AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: 25 ಸಾವಿರ ದಾಟಿ ಸೋಂಕು, ಪಾಸಿಟಿವಿಟಿ ಪ್ರಮಾಣ ಶೇ 12

Coronavirus Infections: ಕರ್ನಾಟಕದಲ್ಲಿ ಪ್ರಸ್ತುತ 1,15,733 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 12.39 ಇದೆ. ಬೆಂಗಳೂರಿನ 18,374 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

Covid 19 Karnataka Update: 25 ಸಾವಿರ ದಾಟಿ ಸೋಂಕು, ಪಾಸಿಟಿವಿಟಿ ಪ್ರಮಾಣ ಶೇ 12
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 13, 2022 | 8:01 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಒಂದೇಸಮನೆ ಹೆಚ್ಚಾಗುತ್ತಿದೆ. ಗುರುವಾರ (ಜ.13) ರಾಜ್ಯದಲ್ಲಿ ಒಟ್ಟು 25,005 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ. 2363 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 1,15,733 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 12.39 ಇದೆ. ಸೋಂಕಿನಿಂದ ಸಾಯುವವರ ಪ್ರಮಾಣ ಶೇ 0.03 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 31,24,524 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,70,365 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 38,397 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ ಎಂದಿನಂತೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿಯೇ ಅತಿಹೆಚ್ಚು ವರದಿಯಾಗಿದೆ. ಬೆಂಗಳೂರಿನ 18,374 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1132 ಜನರು ಚೇತರಿಸಿಕೊಂಡಿದ್ದಾರೆ. ಮೂವರು ಮೃತಪಟ್ಟಿದ್ದಾರೆ. ನಗರದಲ್ಲಿ ಪ್ರಸ್ತುತ 90,893 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 16,436 ಜನರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ 13,53,331 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,46,001 ಜನರು ಚೇತರಿಸಿಕೊಂಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬಾಗಲಕೋಟೆ 5, ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ಚಿತ್ರದುರ್ಗ 78, ದಕ್ಷಿಣ ಕನ್ನಡ 625, ದಾವಣಗೆರೆ 92, ಧಾರವಾಡ 399, ಗದಗ 69, ಹಾಸನ 490, ಹಾವೇರಿ 19, ಕಲಬುರ್ಗಿ 346, ಕೊಡಗು 72, ಕೋಲಾರ 293, ಕೊಪ್ಪಳ 32, ಮಂಡ್ಯ 406, ಮೈಸೂರು 695, ರಾಯಚೂರು 122, ರಾಮನಗರ 112, ಶಿವಮೊಗ್ಗ 212, ತುಮಕೂರು 547, ಉಡುಪಿ 379, ಉತ್ತರ ಕನ್ನಡ 250, ವಿಜಯಪುರ 39, ಯಾದಗಿರಿ 16.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರದಲ್ಲಿ ಮೂವರು, ಕಲಬುರ್ಗಿ, ಮೈಸೂರು, ತುಮಕೂರು, ವಿಜಯಪುರ ಮತ್ತು ಬೆಳಗಾವಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ‘ಕೊರೊನಾ ಸುಳ್ಳು, ಇದೊಂದು ಮೆಡಿಕಲ್ ಮಾಫಿಯಾ’; ಸಂಚಲನ ಸೃಷ್ಟಿಸಿದ ಅಗ್ನಿ ಶ್ರೀಧರ್​​ ಹೇಳಿಕೆ ಇದನ್ನೂ ಓದಿ: Coronavirus: ಬೆಂಗಳೂರು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೊರೊನಾ ಮಾರ್ಗಸೂಚಿ ಬಿಡುಗಡೆ, ಕೊಪ್ಪಳ ಗವಿಮಠ ಜಾತ್ರೆ ರದ್ದು

Published On - 7:59 pm, Thu, 13 January 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ