AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಎರಡು ಮೇಲ್ಸೇತುವೆಗಳ ಪಿಲ್ಲರ್‌ಗಳಲ್ಲಿ ಬಿರುಕು; ಆತಂಕ ವ್ಯಕ್ತಪಡಿಸಿ ಬಿಬಿಎಂಪಿಗೆ ದೂರು ಸಲ್ಲಿಸಿದ ನಾಗರಿಕರು

ಫ್ಲೈಓವರ್‌ಗಳನ್ನು ಮೂರು ಭಾಗಗಳ ಯೋಜನೆಯಲ್ಲಿ ಸೇರಿಸಲಾಗಿದೆ. ಅದರಲ್ಲಿ ಎರಡು ಹಂತಗಳು ಪೂರ್ಣಗೊಂಡಿವೆ ಮತ್ತು ಮೂರನೆಯದು ಮುಂದಿನ ವರ್ಷ ಮಾರ್ಚ್‌ಗೆ ಪೂರ್ಣಗೊಳ್ಳಲಿದೆ. ಮಂಜುನಾಥ ನಗರ ಮತ್ತು ಶಿವನಗರ ಜಂಕ್ಷನ್‌ಗಳಲ್ಲಿರುವ ಪಿಲ್ಲರ್​​ನಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದೆ.

ಬೆಂಗಳೂರಿನ ಎರಡು ಮೇಲ್ಸೇತುವೆಗಳ ಪಿಲ್ಲರ್‌ಗಳಲ್ಲಿ ಬಿರುಕು; ಆತಂಕ ವ್ಯಕ್ತಪಡಿಸಿ ಬಿಬಿಎಂಪಿಗೆ ದೂರು ಸಲ್ಲಿಸಿದ ನಾಗರಿಕರು
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 29, 2022 | 6:00 PM

Share

ಬೆಂಗಳೂರಿನಲ್ಲಿ ಇತ್ತೀಚೆಗೆ ನಿರ್ಮಿಸಲಾದ ಎರಡು ಮೇಲ್ಸೇತುವೆಗಳ (flyovers) ಪಿಲ್ಲರ್‌ಗಳಲ್ಲಿ (pillar) ಬಿರುಕು ಕಾಣಿಸಿಕೊಂಡಿದ್ದು, ನಿವಾಸಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ- ಬಿಬಿಎಂಪಿ (BBMP) ಗೆ ದೂರು ಸಲ್ಲಿಸಿದ್ದಾರೆ. ರಾಜಾಜಿನಗರ ಮತ್ತು ಕಾರ್ಡ್ ರಸ್ತೆಯ ಪಶ್ಚಿಮದಲ್ಲಿರುವ ಫ್ಲೈಓವರ್‌ ಪಿಲ್ಲರ್ ನಲ್ಲಿ ಈ ಬಿರುಕು ಕಾಣಿಸಿದೆ. ಹಲವಾರು ಕಾರ್ಯಕರ್ತರು ಈ ಅಪಾಯವನ್ನು ಬಿಬಿಎಂಪಿಯ ಗಮನಕ್ಕೆ ತಂದಿದ್ದಾರೆ ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಫ್ಲೈಓವರ್‌ಗಳನ್ನು ಮೂರು ಭಾಗಗಳ ಯೋಜನೆಯಲ್ಲಿ ಸೇರಿಸಲಾಗಿದೆ. ಅದರಲ್ಲಿ ಎರಡು ಹಂತಗಳು ಪೂರ್ಣಗೊಂಡಿವೆ ಮತ್ತು ಮೂರನೆಯದು ಮುಂದಿನ ವರ್ಷ ಮಾರ್ಚ್‌ಗೆ ಪೂರ್ಣಗೊಳ್ಳಲಿದೆ. ಮಂಜುನಾಥ ನಗರ ಮತ್ತು ಶಿವನಗರ ಜಂಕ್ಷನ್‌ಗಳಲ್ಲಿರುವ ಪಿಲ್ಲರ್​​ನಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದೆ. ಕೆಲವು ತಿಂಗಳ ಹಿಂದೆ ಫ್ಲೈಓವರ್‌ಗಳಲ್ಲಿ ಇದೇ ರೀತಿಯ ಸಮಸ್ಯೆ ಕಾಣಿಸಿಕೊಂಡಿದ್ದು ಅದನ್ನು ದುರಸ್ತಿ ಮಾಡಲಾಗಿದೆ ಎಂದು ವರದಿಯಾಗಿದೆ. ಆದರೂ ಸಮಸ್ಯೆ ಮತ್ತೆ ಕಾಣಿಸಿಕೊಂಡಿದೆ.ಆರ್‌ಟಿಐ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಪ್ರಕಾರ, ಮೇಲ್ಸೇತುವೆಗಳನ್ನು ನಿರ್ಮಿಸುವ ಗುತ್ತಿಗೆದಾರರು ಕಳಪೆ ಗುಣಮಟ್ಟದ ಕಾಮಗಾರಿ ಮಾಡಿದ್ದು, ಇದೀಗ ಪ್ರಯಾಣಿಕರಿಗೆ ಅಪಾಯ ತಂದೊಡ್ಡಿದೆ.

ಪಿಲ್ಲರ್‌ಗೆ ವಾಹನಗಳ ಭಾರವನ್ನು ತಡೆದುಕೊಳ್ಳುವ ಸಾಮರ್ಥ್ಯದ ಕೊರತೆಯಿಂದಾಗಿ ಊದಿಕೊಳ್ಳುತ್ತಿವೆ ಹೆಚ್ಚಿನ ಒತ್ತಡದಿಂದ ಬಿರುಕುಗಳುಂಟಾಗಿವೆ. ಬಿರುಕುಗಳಿಂದ ಬೀಳುವ ಜಲ್ಲಿಕಲ್ಲುಗಳು ಪಿಲ್ಲರ್‌ಗಳು ಕುಸಿಯುವ ಬೆದರಿಕೆಯನ್ನು ಸೂಚಿಸುತ್ತವೆ ಎಂದು ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯುವಂತೆ ಲೋಕಾಯುಕ್ತಕ್ಕೆ ಮನವಿ ಸಲ್ಲಿಸುವುದಾಗಿ ಬಿಬಿಎಂಪಿ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ.

ಅಧಿಕಾರಿಗಳು ಪರಿಶೀಲನೆ ನಡೆಸಿ ಸಮಸ್ಯೆ ಇರುವ ಪ್ರದೇಶಗಳನ್ನು ಸರಿಪಡಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್ ತಿಳಿಸಿದ್ದಾರೆ. ಈ ಬಗ್ಗೆ ಪಾಲಿಕೆಗೆ ಸಾರ್ವಜನಿಕರಿಂದ ಯಾವುದೇ ದೂರು ಬಂದಿಲ್ಲ ಎಂದು ಅವರು ಹೇಳಿದ್ದಾರೆ.

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್