ಬೆಂಗಳೂರು, ನ.03: ಕ್ರಿಕೆಟ್ ವಿಶ್ವಕಪ್ ಈ ಬಾರಿ ಭಾರತದಲ್ಲಿಯೇ ನಡೆಯುತ್ತಿದ್ದು, ನಾಳೆ(ನ.04) ಬೆಂಗಳೂರಿನ(Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ವಿಶ್ವಕಪ್(Cricket World Cup)ನ 35 ನೇ ಪಂದ್ಯವನ್ನು ಆಯೋಜಿಸಲಾಗಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ಸೆಣಸಾಡಲಿವೆ. ಈ ಹಿನ್ನೆಲೆ ಸಾರ್ವಜನಿಕರಿಗೆ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. ಹೌದು, ಯಾವುದೇ ರೀತಿಯಾಗಿ ವಾಹನ ಸವಾರರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಬೆಳಗ್ಗೆ 7ರಿಂದ ರಾತ್ರಿ 11ರವರೆಗೆ ಕೆಲ ರಸ್ತೆಗಳಲ್ಲಿ ನಿಷೇಧ ಮಾಡಲಾಗಿದೆ. ಅದರಂತೆ ಎಲ್ಲೆಲ್ಲಿ ಪಾರ್ಕಿಂಗ್ಗೆ ವ್ಯವಸ್ಥೆ ಹಾಗೂ ನಿಲುಗಡೆಗೆ ನಿಷೇಧಿಸಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.
ಈಗಾಗಲೇ ಟ್ರಾಫಿಕ್ ಕಿರಿಕಿರಿಯಿಂದ ಬೆಂಗಳೂರಿಗರು ಹೈರಾಣಾಗಿದ್ದಾರೆ. ಜೊತೆಗೆ ವಿಶ್ವಕಪ್ ಪಂದ್ಯಾವಳಿಯನ್ನು ವೀಕ್ಷಿಸಲು ಬರುವವರಿಂದ ಕೂಡ ಟ್ರಾಫಿಕ್ ಜಾಮ್ ಉಂಟಾಗಲಿದ್ದು, ಅದನ್ನು ತಡೆಗಟ್ಟುವ ಉದ್ದೇಶದಿಂದ ಕ್ವೀನ್ಸ್ ರಸ್ತೆ, ಎಂ ಜಿ ರಸ್ತೆ, ರಾಜ ಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೆಂಟ್ ಮಾರ್ಕ್ಸ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ ರಸ್ತೆ, ಮ್ಯೂಸಿಯಂ ರೋಡ್, ಕಸ್ತೂರಬಾ ರೋಡ್, ಡಾ. ಬಿ ಆರ್ ಅಂಬೇಡ್ಕರ್ ರಸ್ತೆ, ಲ್ಯಾವೆಲ್ಲಿ ರಸ್ತೆ, ವಿಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಇದನ್ನೂ ಓದಿ:ಕೋಲ್ಕತ್ತಾದಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಬೀಸಿದ ನಾಲ್ವರ ಬಂಧನ
ಇನ್ನು ಪಂದ್ಯಾವಳಿ ವಿಕ್ಷಿಸಲು ಬರುವವರಿಗೆ ಕಿಂಗ್ಸ್ ರೋಡ್, ಯುಬಿ ಸಿಟಿ ಪಾರ್ಕಿಂಗ್ ಸ್ಥಳ ಹಾಗೂ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿ ಪಾರ್ಕಿಂಗ್ಗೆ ಅವಕಾಶ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಕ್ರಿಕೆಟ್ ಪ್ರೇಮಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಕ್ಟೋಬರ್ 18 ರಂದು ಗುಡ್ನ್ಯೂಸ್ ನೀಡಿತ್ತು. ಹೌದು, ಬೆಂಗಳೂರಿನಲ್ಲಿ ಯಾವಾಗ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಇರುತ್ತದೆಯೋ ಅಂದಿನ ದಿನ ಮೆಟ್ರೋ ರೈಲು ಸೇವೆಯ ಅವಧಿಯನ್ನು ವಿಸ್ತರಣೆ ಮಾಡಲಾಗುವುದು ಎಂದಿತ್ತು. ಇದರ ಜೊತೆಗೆ ವಿಶೇಷ ದರದ ರಿಯಾಯಿತಿಯನ್ನೂ ಕೂಡ ಘೋಷಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:22 pm, Fri, 3 November 23