Karnataka Covid Guidelines: ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ವಿಶೇಷ ಸಭೆ; ಹೊಸ ವರ್ಷಾಚರಣೆಗೆ 8 ನಿಯಮಗಳು ಶಿಫಾರಸು

ಕರ್ನಾಟಕ ಕೋವಿಡ್​ ಮಾರ್ಗಸೂಚಿ: ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಸಮಿತಿ ಶಿಫಾರಸು ಮಾಡಿರುವ ಮುಖ್ಯ ಅಂಶಗಳಿವು...

Karnataka Covid Guidelines: ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ವಿಶೇಷ ಸಭೆ; ಹೊಸ ವರ್ಷಾಚರಣೆಗೆ 8 ನಿಯಮಗಳು ಶಿಫಾರಸು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Dec 26, 2022 | 10:25 AM

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು (Coronavirus) ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕೊವಿಡ್ ನಿಯಂತ್ರಣಕ್ಕೆಂದು ರೂಪಿಸಿರುವ ತಾಂತ್ರಿಕ ಸಲಹಾ ಸಮಿತಿಯ (Technical Advisory Committee – TAC) ವಿಶೇಷ ಸಭೆ ಭಾನುವಾರ (ಡಿ 25) ಸಂಜೆ ನಗರದಲ್ಲಿ ನಡೆಯಿತು. ಕಂದಾಯ ಸಚಿವರ ನೇತೃತ್ವದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಭೆಗೂ ಮೊದಲು ಈ ಸಭೆ ನಡೆಯುತ್ತಿರುವುದು ಎಲ್ಲರ ಗಮನ ಸೆಳೆಯಿತು. ಕಂದಾಯ ಸಚಿವರ ಸಮಕ್ಷಮ ನಡೆಯಲಿರುವ ಸಭೆಯಲ್ಲಿ ಚರ್ಚಿಸಬೇಕಾದ ಅಂಶಗಳ ಬಗ್ಗೆಯೂ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಚಿಂತನಮಂಥನ ನಡೆಸಿದರು.

ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವ ಬಗ್ಗೆಯೂ ತಾಂತ್ರಿಕ ಸಲಹಾ ಸಮಿತಿ ವಿಸ್ತೃತ ಚರ್ಚೆ ನಡೆಸಿತು. ಹೊಸ ವರ್ಷಕ್ಕೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವ ಬಗ್ಗೆ ಹಾಗೂ ಚೀನಾದಿಂದ ವರದಿಯಾಗುತ್ತಿರುವ ಕೊರೊನಾ ವಿದ್ಯಮಾನಗಳ ಬಗ್ಗೆ ಸಭೆಯಲ್ಲಿ ವಿಚಾರ ವಿನಿಮಿಯ ನಡೆಯಿತು. ಬಹುತೇಕ ಭಾರತಿಯರು ಈಗಾಗಲೇ ಲಸಿಕೆ ಪಡೆದಿದ್ದಾರೆ. ನೈಸರ್ಗಿಕವಾಗಿಯೂ ಕೊರೊನಾ ಸೋಂಕಿನ ವಿರುದ್ಧ ಭಾರತೀಯರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿದೆ. ಹೀಗಾಗಿಯೇ BF 7 ಹೊಸ ಅಲೆಯು ಭಾರತದಲ್ಲಿ ಅಷ್ಟೇನೂ ಗಂಭೀರ ಪರಿಣಾಮ ಬೀರುವುದಿಲ್ಲ ಎಂದ ಅಭಿಪ್ರಾಯವೂ ಸಭೆಯಲ್ಲಿ ಚರ್ಚೆಯಾಯಿತು.

ಮುನ್ನೆಚ್ಚರಿಕೆ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ, ದೈನಂದಿನ ಕೊವಿಡ್ ಪರೀಕ್ಷೆಗಳನ್ನು ಹೆಚ್ಚಿಸುವಂತೆ, ಹೊಸ ವರ್ಷದ ಆಚರಣೆ, ಹಬ್ಬ ಹಾಗೂ ಧಾರ್ಮಿಕ ಆಚರಣೆ ಸಮಯದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಯನ್ನು ಈಗಾಗಲೇ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ನೀಡಿದೆ. ಜನವರಿ 6ರಿಂದ 8ರವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನದಲ್ಲಿ ಅನುಸರಿಸಬೇಕಾದ ನಿಯಮಗಳ ಬಗ್ಗೆಯೂ ತಾಂತ್ರಿಕ ಸಮಿತಿಯು ಸಲಹೆ ನೀಡಿದೆ.

ರಾಜ್ಯದಲ್ಲಿ ಕೊವಿಡ್​ ಲಕ್ಷಣ ಇದ್ದವರನ್ನು ಹುಡುಕಲು ಆದ್ಯತೆ ಸಿಗಬೇಕು. ಜ್ವರ ಮತ್ತು ಕೆಮ್ಮು, ಮೂಗು ಸೋರುವಿಕೆ ಮುಂತಾದ ಉಸಿರಾಟದ ಲಕ್ಷಣಗಳನ್ನು ಹೊಂದಿರುವವರನ್ನು ಹುಡುಕಿ ವೈದ್ಯಕೀಯ ಸಮಾಲೋಚನೆ ಮಾಡಿಸಬೇಕು ಎಂದು ತಾಂತ್ರಿಕ ಸಮಿತಿಯು ಸೂಚಿಸಿದೆ.

ಇದನ್ನೂ ಓದಿ: Corona Meet: ಕರ್ನಾಟಕದಲ್ಲಿ ಕೊರೊನಾ ನಿರ್ವಹಣೆಗೆ ಇಂದು ಮಾರ್ಗಸೂಚಿ ಬಿಡುಗಡೆ ಸಾಧ್ಯತೆ, ರಾಜ್ಯ ಸರ್ಕಾರದಿಂದ ಮಹತ್ವದ ಸಭೆ

ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಸಮಿತಿ ಶಿಫಾರಸು ಮಾಡಿರುವ ಮುಖ್ಯ ಅಂಶಗಳಿವು…

  1. ಕಾರ್ಯಕ್ರಮಗಳನ್ನು ಹೊರಾಂಗಣದಲ್ಲಿ ಆಯೋಜಿಸಬೇಕು
  2. ರಾತ್ರಿ ಅಥವಾ ನಸುಕಿನಲ್ಲಿ ಕಾರ್ಯಕ್ರಮ ಬೇಡ
  3. ಸಂಭ್ರಮಾಚರಣೆಗೆ ಮಾಸ್ಕ್ ಇಲ್ಲದವರಿಗೆ ಪ್ರವೇಶ ಇಲ್ಲ
  4. ಪಾರ್ಟಿಗಳಿಗೆ ಬರುವ ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ. ದೇಹದ ಉಷ್ಣಾಂಶ ಹೆಚ್ಚಿರುವವರಿಗೆ ಪ್ರವೇಶ ನಿರಾಕರಣೆ
  5. 60 ವರ್ಷಕ್ಕಿಂತ ಮೇಲ್ಪಟ್ಟವರು ಆರೋಗ್ಯವಾಗಿದ್ದರೆ ಮಾತ್ರ ಕಾರ್ಯಕ್ರದಲ್ಲಿ ಭಾಗಿಗೆ ಅವಕಾಶ
  6. ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಹಾಜರಿಗೆ ಅವಕಾಶ
  7. ಕಾರ್ಯಕ್ರಮದ ಸ್ಥಳ ಪ್ರವೇಶಿಸುವ ಮೊದಲು ಪ್ರತಿಯೊಬ್ಬರಿಗೂ ಪ್ರವೇಶದ್ವಾರದಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಮೂಲಕ ಕೈಗಳನ್ನು ಸ್ವಚ್ಛಗೊಳಿಸಲು ಸೂಚಿಸಬೇಕು
  8. ಆರೋಗ್ಯ ಸರಿಯಿದವರನ್ನು ತಕ್ಷಣ ಆಸ್ಪತ್ರೆಗೆ ರವಾನಿಸಬೇಕು. ಕೊವಿಡ್​​ ತರಬೇತಿ ಪಡೆದ ಸಿಬ್ಬಂದಿ ಮತ್ತು ಆಂಬ್ಯುಲೆನ್ಸ್ ಅನ್ನು ಸ್ಥಳದಲ್ಲಿ ನಿಯೋಜಿಸಬೇಕು

ಆರೋಗ್ಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:51 am, Mon, 26 December 22

ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್