BBMP Corona guidelines: ಆಯಕಟ್ಟಿನ ಜಾಗಗಳಲ್ಲಿ ಕಟ್ಟುನಿಟ್ಟಿನ ಕೋವಿಡ್ ಮಾರ್ಗಸೂಚಿ ಫಿಕ್ಸ್ ಮಾಡಿದ ಬಿಬಿಎಂಪಿ; ಏನದು?
Corona 4th wave: ಬೆಂಗಳೂರಲ್ಲಿ ಕೊರೊನಾ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ 1,667 ಇದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 1.16ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ಮಧ್ಯೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊಸ ಕೊವಿಡ್ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಬೆಂಗಳೂರು: ಕೊರೊನಾ ಸೋಂಕು ತನ್ನ ನಾಲ್ಕನೆಯ ಅಲೆಯಲ್ಲಿ ಇನ್ನೂ ಭಾರತವನ್ನು ಅಷ್ಟಾಗಿ ತಾಕಿಲ್ಲ ಎಂದು ಹೇಳುತ್ತಿರುವಾಗಲೇ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇಂದು ಶುಕ್ರವಾರ 133 ಜನರಿಗೆ ಕೊರೊನಾ ಅಟ್ಯಾಕ್ ಆಗಿದ್ದರೆ ಬೆಂಗಳೂರಿನಲ್ಲಿ ಇಂದು 127 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಕೊರೊನಾ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ 1,737 ಇದೆ. ಬೆಂಗಳೂರಲ್ಲಿ ಕೊರೊನಾ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ 1,667 ಇದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 1.16ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ಮಧ್ಯೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊಸ ಕೊವಿಡ್ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಮುಖ್ಯವಾಗಿ ಆಯಕಟ್ಟಿನ ಜಾಗಗಳಾದ ಆಸ್ಪತ್ರೆಗಳಿಗೆ, ಥಿಯೇಟರ್ ಹಾಗೂ ಹೋಟೆಲ್, ಮಾಲ್ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಕೊವಿಡ್ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. OPDಗಳಲ್ಲಿ ಎಲ್ಲಾ ILI/ SARI ಪ್ರಕರಣ ಪರೀಕ್ಷಿಸಬೇಕು. ಒಳರೋಗಿಗಳಿಗೆ ಕೊವಿಡ್-19 ಪರೀಕ್ಷೆ ಮಾಡಬೇಕು ಎಂದು ಸೂಚಿಸಿದೆ. ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ.(BBMP Corona guidelines).
1) ICMR ಪೋರ್ಟಲ್ ನಲ್ಲಿ ಸಂಪೂರ್ಣ ಮಾಹಿತಿಯೊಂದಿಗೆ ಎಲ್ಲಾ ಪರೀಕ್ಷಾ ವಿವರಗಳನ್ನು ಅಪ್ಲೋಡ್ ಮಾಡಬೇಕು 2) CT ವ್ಯಾಲ್ಯು 30 ಕ್ಕಿಂತ ಕಡಿಮೆ ಇರುವ ಎಲ್ಲಾ ಪಾಸಿಟಿವ್ ಪ್ರಕರಣಗಳನ್ನು ಜೀನೋಮಿಕ್ ಸೀಕ್ವೆನ್ಸಿಂಗ್ ಗೆ ಕಳುಹಿಸಲು ಸೂಚಿಸಬೇಕು 3) ಖಾಸಗಿ ಆಸ್ಪತ್ರೆಯ ಹಾಸಿಗೆ ಗಳನ್ನು ಶೇ. 10 ಮೀಸಲಿಡಬೇಕು. 4) ಖಾಸಗಿ ಆಸ್ಪತ್ರೆಯ ಹಾಸಿಗೆ ಗಳಿಗಾಗಿ ರಿಯಲ್ ಟೈಮ್ ಬೆಡ್ ಲಭ್ಯತೆ ಪೋರ್ಟಲ್ ಅನ್ನು ತಕ್ಷಣವೇ ಸಕ್ರಿಯಗೊಳಿಸಬೇಕು.
ಸಿನಿಮಾ ಹಾಲ್, ಮಾಲ್, ರೆಸ್ಟೋರೆಂಟ್, ಹೋಟೆಲ್, ವ್ಯಾಪಾರಿ ಒಕ್ಕೂಟಗಳು ಮತ್ತು ಇತರೆ ವಾಣಿಜ್ಯ ಸಂಸ್ಥೆಗಳಿಗೂ ವಿಷೇಷ ಸೂಚನೆ:
1. ಹೋಟೆಲ್ ಗಳು, ಮಾಲ್ ಗಳು, ಅಂಗಡಿಗಳು, ಚಿತ್ರಮಂದಿರಗಳು ಇತ್ಯಾದಿ ವಾಣಿಜ್ಯ ಸ್ಥಳಗಳಲ್ಲಿ ಕೋವಿಡ್ ಸಮುಚಿತ ನಡವಳಿಕೆಯನ್ನು(CAB) ಖಚಿತಪಡಿಸಿಕೊಳ್ಳಬೇಕು 2. ಸಿನಿಮಾ ಹಾಲ್ ಗಳು, ಮಾಲ್ ಗಳು, ರೆಸ್ಟೋರೆಂಟ್ ಗಳು, ಹೋಟೆಲ್ ಗಳಿಗೆ ಪ್ರವೇಶಕ್ಕಾಗಿ ಡಬಲ್ ಡೋಸ್ ವ್ಯಾಕ್ಸಿನೇಷನ್ ಕಡ್ಡಾಯ 3. ಮಾಸ್ಕ್ , ಸಾಮಾಜಿಕ ಅಂತರ , ಸ್ಕ್ರೀನಿಂಗ್ ಟೆಸ್ಟಿಂಗ್ ಕಡ್ಡಯ 4. ಎಲ್ಲಾ ಸಿಬ್ಬಂದಿಗಳ ಲಸಿಕೆ ಪಡೆದಿರುವುದು ಕಡ್ಡಾಯವಾಗಿ ಇರಬೇಕು 5. ಹೆಚ್ಚಿನ ಪ್ರಕರಣಗಳಿರುವ ಪ್ರದೇಶಗಳಿಂದ ಬರುವವರ, ಅದರಲ್ಲೂ ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ 6. ಹೆಚ್ಚು ಜನರು ಸೇರುವ ವ್ಯಾಪಾರ ಪ್ರದೇಶಗಳಲ್ಲಿ ಮಾರ್ಷಲ್ ಗಳ ನೇಮಕ
ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳಿಗೆ(RWAs) ನೀಡಲಾದ ಸೂಚನೆಗಳು:
1. ಹೆಚ್ಚಿನ ಕಣ್ಗಾವಲು ಚಟುವಟಿಕೆಗಳಿಗೆ ಸಹಕಾರ ನೀಡಬೇಕು 2. ಮುನ್ನೆಚ್ಚರಿಕೆ ಡೋಸ್ ಕವರೇಜ್ ಮತ್ತು ಮಕ್ಕಳ ವ್ಯಾಕ್ಸಿನೇಷನ್ ಬಗ್ಗೆ RWA ಮಟ್ಟದಲ್ಲಿ ಜಾಗೃತಿ ಉಪಕ್ರಮಗಳನ್ನು ಕೈಗೊಳ್ಳಬೇಕು. 3. ಎಲ್ಲಾ ವಯೋಮಾನದವರೂ ಶೇ. 100 ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಲು RWA ಗಳಲ್ಲಿ ಶಿಬಿರಗಳನ್ನು ಆಯೋಜಿಸಬೇಕು. 4. ದೊಡ್ಡ ಅಪಾರ್ಟ್ಮೆಂಟ್ ಸಂಕೀರ್ಣಗಳಿಂದ ಜೀನೋಮಿಕ್ ಕಣ್ಗಾವಲಿಗಾಗಿ ಸೀವೇಜ್ ಮಾದರಿಗಳನ್ನು ಸಂಗ್ರಹಿಸಬೇಕು 5. ಚಾಲ್ತಿಯಲ್ಲಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಕಾರ RWA ಗಾಗಿ ಪರಿಷ್ಕೃತ ಸಲಹೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಅದನ್ನು ಹಂಚಿಕೊಳ್ಳಬೇಕು. 6. ಉಗುಳುವಿಕೆ ವಿರುದ್ಧ ಆಂದೋಲನ ಮತ್ತು ಮಾಸ್ಕ್ ಧಾರಣೆ ಅಭಿಯಾನದ ಪುನರಾರಂಭವನ್ನು NGO ಪಾಲುದಾರರು ಪ್ರಸ್ತಾಪಿಸಿದರು. 7. ಎಲ್ಲಾ ಪ್ರಾಥಮಿಕ ಸಂಪರ್ಕಗಳನ್ನು ಪರೀಕ್ಷಿಸಬೇಕು
Published On - 10:01 pm, Fri, 29 April 22