ್ಯೆ ಎದುರಾಗುತ್ತಿದೆ. ಹೆಚ್ಚು ಧೂಮಪಾನ ಮಾಡುವುದು, ಮದ್ಯಪಾನ ಮಾಡುವುದರಿಂದ ಕೊರೊನಾ ನಂತರ ಗೊರಕೆ ಅಭ್ಯಾಸ ಹೆಚ್ಚಾಗುತ್ತಿದೆ ಎಂದೂ ವೈದ್ಯರು ಹೇಳಿದ್ದಾರೆ.

ಕೋವಿಡ್ ಪರಿಣಾಮ: ಬೆಂಗಳೂರಿನ ಶೇ 30ರಷ್ಟು ಮಂದಿಯಲ್ಲಿ ಹೆಚ್ಚಾದ ಗೊರಕೆ ಸಮಸ್ಯೆ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Jan 11, 2024 | 12:37 PM

ಬೆಂಗಳೂರು, ಜನವರಿ 11: ಕೋವಿಡ್ ಸೋಂಕಿನ (Covid 19) ಪರಿಣಾಮ ಬೆಂಗಳೂರಿನ ಜನರಲ್ಲಿ ಗೊರಕೆ ಸಮಸ್ಯೆ (Snoring problem) ಹೆಚ್ಚಾಗುತ್ತಿರುವ ಬಗ್ಗೆ ವರದಿಯಾಗಿದೆ. ಕೊರೊನಾ ಬಳಿಕ ರಾಜಧಾನಿ ಬೆಂಗಳೂರಿನ (Bengaluru) ಶೇ 30 ರಷ್ಟು ಜನರಲ್ಲಿ ಗೊರಕೆ ಸಮಸ್ಯೆ ಕಾಣಿಸಿದೆ. ಇದು ಗೊರಕೆಗಷ್ಟೇ ಸೀಮಿತವಾಗದೆ, ಹೃದಯ ಸಮಸ್ಯೆ ಹಾಗೂ ಹೃದಯಸಂಬಂಧಿ ಕಾಯಿಲೆ ಬರುವ ಸಾಧ್ಯತೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ಗೊರಕೆ ಸಮಸ್ಯೆ ಶುರುವಾದವರು ಅಥವಾ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಇದೀಗ ಗೊರಕೆ ಸಮಸ್ಯೆ ಆರಂಭವಾಗಿದ್ದರೆ ನಿರ್ಲಕ್ಷ್ಯ ಮಾಡಬಾರದು ಎಂದು ಅವರು ಹೇಳಿದ್ದಾರೆ.

ನಗರದಲ್ಲಿ ಹೆಚ್ಚು ಜನರು ನಿಂತಲ್ಲೇ, ಕುಳಿತಲ್ಲೇ ಗೊರಕೆ ಹೊಡೆಯುವುದು ಹಲವೆಡೆ ಕಂಡುಬಂದಿದೆ. ಬಸ್, ಟ್ರೈನ್, ವೈಟಿಂಗ್ ರೂಮ್, ಆಫೀಸ್, ಕ್ಲಾಸ್ ಹೀಗೆ ಜನರು ತಾವಿದ್ದಲ್ಲಿಯೇ ನಿದ್ದೆಗೆ ಜಾರುವುದು ಮತ್ತು ಗೊರಕೆ ಹೊಡೆಯುವುದು ಕಾಣಿಸುತ್ತಿದ್ದು, ಇದು ಆರೋಗ್ಯಕ್ಕೆ ಹಾನಿಕಾರಕ ಎಂದು ವೈದ್ಯರು ಹೇಳಿದ್ದಾರೆ.

ಗ್ರಾಮೀಣ ಭಾಗಕ್ಕೆ ಹೋಲಿಕೆ ಮಾಡಿದರೆ ನಗರ ಪ್ರದೇಶದ ಜನರು ಹೆಚ್ಚು ಗೊರಕೆ ಸಮಸ್ಯೆ ಅನಭವಿಸುತ್ತಿದ್ದಾರೆ. ಎಷ್ಟೋ ಮಂದಿ ಇದನ್ನು ಸಾಮಾನ್ಯ ಗೊರಕೆ ಎಂದು ನಿರ್ಲಕ್ಷ್ಯ ವಹಿಸಿದ್ದು ನಿದ್ರೆಯ ಸಮಸ್ಯೆಗೆ ಕಾರಣವಾಗಿದೆ ಎನ್ನಲಾಗಿದೆ.

ನಗರ ಪ್ರದೇಶದ ಜನರು ಹೆಚ್ಚಾಗಿ ವ್ಯಾಯಮ ಮತ್ತು ದೈಹಿಕ ಕಲಸ ಮಾಡುತ್ತಿಲ್ಲ. ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದು ಇದರಿಂದ ಅಧಿಕ ತೂಕದಂಥ ಸಮಸ್ಯೆ ಎದುರಾಗುತ್ತಿದೆ. ಹೆಚ್ಚು ಧೂಮಪಾನ ಮಾಡುವುದು, ಮದ್ಯಪಾನ ಮಾಡುವುದರಿಂದ ಗೊರಕೆ ಅಭ್ಯಾಸ ಹೆಚ್ಚಾಗುತ್ತಿದೆ ಎಂದೂ ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೊನಾ ದೃಢ: ಒಟ್ಟು 974 ಜನರಲ್ಲಿ ಸೋಂಕು ಸಕ್ರಿಯ

ಗೊರಕೆ ಸಮಸ್ಯೆಯಿಂದ ಬೇಸತ್ತು ಸಾಕಷ್ಟು ಜನರು ಸ್ಲೀಪಿಂಗ್ ಕ್ಲಿನಿಕ್​ನಲ್ಲಿ ಚಿಕಿತ್ಸೆಗೆ ಮುಂದಾಗುತ್ತಿದ್ದಾರೆ. ಇನ್ನು ಗೊರಕೆಯಿಂದ ನೀದ್ರಾಹೀನತೆ, ನಿದ್ದೆಯ ಗುಣಮಟ್ಟ ಕಡಿಮೆಯಾಗುವ ಸಮಸ್ಯೆ ಎದುರಾಗುತ್ತಿದೆ. ಅಧಿಕ ರಕ್ತದೊತ್ತಡ, ಮಧುಮೇಹ, ಹೃದಯದ ತೊಂದರೆಗಳು, ಚಯಾಪಚಯ ಕ್ರಿಯೆಯ ಕಾಯಿಲೆಗಳು, ಜೀವನ ಗುಣಮಟ್ಟ ಕುಸಿತದಂತಹ ಗಂಭೀರ ಸಮಸ್ಯೆಗಳು ಎದುರಾಗುತ್ತಿದ್ದು ನಿರ್ಲಕ್ಷ್ಯವಹಿಸದ್ದಂತೆ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ