AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನ.04 ರಂದು ಕ್ರಿಕೆಟ್​ ವಿಶ್ವಕಪ್ ಪಂದ್ಯ; ಪಾರ್ಕಿಂಗ್​ ಮಾಹಿತಿ ಇಲ್ಲಿದೆ

ಕ್ರಿಕೆಟ್ ವಿಶ್ವಕಪ್(Cricket World Cup)​ನ 35 ನೇ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ಸೆಣಸಾಡಲಿವೆ. ಈ ಹಿನ್ನೆಲೆ ಸಾರ್ವಜನಿಕರಿಗೆ ಸಂಚಾರ ಪೊಲೀಸರು ಪಾರ್ಕಿಂಗ್​ಗೆ ವ್ಯವಸ್ಥೆ ಕುರಿತು ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನ.04 ರಂದು ಕ್ರಿಕೆಟ್​ ವಿಶ್ವಕಪ್ ಪಂದ್ಯ; ಪಾರ್ಕಿಂಗ್​ ಮಾಹಿತಿ ಇಲ್ಲಿದೆ
ಬೆಂಗಳೂರಿನಲ್ಲಿ ಕ್ರಿಕೆಟ್​ ವಿಶ್ವಕಪ್ ಪಂದ್ಯ
Jagadisha B
| Edited By: |

Updated on:Nov 03, 2023 | 6:23 PM

Share

ಬೆಂಗಳೂರು, ನ.03: ಕ್ರಿಕೆಟ್​ ವಿಶ್ವಕಪ್ ಈ ಬಾರಿ ಭಾರತದಲ್ಲಿಯೇ​ ನಡೆಯುತ್ತಿದ್ದು, ನಾಳೆ(ನ.04) ಬೆಂಗಳೂರಿನ(Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ವಿಶ್ವಕಪ್(Cricket World Cup)​ನ 35 ನೇ ಪಂದ್ಯವನ್ನು ಆಯೋಜಿಸಲಾಗಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ಸೆಣಸಾಡಲಿವೆ. ಈ ಹಿನ್ನೆಲೆ ಸಾರ್ವಜನಿಕರಿಗೆ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. ಹೌದು, ಯಾವುದೇ ರೀತಿಯಾಗಿ ವಾಹನ ಸವಾರರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಬೆಳಗ್ಗೆ 7ರಿಂದ ರಾತ್ರಿ 11ರವರೆಗೆ ಕೆಲ ರಸ್ತೆಗಳಲ್ಲಿ ನಿಷೇಧ ಮಾಡಲಾಗಿದೆ. ಅದರಂತೆ ಎಲ್ಲೆಲ್ಲಿ ಪಾರ್ಕಿಂಗ್​ಗೆ ವ್ಯವಸ್ಥೆ ಹಾಗೂ ನಿಲುಗಡೆಗೆ ನಿಷೇಧಿಸಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

ಈ ರಸ್ತೆಗಳಲ್ಲಿ ಪಾರ್ಕಿಂಗ್​ ನಿಷೇಧ

ಈಗಾಗಲೇ ಟ್ರಾಫಿಕ್​ ಕಿರಿಕಿರಿಯಿಂದ ಬೆಂಗಳೂರಿಗರು ಹೈರಾಣಾಗಿದ್ದಾರೆ. ಜೊತೆಗೆ ವಿಶ್ವಕಪ್​ ಪಂದ್ಯಾವಳಿಯನ್ನು ವೀಕ್ಷಿಸಲು ಬರುವವರಿಂದ ಕೂಡ ಟ್ರಾಫಿಕ್ ಜಾಮ್ ಉಂಟಾಗಲಿದ್ದು, ಅದ​ನ್ನು ತಡೆಗಟ್ಟುವ ಉದ್ದೇಶದಿಂದ ​ಕ್ವೀನ್ಸ್ ರಸ್ತೆ, ಎಂ ಜಿ ರಸ್ತೆ, ರಾಜ ಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೆಂಟ್‌ ಮಾರ್ಕ್ಸ್‌ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ ರಸ್ತೆ, ಮ್ಯೂಸಿಯಂ ರೋಡ್, ಕಸ್ತೂರಬಾ ರೋಡ್, ಡಾ. ಬಿ ಆರ್ ಅಂಬೇಡ್ಕರ್ ರಸ್ತೆ, ಲ್ಯಾವೆಲ್ಲಿ ರಸ್ತೆ, ವಿಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಇದನ್ನೂ ಓದಿ:ಕೋಲ್ಕತ್ತಾದಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಬೀಸಿದ ನಾಲ್ವರ ಬಂಧನ

 ಪಾರ್ಕಿಂಗ್​ಗೆ ಅವಕಾಶ

ಇನ್ನು ಪಂದ್ಯಾವಳಿ ವಿಕ್ಷಿಸಲು ಬರುವವರಿಗೆ ಕಿಂಗ್ಸ್ ರೋಡ್, ಯುಬಿ ಸಿಟಿ ಪಾರ್ಕಿಂಗ್ ಸ್ಥಳ ಹಾಗೂ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿ ಪಾರ್ಕಿಂಗ್​ಗೆ ಅವಕಾಶ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಇರುವ ದಿನ ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ

ಕ್ರಿಕೆಟ್ ಪ್ರೇಮಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಕ್ಟೋಬರ್​ 18 ರಂದು ಗುಡ್​ನ್ಯೂಸ್ ನೀಡಿತ್ತು. ಹೌದು, ಬೆಂಗಳೂರಿನಲ್ಲಿ ಯಾವಾಗ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಇರುತ್ತದೆಯೋ ಅಂದಿನ ದಿನ ಮೆಟ್ರೋ ರೈಲು ಸೇವೆಯ ಅವಧಿಯನ್ನು ವಿಸ್ತರಣೆ ಮಾಡಲಾಗುವುದು ಎಂದಿತ್ತು. ಇದರ ಜೊತೆಗೆ ವಿಶೇಷ ದರದ ರಿಯಾಯಿತಿಯನ್ನೂ ಕೂಡ ಘೋಷಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Fri, 3 November 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ