AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ. ಕೆ. ಶಿವಕುಮಾರ್

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಬೃಹತ್ ಇ-ಖಾತಾ ಮೇಳಕ್ಕೆ ಚಾಲನೆ ನೀಡಿದರು. ಇ-ಖಾತಾ ಯೋಜನೆಯು ಆಸ್ತಿ ಮಾಲೀಕರಿಗೆ ಅವರ ಹಕ್ಕುಗಳನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತದೆ. ಈ ಯೋಜನೆಯು ಲಂಚ ಕೊಡುವ ಅಗತ್ಯವನ್ನು ತಪ್ಪಿಸಿ, ಪಾರದರ್ಶಕವಾಗಿ ಆಸ್ತಿ ದಾಖಲೆಗಳನ್ನು ಪಡೆಯಲು ಅವಕಾಶ ನೀಡುತ್ತದೆ ಎಂದು ಅವರು ಹೇಳಿದರು. ಜುಲೈ 1 ರಿಂದ ಒಂದು ತಿಂಗಳ ಕಾಲ ಈ ಅಭಿಯಾನ ನಡೆಯಲಿದೆ.

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ. ಕೆ. ಶಿವಕುಮಾರ್
ಇ-ಖಾತಾ ಪತ್ರ ವಿತರಿಸಿದ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಕೃಷ್ಣಭೈರೇಗೌಡ
ವಿವೇಕ ಬಿರಾದಾರ
|

Updated on:Jun 29, 2025 | 8:43 PM

Share

ಬೆಂಗಳೂರು, ಜೂ.29: “ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇ ಖಾತಾ (E Khata) ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು. “ಕರ್ನಾಟಕದ ಗ್ಯಾರಂಟಿ ಸರ್ಕಾರವು ಇಂದು ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಡುತ್ತಿದೆ. ಇಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಿದ್ದೇವೆ. ನಾವು ಕೇವಲ ಮತಕ್ಕೆ ರಾಜಕಾರಣ ಮಾಡಿದವರಲ್ಲ. ನಿಮ್ಮ ಹಿತಕ್ಕೆ, ನಿಮ್ಮ ಬದುಕು ಹಾಗೂ ನಿಮ್ಮ ಆಸ್ತಿ ರಕ್ಷಣೆಗೆ ನಾವು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ” ಎಂದು ಹೇಳಿದರು.

“ಉಳುವವನಿಗೆ ಭೂಮಿ ಕೊಟ್ಟಿದ್ದು, ಎ ಖಾತಾ ಇಲ್ಲದವರಿಗೆ ಬಿ ಖಾತಾ ಕೊಟ್ಟಿದ್ದೇವೆ, ಬಗರ್ ಹುಕುಂ ಸಾಗುವಳಿ ರೈತರಿಗೆ ಭೂಮಿ ನೀಡಿದ್ದೇವೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಅಕ್ರಮ ಸಕ್ರಮ ಯೋಜನೆ ಮಾಡಿದ್ದೆವು. ಭೂಮಿ ಯೋಜನೆ ಮೂಲಕ ರೈತರಿಗೆ ಕೇವಲ 5 ರೂ.ಗೆ ಖಾತಾ ದಾಖಲೆ ನೀಡಿದ್ದೇವೆ” ಎಂದರು.

ಇದನ್ನೂ ಓದಿ
Image
ಜುಲೈ 1 ರಿಂದ ಮನೆ ಬಾಗಿಲಿಗೆ ಬರಲಿದೆ ಕರಡು ಇ ಖಾತಾ: ಬಿಬಿಎಂಪಿ ಮಹತ್ವದ ಕ್ರಮ
Image
ಕಟ್ಟಡ ನಕ್ಷೆಗೆ ಇನ್ಮುಂದೆ ಇ ಖಾತಾ ಕಡ್ಡಾಯ: ಆಸ್ತಿ ಮಾಲೀಕರು ಕಂಗಾಲು
Image
ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತೆ ಕಡ್ಡಾಯ: ಇ-ಖಾತೆ ಹೇಗೆ ಪಡೆಯಬೇಕು?
Image
ಈ ಸೈಟ್​ನಲ್ಲಿ ಅರ್ಜಿ ಸಲ್ಲಿಸಿದ್ರೆ ಎರಡೇ ದಿನಗಳಲ್ಲಿ ಸಿಗುತ್ತೆ ಇ ಖಾತಾ!

“ನಿಮ್ಮ ಆಸ್ತಿಗಳ ದಾಖಲೆ ಸರಿಪಡಿಸಲು ಪಾಲಿಕೆ ವ್ಯಾಪ್ತಿಯಲ್ಲಿ ನಿಮ್ಮ ಆಸ್ತಿ ದಾಖಲೆ ಸ್ಕ್ಯಾನ್ ಮಾಡಿಸಲಾಗಿದೆ. ನಿಮ್ಮ ಕ್ಷೇತ್ರದಲ್ಲಿ ಇಂದು ಯಾರೂ ಲಂಚ ನೀಡದೇ, ನಿಮ್ಮ ಆಸ್ತಿ ಖಾತಾ ದಾಖಲೆ ನೀಡಬೇಕು ಎಂಬುದು ನನ್ನ ಆಲೋಚನೆ. ನನ್ನ ಈ ಕನಸಿನ ಯೋಜನೆಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಬೆಂಬಲವಾಗಿ ನಿಂತಿದ್ದಾರೆ” ಎಂದು ತಿಳಿಸಿದರು.

“ಇತ್ತೀಚೆಗೆ ವಿಜಯನಗರ ಜಿಲ್ಲೆಯಲ್ಲಿ ತಾಂಡಾ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡಿ 1,11,111 ಜನರಿಗೆ ಉಚಿತವಾಗಿ ದಾಖಲೆ ಪತ್ರ ನೀಡಿದ್ದೇವೆ. ಆಮೂಲಕ ನಮ್ಮ ಸರ್ಕಾರ ಆರನೇ ಗ್ಯಾರಂಟಿ ಯೋಜನೆ ಭೂ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ” ಎಂದರು.

“ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಆಸ್ತಿಗಳಿದ್ದು, ಈ ಎಲ್ಲಾ ಆಸ್ತಿಗಳ ಡಿಜಿಟಲಿಕರಣಗೊಳಿಸಿ ನಿಮ್ಮ ಮನೆ ಬಾಗಿಲಿಗೆ ನೀಡುವಂತೆ ಕ್ರಾಂತಿಕಾರಿ ಬದಲಾವಣೆ ತರಲು ತೀರ್ಮಾನಿಸಿದ್ದೇನೆ. ನೀವು ನಿಮ್ಮ ಆಸ್ತಿ ದಾಖಲೆಗಳನ್ನು ಅಪ್ ಲೋಡ್ ಮಾಡಿ ಈ ಖಾತಾ ಮಾಡಿಕೊಳ್ಳಿ. ಒಂದು ವೇಳೆ ನಿಮಗೆ ಇದು ಸಾಧ್ಯವಾಗದೆ ಇದ್ದರೆ ನಿಮಗೆ ನೀಡಲಾಗಿರುವ ದೂರವಾಣಿಗೆ ಕರೆ ಮಾಡಿ. ಅವರೇ ಬಂದು ನಿಮ್ಮ ದಾಖಲೆ ಅಪ್ ಲೋಡ್ ಮಾಡಿ ಇ ಖಾತಾ ಮಾಡುತ್ತಾರೆ” ಎಂದು ವಿವರಿಸಿದರು.

“ಪಾಲಿಕೆ ವ್ಯಾಪ್ತಿಯ 25 ಲಕ್ಷ ಆಸ್ತಿಗಳ ಪೈಕಿ 5 ಲಕ್ಷ ಆಸ್ತಿ ದಾಖಲೆಗಳನ್ನು ಈ ರೀತಿ ವಿತರಣೆ ಮಾಡಲಾಗಿದೆ. ಬ್ಯಾಟರಾಯನಪುರ ಕ್ಷೇತ್ರದಲ್ಲಿ 50 ಸಾವಿರ ಮನೆಗಳಿಗೆ ಈ ದಾಖಲೆ ವಿತರಣೆ ಮಾಡಲಾಗಿದೆ. ನಿಮ್ಮ ಗುರುತಿನ ಚೀಟಿಗೆ ಹೇಗೆ ಪ್ರತ್ಯೇಕ ಸಂಖ್ಯೆ ನೀಡಲಾಗಿದೆಯೋ ಅದೇ ರೀತಿ ನಿಮ್ಮ ಆಸ್ತಿಗಳಿಗೂ ಪ್ರತ್ಯೇಕ ಸಂಖ್ಯೆ ನೀಡಲು ನಿಮ್ಮ ಸರ್ಕಾರ ಬದ್ಧವಾಗಿದೆ” ಎಂದರು.

“ಜುಲೈ 1ರಿಂದ ಒಂದು ತಿಂಗಳ ಕಾಲ ಇ ಖಾತಾ ಅಭಿಯಾನ ನಡೆಯಲಿದೆ. ಈ ಅಭಿಯಾನದಲ್ಲಿ ನೀವುಗಳು ಭಾಗವಹಿಸಿ ನಿಮ್ಮ ಆಸ್ತಿ ಇ ಖಾತೆ ಮಾಡಿಸಿಕೊಳ್ಳಿ ವಂಚನೆಯಿಂದ ತಪ್ಪಿಸಿಕೊಳ್ಳಿ. ನಂತರ ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ಇಂತಹ ಕಾರ್ಯಕ್ರಮ ಮಾಡುತ್ತೇವೆ. ನಿಮಗೆ ನಮ್ಮ ಅಧಿಕಾರಿಗಳು, ಕಾರ್ಯಕರ್ತರು ಸಹಕಾರ ನೀಡಲಿದ್ದಾರೆ” ಎಂದು ಹೇಳಿದರು.

“ಈ ಸರ್ಕಾರ ಬೆಂಗಳೂರಿನಲ್ಲಿ ದೊಡ್ಡ ಬದಲಾವಣೆ ತರಲು ಮುಂದಾಗಿದೆ. ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಹಾಗೂ ಸಮಗ್ರ ಅಭಿವೃದ್ಧಿಗೆ 1 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ. ಈ ಪೈಕಿ ಪಿಆರ್ ಆರ್ ರಸ್ತೆ ನಿಮ್ಮ ಕ್ಷೇತ್ರದಲ್ಲಿ ಹಾದು ಹೋಗಲಿದೆ” ಎಂದು ಹೇಳಿದರು.

“ಇನ್ನು ಮುಂದೆ ನೀವು ಮನೆ ಕಟ್ಟುವಾಗ ಕಟ್ಟಡ ನಕ್ಷೆ ಅನುಮತಿ ಕಚೇರಿ ಅಲೆಯುವಂತಿಲ್ಲ. ನಂಬಿಕೆ ನಕ್ಷೆ ಯೋಜನೆ ಮೂಲಕ 50×80 ವಿಸ್ತೀರ್ಣವರೆಗಿನ ನಿವೇಶನವರೆಗೂ ಕಟ್ಟಡ ನಕ್ಷೆಯನ್ನು ನೋಂದಾಯಿತ ಇಂಜಿನಿಯರ್​ಗಳ ಮೂಲಕ ಒಂದೇ ದಿನದಲ್ಲಿ ಅನುಮತಿ ಪಡೆಯಬಹುದು. ಈ ಯೋಜನೆ ಮೂಲಕ ನಾವು ಈವರೆಗೂ 9 ಸಾವಿರ ಕಟ್ಟಡ ನಕ್ಷೆಗಳಿಗೆ ಮಂಜೂರಾತಿ ನೀಡಿದ್ದೇವೆ. ಇನ್ನು ನಗರದಲ್ಲಿ ಆಸ್ತಿ ತೆರಿಗೆ ಕಟ್ಟದವರಿಗೆ ಒನ್ ಟೈಮ್ ಸೆಟ್ಟಲ್ಮೆಂಟ್ ಯೋಜನೆ ಮೂಲಕ ಒಂದು ಅವಕಾಶ ನೀಡಲಾಗಿತ್ತು” ಎಂದು ಹೇಳಿದರು.

ಟ್ವಿಟರ್ ಪೋಸ್ಟ್​

“ಈ ಕ್ಷೇತ್ರದಲ್ಲಿ ಅಗತ್ಯ ಮೇಲ್ಸೇತುವೆ, ರಸ್ತೆ ಅಭಿವೃದ್ಧಿಗೆ ನೂರಾರು ಕೋಟಿ ಮೊತ್ತದ ಯೋಜನೆ ಹಮ್ಮಿಕೊಳ್ಳಲಾಗಿದೆ. ಕೃಷ್ಣ ಭೈರೇಗೌಡ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರಿನ ಕೊಳಚೆ ನೀರು ಕಾಲುವೆಗಳ ತಡೆಗೋಡೆ ಎತ್ತರಿಸಲು 2 ಸಾವಿರ ಕೋಟಿ ಅನುದಾನ ತಂದಿದ್ದಾರೆ” ಎಂದರು.

“ಇತ್ತೀಚೆಗೆ ಸುಪ್ರೀಂಕೋರ್ಟ್ ಒಂದು ತೀರ್ಪು ನೀಡಿದ್ದು, ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಿದರೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಆದೇಶ ಹೊರಡಿಸಿದೆ. ಈಗಾಗಲೇ ಮನೆ ಕಟ್ಟಿರುವ ಸಾರ್ವಜನಿಕರಿಗೆ ನಾವು ಹೇಗೆ ಸಹಾಯ ಮಾಡಬಹುದು ಎಂದು ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗುತ್ತಿದೆ” ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ನಿಮ್ಮ ಪಂಚಾಯ್ತಿಯಲ್ಲೂ ಸಿಗುತ್ತೆ ಇ-ಖಾತಾ: ಇದರ ಉಪಯೋಗವೇನು?

“ನಾವು ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇವೆ ಎಂಬುದಕ್ಕಿಂತ, ಅಧಿಕಾರ ಇದ್ದಾಗ ನಾವು ಏನು ಸಾಕ್ಷಿಗುಡ್ಡೆ ಬಿಟ್ಟು ಹೋಗುತ್ತೇವೆ ಎಂಬುದು ಮುಖ್ಯ. ಬೆಂಗಳೂರು ಕಟ್ಟಿದ ಕೆಂಪೇಗೌಡರನ್ನು, ವಿಧಾನ ಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ ಹಾಗೂ ಬೆಂಗಳೂರನ್ನು ಅಭಿವೃದ್ಧಿ ಮಾಡಿದ ಎಸ್.ಎಂ ಕೃಷ್ಣ ಅವರನ್ನು ನಾವು ಸ್ಮರಿಸುತ್ತೇವೆ. ಅದೇ ರೀತಿ ನೀವು ನಿಮ್ಮ ಆಸ್ತಿ ದಾಖಲೆ ನೀಡಿ, ನಿಮ್ಮ ಆಸ್ತಿ ಕಾಪಾಡಿದ ಕೃಷ್ಣ ಭೈರೇಗೌಡ ಅವರನ್ನು ಸದಾ ಸ್ಮರಿಸಬೇಕು. ಮುಂದಿನ ಚುನಾವಣೆಯಲ್ಲಿ ನೀವು ಕೃಷ್ಣ ಭೈರೇಗೌಡ ಅವರನ್ನು 1 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Sun, 29 June 25

ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ