ಮೆಟ್ರೊದಲ್ಲಿ ಸ್ಟ್ಯಾಂಡಿಂಗ್ ಇಲ್ಲ: ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಸರ್ಕಾರ ಸೂಚನೆ

ಮೆಟ್ರೊದಲ್ಲಿ ಸ್ಟ್ಯಾಂಡಿಂಗ್ ಇಲ್ಲ: ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಸರ್ಕಾರ ಸೂಚನೆ
ಬೆಂಗಳೂರು ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)

ಜನರ ಸಂಚಾರಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಸರ್ಕಾರವು ಬೆಂಗಳೂರಿನ ಮೆಟ್ರೊ ರೈಲುಗಳಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಿದೆ.

TV9kannada Web Team

| Edited By: Ghanashyam D M | ಡಿ.ಎಂ.ಘನಶ್ಯಾಮ

Jan 04, 2022 | 11:04 PM


ಬೆಂಗಳೂರು: ಕೊರೊನಾ 3ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಮಂಗಳವಾರ ಹಲವು ಕಠಿಣ ಕ್ರಮಗಳನ್ನು ಘೋಷಿಸಿದೆ. ಜನರ ಸಂಚಾರಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಸರ್ಕಾರವು ಬೆಂಗಳೂರಿನ ಮೆಟ್ರೊ ರೈಲುಗಳಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಿದೆ. ನಿಂತು ಪ್ರಯಾಣಿಸಲು ಅನುಮತಿ ಇರುವುದಿಲ್ಲ. ಈ ಕುರಿತು ಮೆಟ್ರೊ ನಿಗಮದಿಂದ ಅಧಿಕೃತ ಮಾಹಿತಿ ಪ್ರಕಟವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಕೊರೊನಾ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಂಟಿಸಿ, ಕೆಎಸ್​ಆರ್​ಟಿಸಿ ಮತ್ತು ರೈಲು ಪ್ರಯಾಣದ ಬಗ್ಗೆ ಆಯಾ ನಿಗಮಗಳ ಮುಖ್ಯಸ್ಥರು ವಿವರಗಳನ್ನು ಪ್ರಕಟಿಸಲಿದ್ದಾರೆ ಎಂದರು.

ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಾವಳಿಗಳ ಅನ್ವಯವೇ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯವ್ಯಾಪಿ ಕರ್ಫ್ಯೂ ನಿಯಮಗಳು ಚಾಲ್ತಿಯಲ್ಲಿರುತ್ತವೆ. ಎಲ್ಲ ಕಚೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕೆಲಸ ಮಾಡುತ್ತವೆ. ಸರ್ಕಾರಿ ಕಚೇರಿಗಳಲ್ಲಿ ಅರ್ಧದಷ್ಟು ಸಿಬ್ಬಂದಿ ಮಾತ್ರ ಕೆಲಸ ಮಾಡುತ್ತಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 10, 11 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳಿಗೆ 50:50 ನಿಯಮ ಜಾರಿ; ಕೊರೊನಾ ಮಾರ್ಗಸೂಚಿಯ ವಿವರ ಇಲ್ಲಿದೆ
ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 2,479 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು

Follow us on

Related Stories

Most Read Stories

Click on your DTH Provider to Add TV9 Kannada