ಬೆಂಗಳೂರು ಗ್ಯಾಂಗ್‌ರೇಪ್ ಆರೋಪಿಗಳನ್ನು ಬಂಧಿಸಿದ್ದ ಪೊಲೀಸ್ ಸಿಬ್ಬಂದಿಗೆ ಕೊವಿಡ್ ಭೀತಿ
ಬಾಂಗ್ಲಾದ ಓರ್ವ ಯುವತಿ, ಸಾಗರ್, ರಿದಾಯ್ ಬಾಬು, ಮೊಹಮ್ಮದ್ ಬಾಬಾಶೇಕ್, ಹೈದರಾಬಾದ್‌ನ ಹಕೀಲ್ ಅವರುಗಳೇ ಬಂಧಿತರಾಗಿದ್ದಾರೆ. ಆರೋಪಿಗಳು ಎನ್ಆರ್ಐ ಲೇಔಟ್ನಲ್ಲಿ ಕಳೆದ 10 ದಿನಗಳ ಹಿಂದೆ ಬಾಂಗ್ಲಾ ಮೂಲದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅತ್ಯಾಚಾರ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು.
ಬೆಂಗಳೂರು: ನಗರದಲ್ಲಿ ಬಾಂಗ್ಲಾದೇಶದ ಯುವತಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದ ಪೊಲೀಸ್ ಸಿಬ್ಬಂದಿಗೆ ಕೊವಿಡ್ ಆತಂಕ ಆರಂಭವಾಗಿದೆ. ಬಂಧಿತ 6 ಆರೋಪಿಗಳ ಪೈಕಿ ಓರ್ವನಾದ ಮೊಹಮ್ಮದ್ ಬಾಬು ಶೇಕ್ಗೆ ಕೊರೊನಾ ದೃಢಪಟ್ಟಿದ್ದು, ಸಿಸಿಬಿ ಮತ್ತು ರಾಮಮೂರ್ತಿನಗರ ಪೊಲೀಸ್ ಸಿಬ್ಬಂದಿಗೆ ಭೀತಿ ಉಂಟಾಗಿದೆ.
ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿಯ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ ರಾಮಮೂರ್ತಿ ನಗರ ಪೊಲೀಸರು ನಿನ್ನೆ (ಮೇ 27) ಐವರನ್ನು ಬಂಧಿಸಿದ್ದಾರೆ. ಬಾಂಗ್ಲಾದ ಓರ್ವ ಯುವತಿ, ಸಾಗರ್, ರಿದಾಯ್ ಬಾಬು, ಮೊಹಮ್ಮದ್ ಬಾಬಾಶೇಕ್, ಹೈದರಾಬಾದ್‌ನ ಹಕೀಲ್ ಅವರುಗಳೇ ಬಂಧಿತರಾಗಿದ್ದಾರೆ. ಆರೋಪಿಗಳು ಎನ್ಆರ್ಐ ಲೇಔಟ್ನಲ್ಲಿ ಕಳೆದ 10 ದಿನಗಳ ಹಿಂದೆ ಬಾಂಗ್ಲಾ ಮೂಲದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅತ್ಯಾಚಾರ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು.
ಸಂತ್ರಸ್ಥೆ ಮತ್ತು ಆರೋಪಿಗಳು ಇಬ್ಬರೂ ಬಾಂಗ್ಲಾದೇಶದ ಮೂಲದರಾಗಿದ್ದು, ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ. ಆರೋಪಿಗಳು ವೇಶ್ಯಾವಾಟಿಕೆ ದಂದೆಯಲ್ಲಿ ತೊಡಗಿದ್ದು, ಸಂತ್ರಸ್ಥೆ ಮೇಲಿನ ದ್ವೇಷದಿಂದ ಓರ್ವ ಯುವತಿ ಜತೆಗೆ ನಾಲ್ವರು ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದರು. ಬಾಂಗ್ಲಾ ದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಅಸ್ಸಾಂ ರಾಜ್ಯದ ಪೊಲೀಸರಿಂದ ವಿಡಿಯೋ ಕುರಿತು ತನಿಖೆ ನಡೆಸಿದಾಗ ಕೃತ್ಯದಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿತ್ತು.
ಆರೋಪಿಗಳ ಮೇಲೆ ಫೈರಿಂಗ್ ಯುವತಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಮೇಲೆ ಇಂದು ಬೆಳಗ್ಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ರಿದಾಯ್ ಬಾಬು, ಸಾಗರ್ ಕಾಲಿಗೆ ಗುಂಡುಹಾರಿಸಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ಸ್ಥಳ ಮಹಜರಿಗೆ ಕೆ.ಚನ್ನಸಂದ್ರಕ್ಕೆ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಆರೋಪಿಗಳು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶಾರಣಾಗುವಂತೆ ಕೇಳಿಕೊಂಡಿದ್ದಾರೆ. ಆದರೆ ಮಾತು ಕೇಳದೆ ಹಲ್ಲೆಗೆ ಮುಂದಾಗಿದ್ದು ಈ ವೇಳೆ ಆರೋಪಿಗಳಾದ ರಿದಾಯ್ ಬಾಬು ಬಲಗಾಲಿಗೆ, ಸಾಗರ್ ಎಡಗಾಲಿಗೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಈ ಕೇಸ್ನಲ್ಲಿ ಶಾಮೀಲಾದವರೆಲ್ಲ ಬಾಂಗ್ಲಾ ದೇಶದ ಮೂಲದವರು. ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನ ರಾಮಮೂರ್ತಿ ನಗರದ ಎನ್ಆರ್ಐ ಕಾಲೋನಿಯಲ್ಲಿ ವಾಸವಾಗಿದ್ರು. ಇಷ್ಟು ದಿನ ಸೈಲೆಂಟಾಗಿ ವೇಶ್ಯಾವಾಟಿಕೆ ಮಾಡಿಕೊಂಡು ದುಡ್ ಮಾಡ್ತಿದ್ರು. ಎಲ್ರು ಖುಷಿಯಾಗೆ ಲೈಫ್ ಎಂಜಾಯ್ ಮಾಡ್ತಿದ್ರು. ಆದ್ರೆ, ಸ್ನೇಹಿತರ ಮಧ್ಯೆ ಅದು ಏನ್ ದ್ವೇಷ ಇತ್ತೋ ಗೊತ್ತಿಲ್ಲ. ಕಳೆದ 10 ದಿನಗಳ ಹಿಂದೆ ಬಾಂಗ್ಲಾ ಮೂಲದ ಯುವತಿ ಮೇಲೆ ಯುವಕರು ಎರಗಿದ್ದಾರೆ. ಅದು ಕೂಡ ಇಬ್ಬರು ಯುವಕರು ಯುವತಿಯ ಕೈ, ಬಾಯಿ ಗಟ್ಟಿಯಾಗಿ ಮುಚ್ಚಿಕೊಂಡಿದ್ರೆ, ಉಳಿದವರು ಅಟ್ಟಹಾಸ ಮೆರೆದಿದ್ದಾರೆ. ಎಲ್ಲವನ್ನೂ ಮೊಬೈಲ್ನಲ್ಲಿ ದೃಶ್ಯ ಸೆರೆ ಹಿಡಿದು, ವೈರಲ್ ಮಾಡಿದ್ದಾರೆ.
ಕೊರೊನಾ ವೈರಸ್ ಎಲ್ಲಿಂದ ಹರಡಿತು? ಕೊವಿಡ್ ರೋಗದ ಸೋಂಕಿನ ಅರಿಯಲು ಸಿಐಎ ತನಿಖೆಗೆ ಆಮೆರಿಕ ಅಧ್ಯಕ್ಷ ಜೋ ಬೈಡೆನ್ ಆದೇಶ
( Covid fear for policemen arrested in Bangalore gangrape accused)
Published On - 5:36 pm, Fri, 28 May 21