Covid 19 Karnataka Update: 8000 ದಾಟಿತು ಸೋಂಕಿತರ ಸಂಖ್ಯೆ, ಪಾಸಿಟಿವಿಟಿ ಪ್ರಮಾಣ ಶೇ 4ಕ್ಕೂ ಹೆಚ್ಚು
ಕರ್ನಾಟಕದ ಪಾಸಿಟಿವಿಟಿ ಪ್ರಮಾಣ ಶೇ 4.15 ಇದ್ದು, ಸೋಂಕಿನಿಂದ ಮೃತಪಡುವವರ ಪ್ರಮಾಣ ಶೇ 0.04 ಇದೆ. ರಾಜ್ಯದಲ್ಲಿ ಪ್ರಸ್ತುತ 30,113 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ (ಜ.7) ಒಂದೇ ದಿನ 8449 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 505 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 4.15 ಇದ್ದು, ಸೋಂಕಿನಿಂದ ಮೃತಪಡುವವರ ಪ್ರಮಾಣ ಶೇ 0.04 ಇದೆ. ರಾಜ್ಯದಲ್ಲಿ ಈವರೆಗೆ 30,31,052 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 29,62,548 ಮಂದಿ ಚೇತರಿಸಿಕೊಂಡಿದ್ದಾರೆ. ಕೊರೊನಾದಿಂದ ಒಟ್ಟು 38,362 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 30,113 ಸಕ್ರಿಯ ಪ್ರಕರಣಗಳಿವೆ.
ಎಂದಿನಂತೆ ಬೆಂಗಳೂರು ನಗರದಲ್ಲಿಯೇ ಅತಿಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ನಗರದ 6812 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 352 ಮಂದಿ ಚೇತರಿಸಿಕೊಂಡಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಪ್ರಸ್ತುತ 25,370 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ಈವರೆಗೆ ಒಟ್ಟು 16,417 ಮಂದಿ ಕೊವಿಡ್ನಿಂದ ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 12,83,186 ಜನರಲ್ಲಿ ಸೋಂಕು ದೃಢಪಟ್ಟಿದ್ದು, 12,41,398 ಮಂದಿ ಚೇತರಿಸಿಕೊಂಡಿದ್ದಾರೆ.
ಇಂದಿನ 07/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/F3p0BfxQjQ @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/L9DwF67F3m
— K’taka Health Dept (@DHFWKA) January 7, 2022
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 6812, ದಕ್ಷಿಣ ಕನ್ನಡ 211, ಮೈಸೂರು 219, ಮಂಡ್ಯ 129, ಬೆಳಗಾವಿ 114, ಬೆಂಗಳೂರು ಗ್ರಾಮಾಂತರ 74, ಬಾಗಲಕೋಟೆ, ರಾಯಚೂರು 2, ಬಳ್ಳಾರಿ 62, ಬೀದರ್ 20, ಚಾಮರಾಜನಗರ 7, ಚಿಕ್ಕಬಳ್ಳಾಪುರ 21, ಚಿಕ್ಕಮಗಳೂರು 24, ಚಿತ್ರದುರ್ಗ 14, ದಾವಣಗೆರೆ 18, ಧಾರವಾಡ 66, ಗದಗ 10, ಹಾಸನ 89, ಕಲಬುರಗಿ 43, ಕೊಡಗು 29, ಕೋಲಾರ 98, ಕೊಪ್ಪಳ 5, ರಾಮನಗರ 20, ಶಿವಮೊಗ್ಗ 43, ತುಮಕೂರು 96, ಉಡುಪಿ 148, ಉತ್ತರ ಕನ್ನಡ, ವಿಜಯಪುರ 36, ಯಾದಗಿರಿ 1.ಇದನ್ನೂ ಓದಿ: Sirsi Marikamba Jatre: ಮಾ. 15ರಿಂದ ಶಿರಸಿ ಮಾರಿಕಾಂಬಾ ಜಾತ್ರೆ; ಕೊರೊನಾ ನಿಯಮ ಪಾಲನೆ ಕಡ್ಡಾಯ ಇದನ್ನೂ ಓದಿ: ಇನ್ನೂ ಕೆಲ ಸಮಯ ಕೊರೊನಾ ಸೋಂಕಿನೊಂದಿಗೆ ಬದುಕುವುದು ಕಲಿಯಬೇಕಿದೆ: ದಕ್ಷಿಣ ಆಫ್ರಿಕಾದ ತಜ್ಞ ವೈದ್ಯೆ ಆಂಜೆಲಿಕ್ ಕೊಯೆಟ್ಜಿ