
ಬೆಂಗಳೂರಿನಲ್ಲಿ ಇತ್ತೀಚೆಗೆ ನಿರ್ಮಿಸಲಾದ ಎರಡು ಮೇಲ್ಸೇತುವೆಗಳ (flyovers) ಪಿಲ್ಲರ್‌ಗಳಲ್ಲಿ (pillar) ಬಿರುಕು ಕಾಣಿಸಿಕೊಂಡಿದ್ದು, ನಿವಾಸಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ- ಬಿಬಿಎಂಪಿ (BBMP) ಗೆ ದೂರು ಸಲ್ಲಿಸಿದ್ದಾರೆ. ರಾಜಾಜಿನಗರ ಮತ್ತು ಕಾರ್ಡ್ ರಸ್ತೆಯ ಪಶ್ಚಿಮದಲ್ಲಿರುವ ಫ್ಲೈಓವರ್ ಪಿಲ್ಲರ್ ನಲ್ಲಿ ಈ ಬಿರುಕು ಕಾಣಿಸಿದೆ. ಹಲವಾರು ಕಾರ್ಯಕರ್ತರು ಈ ಅಪಾಯವನ್ನು ಬಿಬಿಎಂಪಿಯ ಗಮನಕ್ಕೆ ತಂದಿದ್ದಾರೆ ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಫ್ಲೈಓವರ್‌ಗಳನ್ನು ಮೂರು ಭಾಗಗಳ ಯೋಜನೆಯಲ್ಲಿ ಸೇರಿಸಲಾಗಿದೆ. ಅದರಲ್ಲಿ ಎರಡು ಹಂತಗಳು ಪೂರ್ಣಗೊಂಡಿವೆ ಮತ್ತು ಮೂರನೆಯದು ಮುಂದಿನ ವರ್ಷ ಮಾರ್ಚ್‌ಗೆ ಪೂರ್ಣಗೊಳ್ಳಲಿದೆ. ಮಂಜುನಾಥ ನಗರ ಮತ್ತು ಶಿವನಗರ ಜಂಕ್ಷನ್‌ಗಳಲ್ಲಿರುವ ಪಿಲ್ಲರ್ನಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದೆ. ಕೆಲವು ತಿಂಗಳ ಹಿಂದೆ ಫ್ಲೈಓವರ್‌ಗಳಲ್ಲಿ ಇದೇ ರೀತಿಯ ಸಮಸ್ಯೆ ಕಾಣಿಸಿಕೊಂಡಿದ್ದು ಅದನ್ನು ದುರಸ್ತಿ ಮಾಡಲಾಗಿದೆ ಎಂದು ವರದಿಯಾಗಿದೆ. ಆದರೂ ಸಮಸ್ಯೆ ಮತ್ತೆ ಕಾಣಿಸಿಕೊಂಡಿದೆ.ಆರ್‌ಟಿಐ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಪ್ರಕಾರ, ಮೇಲ್ಸೇತುವೆಗಳನ್ನು ನಿರ್ಮಿಸುವ ಗುತ್ತಿಗೆದಾರರು ಕಳಪೆ ಗುಣಮಟ್ಟದ ಕಾಮಗಾರಿ ಮಾಡಿದ್ದು, ಇದೀಗ ಪ್ರಯಾಣಿಕರಿಗೆ ಅಪಾಯ ತಂದೊಡ್ಡಿದೆ.
ಪಿಲ್ಲರ್‌ಗೆ ವಾಹನಗಳ ಭಾರವನ್ನು ತಡೆದುಕೊಳ್ಳುವ ಸಾಮರ್ಥ್ಯದ ಕೊರತೆಯಿಂದಾಗಿ ಊದಿಕೊಳ್ಳುತ್ತಿವೆ ಹೆಚ್ಚಿನ ಒತ್ತಡದಿಂದ ಬಿರುಕುಗಳುಂಟಾಗಿವೆ. ಬಿರುಕುಗಳಿಂದ ಬೀಳುವ ಜಲ್ಲಿಕಲ್ಲುಗಳು ಪಿಲ್ಲರ್‌ಗಳು ಕುಸಿಯುವ ಬೆದರಿಕೆಯನ್ನು ಸೂಚಿಸುತ್ತವೆ ಎಂದು ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯುವಂತೆ ಲೋಕಾಯುಕ್ತಕ್ಕೆ ಮನವಿ ಸಲ್ಲಿಸುವುದಾಗಿ ಬಿಬಿಎಂಪಿ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ.
ಅಧಿಕಾರಿಗಳು ಪರಿಶೀಲನೆ ನಡೆಸಿ ಸಮಸ್ಯೆ ಇರುವ ಪ್ರದೇಶಗಳನ್ನು ಸರಿಪಡಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್ ತಿಳಿಸಿದ್ದಾರೆ. ಈ ಬಗ್ಗೆ ಪಾಲಿಕೆಗೆ ಸಾರ್ವಜನಿಕರಿಂದ ಯಾವುದೇ ದೂರು ಬಂದಿಲ್ಲ ಎಂದು ಅವರು ಹೇಳಿದ್ದಾರೆ.