ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು (Coronavirus) ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕೊವಿಡ್ ನಿಯಂತ್ರಣಕ್ಕೆಂದು ರೂಪಿಸಿರುವ ತಾಂತ್ರಿಕ ಸಲಹಾ ಸಮಿತಿಯ (Technical Advisory Committee – TAC) ವಿಶೇಷ ಸಭೆ ಭಾನುವಾರ (ಡಿ 25) ಸಂಜೆ ನಗರದಲ್ಲಿ ನಡೆಯಿತು. ಕಂದಾಯ ಸಚಿವರ ನೇತೃತ್ವದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಭೆಗೂ ಮೊದಲು ಈ ಸಭೆ ನಡೆಯುತ್ತಿರುವುದು ಎಲ್ಲರ ಗಮನ ಸೆಳೆಯಿತು. ಕಂದಾಯ ಸಚಿವರ ಸಮಕ್ಷಮ ನಡೆಯಲಿರುವ ಸಭೆಯಲ್ಲಿ ಚರ್ಚಿಸಬೇಕಾದ ಅಂಶಗಳ ಬಗ್ಗೆಯೂ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಚಿಂತನಮಂಥನ ನಡೆಸಿದರು.
ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವ ಬಗ್ಗೆಯೂ ತಾಂತ್ರಿಕ ಸಲಹಾ ಸಮಿತಿ ವಿಸ್ತೃತ ಚರ್ಚೆ ನಡೆಸಿತು. ಹೊಸ ವರ್ಷಕ್ಕೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವ ಬಗ್ಗೆ ಹಾಗೂ ಚೀನಾದಿಂದ ವರದಿಯಾಗುತ್ತಿರುವ ಕೊರೊನಾ ವಿದ್ಯಮಾನಗಳ ಬಗ್ಗೆ ಸಭೆಯಲ್ಲಿ ವಿಚಾರ ವಿನಿಮಿಯ ನಡೆಯಿತು. ಬಹುತೇಕ ಭಾರತಿಯರು ಈಗಾಗಲೇ ಲಸಿಕೆ ಪಡೆದಿದ್ದಾರೆ. ನೈಸರ್ಗಿಕವಾಗಿಯೂ ಕೊರೊನಾ ಸೋಂಕಿನ ವಿರುದ್ಧ ಭಾರತೀಯರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿದೆ. ಹೀಗಾಗಿಯೇ BF 7 ಹೊಸ ಅಲೆಯು ಭಾರತದಲ್ಲಿ ಅಷ್ಟೇನೂ ಗಂಭೀರ ಪರಿಣಾಮ ಬೀರುವುದಿಲ್ಲ ಎಂದ ಅಭಿಪ್ರಾಯವೂ ಸಭೆಯಲ್ಲಿ ಚರ್ಚೆಯಾಯಿತು.
ಮುನ್ನೆಚ್ಚರಿಕೆ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ, ದೈನಂದಿನ ಕೊವಿಡ್ ಪರೀಕ್ಷೆಗಳನ್ನು ಹೆಚ್ಚಿಸುವಂತೆ, ಹೊಸ ವರ್ಷದ ಆಚರಣೆ, ಹಬ್ಬ ಹಾಗೂ ಧಾರ್ಮಿಕ ಆಚರಣೆ ಸಮಯದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಯನ್ನು ಈಗಾಗಲೇ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ನೀಡಿದೆ. ಜನವರಿ 6ರಿಂದ 8ರವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನದಲ್ಲಿ ಅನುಸರಿಸಬೇಕಾದ ನಿಯಮಗಳ ಬಗ್ಗೆಯೂ ತಾಂತ್ರಿಕ ಸಮಿತಿಯು ಸಲಹೆ ನೀಡಿದೆ.
ರಾಜ್ಯದಲ್ಲಿ ಕೊವಿಡ್ ಲಕ್ಷಣ ಇದ್ದವರನ್ನು ಹುಡುಕಲು ಆದ್ಯತೆ ಸಿಗಬೇಕು. ಜ್ವರ ಮತ್ತು ಕೆಮ್ಮು, ಮೂಗು ಸೋರುವಿಕೆ ಮುಂತಾದ ಉಸಿರಾಟದ ಲಕ್ಷಣಗಳನ್ನು ಹೊಂದಿರುವವರನ್ನು ಹುಡುಕಿ ವೈದ್ಯಕೀಯ ಸಮಾಲೋಚನೆ ಮಾಡಿಸಬೇಕು ಎಂದು ತಾಂತ್ರಿಕ ಸಮಿತಿಯು ಸೂಚಿಸಿದೆ.
ಇದನ್ನೂ ಓದಿ: Corona Meet: ಕರ್ನಾಟಕದಲ್ಲಿ ಕೊರೊನಾ ನಿರ್ವಹಣೆಗೆ ಇಂದು ಮಾರ್ಗಸೂಚಿ ಬಿಡುಗಡೆ ಸಾಧ್ಯತೆ, ರಾಜ್ಯ ಸರ್ಕಾರದಿಂದ ಮಹತ್ವದ ಸಭೆ
ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಸಮಿತಿ ಶಿಫಾರಸು ಮಾಡಿರುವ ಮುಖ್ಯ ಅಂಶಗಳಿವು…
ಆರೋಗ್ಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
Published On - 9:51 am, Mon, 26 December 22