Karnataka Covid Update: 707 ಮಂದಿಗೆ ಕೊರೊನಾ ಸೋಕು, 8223 ಸಕ್ರಿಯ ಪ್ರಕರಣಗಳು

ಕರ್ನಾಟಕದಲ್ಲಿ ಪ್ರಸ್ತುತ 8223 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.61, ಸೋಂಕಿತರು ಸಾವನ್ನಪ್ಪುವ ಸರಾಸರಿಯು ಶೇ 0.42 ಇದೆ

Karnataka Covid Update: 707 ಮಂದಿಗೆ ಕೊರೊನಾ ಸೋಕು, 8223 ಸಕ್ರಿಯ ಪ್ರಕರಣಗಳು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 30, 2021 | 9:47 PM

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಕೊವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಗುರುವಾರ 707 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 252 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 8223 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.61, ಸೋಂಕಿತರು ಸಾವನ್ನಪ್ಪುವ ಸರಾಸರಿಯು ಶೇ 0.42 ಇದೆ. ರಾಜ್ಯದಲ್ಲಿ ಈವರೆಗೆ 30,06,505 ಮಂದಿಯಲ್ಲಿ ಸೋಂಕು ಖಚಿತವಾಗಿದೆ. 29,59,926 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ 38,327 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರದಲ್ಲಿ 565 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 104 ಮಂದಿ ಚೇತರಿಸಿಕೊಂಡಿದ್ದಾರೆ. ಇಂದು ಒಂದೇ ದಿನ ಮೂವರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ 12,6,2,962 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 16,395 ಮಂದಿ ಸಾವನ್ನಪ್ಪಿದ್ದಾರೆ. 12,39,720 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 6,846 ಸಕ್ರಿಯ ಪ್ರಕರಣಗಳಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 565, ಉಡುಪಿ 19, ಹಾಸನ 17, ಮೈಸೂರು 16, ಕೊಡಗು 12, ದಕ್ಷಿಣ ಕನ್ನಡ 11, ಮಂಡ್ಯ, ಧಾರವಾಡ, ಬೆಳಗಾವಿ 8, ಉತ್ತರ ಕನ್ನಡ, ತುಮಕೂರು 6, ಬಳ್ಳಾರಿ, ಕೋಲಾರ 5, ಬೆಂಗಳೂರು ಗ್ರಾಮಾಂತರ 4, ಶಿವಮೊಗ್ಗ, ವಿಜಯಪುರ, ಚಿಕ್ಕಮಗಳೂರು, ಕಲಬುರಗಿ 3, ಚಿತ್ರದುರ್ಗ 2, ಚಾಮರಾಜನಗರ, ದಾವಣಗೆರೆ, ಯಾದಗಿರಿ 1.

ಕೋಲಾರದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢ ಬಂಗಾರಪೇಟೆ ತಾಲ್ಲೂಕು ಹುಣಸನಹಳ್ಳಿ ಬಳಿ ಇರುವ ಮಾನ್ಯತಾ ಇಂಟರ್​ನ್ಯಾಷನಲ್ ನರ್ಸಿಂಗ್ ಕಾಲೇಜಿನ ನರ್ಸಿಂಗ್ ಕಾಲೇಜಿನ ಐವರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇವರೆಲ್ಲರೂ ಪಶ್ಚಿಮ ಬಂಗಾಳದಿಂದ ಬಂದವರು ಎಂದು ತಿಳಿದುಬಂದಿದೆ. ಆರೋಗ್ಯ ಇಲಾಖೆಯು ಕಾಲೇಜಿನ 118 ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದೆ. ಮಾನ್ಯತಾ ನರ್ಸಿಂಗ್ ಕಾಲೇಜನ್ನು ಕಂಟೇನ್​ಮೆಂಟ್ ಜೋನ್ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಘೋಷಿಸಿದ್ದಾರೆ. ಆದರೆ ಇದಕ್ಕೆ ಕಾಲೇಜು ಆಡಳಿತ ಮಂಡಳಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ನಂತರ ಜಿಲ್ಲಾಧಿಕಾರಿ ಆದೇಶದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ತೆಗೆದುಕೊಂಡರು.ಇದನ್ನೂ ಓದಿ: US Covid cases: ಅಮೇರಿಕಾ, ಫ್ರಾನ್ಸ್​ನಲ್ಲಿ ತೀವ್ರಗತಿಯಲ್ಲಿ ಏರುತ್ತಿವೆ ಕೊರೊನಾ ಪ್ರಕರಣಗಳು; ಇಲ್ಲಿದೆ ಅಂಕಿಅಂಶ ಇದನ್ನೂ ಓದಿ: France: ಫ್ರಾನ್ಸ್​ನಲ್ಲಿ ದಾಖಲೆಯ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ಪತ್ತೆ; 2 ಲಕ್ಷ ಸಮೀಪಿಸಿದ ಕೊವಿಡ್ ಕೇಸ್

Published On - 8:09 pm, Thu, 30 December 21

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು