Crime News: ಮಹಿಳೆಯ ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಹೆದರಿಸಿ ಹಣಕ್ಕೆ ಬೇಡಿಕೆ; ಆರೋಪಿ ಬಂಧನ

ಆರೋಪಿ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ. ಈ ವೇಳೆ ನಗ್ನ ವಿಡಿಯೋ ಮತ್ತು ಪೋಟೊ ಕಳಿಸುವಂತೆ ಒತ್ತಾಯಿಸಿದ್ದ. ಆರೋಪಿ ಮಾತು ನಂಬಿ ನಗ್ನ ಪೋಟೋ ಮತ್ತು ವಿಡಿಯೋ ಕಳುಹಿಸಿದ್ದ ಮಹಿಳೆಯನ್ನು ಬಳಿಕ ಬ್ಲ್ಯಾಕ್​ಮೇಲ್ ಮಾಡಿದ್ದ ಎಂದು ತಿಳಿದುಬಂದಿದೆ.

Crime News: ಮಹಿಳೆಯ ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಹೆದರಿಸಿ ಹಣಕ್ಕೆ ಬೇಡಿಕೆ; ಆರೋಪಿ ಬಂಧನ
ಆರೋಪಿ ಪ್ರಶಾಂತ್
Follow us
TV9 Web
| Updated By: ganapathi bhat

Updated on: Mar 04, 2022 | 9:30 AM

ಬೆಂಗಳೂರು: ಮಹಿಳೆಯ ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಹೆದರಿಸಿ 50 ಸಾವಿರ ರೂಪಾಯಿ ಪಡೆದು, ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿ ಪ್ರಶಾಂತ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಕಿರುಕುಳ ತಾಳಲಾರದೆ ಮಹಿಳೆ ಒಬ್ಬರು ಕೇಂದ್ರ ವಿಭಾಗದ ಸಿಇಎನ್ ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆ ದೂರು ಆಧರಿಸಿ ವಿಜಯಪುರ ಮೂಲದ ಆರೋಪಿ ಪ್ರಶಾಂತ್ ಬಂಧಿಸಲಾಗಿದೆ.

ಅಪರಿಚಿತ ವ್ಯಕ್ತಿ ಮೆಸೇಜ್​ಗೆ ಪ್ರತಿಕ್ರಿಯಿಸಿ ಮಹಿಳೆ ಸಂಕಷ್ಟ ತಂದುಕೊಂಡಿದ್ದರು. ಮೆಸೇಜ್ ಮೂಲಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು. ಈ ನಡುವೆ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಅಸಾಮಿ, ಆರೋಪಿ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ. ಈ ವೇಳೆ ನಗ್ನ ವಿಡಿಯೋ ಮತ್ತು ಪೋಟೊ ಕಳಿಸುವಂತೆ ಒತ್ತಾಯಿಸಿದ್ದ. ಆರೋಪಿ ಮಾತು ನಂಬಿ ನಗ್ನ ಪೋಟೋ ಮತ್ತು ವಿಡಿಯೋ ಕಳುಹಿಸಿದ್ದ ಮಹಿಳೆಯನ್ನು ಬಳಿಕ ಬ್ಲ್ಯಾಕ್​ಮೇಲ್ ಮಾಡಿದ್ದ ಎಂದು ತಿಳಿದುಬಂದಿದೆ.

ಬ್ಲಾಕ್ ಮೇಲ್​ಗೆ ಹೆದರಿ 50 ಸಾವಿರ ಹಣ ಕಳಿಸಿದ್ದ ಮಹಿಳೆ, ಬಳಿಕ ಆರೋಪಿ ಮತ್ತಷ್ಟು ಹಣಕ್ಕೆ ಡಿಮಾಂಡ್ ಮಾಡಿದ್ದ. ಆತನ ಕಾಟ ತಾಳಲಾರದೆ ಕೊನೆಗೆ ಕೇಂದ್ರ ವಿಭಾಗ ಸಿಇಎನ್ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆ ವಿಜಯಪುರ ಮೂಲದ ಪ್ರಶಾಂತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸೋದಾಗಿ ಲಕ್ಷ ಲಕ್ಷ ವಂಚನೆ:

ಬೆಂಗಳೂರು: ರೇವಾ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸೋದಾಗಿ ವಂಚಿಸಿದ್ದ ಪ್ರಕರಣಕ್ಕೆ  ಸಂಬಂಧಿಸಿದಂತ್ತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹರ್ಷ (೨೪), ಚೇತನ್(೨೭) ಇಬ್ಬರೂ ಬಂಧಿತ ಆರೋಪಿಗಳಾಗಿದ್ದಾರೆ. ಜನವರಿ‌ ೨೮ ರಂದು ರಾಜೇಶ್ವರ್ ಎಂಬಾತನನ್ನು ಬಂಧಿಸಿದ್ದ ಪೊಲೀಸರು, ಅದೇ ಕೇಸ್​ನಲ್ಲಿ ಭಾಗಿಯಾಗಿದ್ದ ಒಟ್ಟು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸೋದಾಗಿ ಯುವತಿಗೆ ೧.೨೭ ಲಕ್ಷ ಹಣ ಪಡೆದು ವಂಚನೆ ಮಾಡಿದ್ರು. ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆಸಾಮಿಗಳು ಎಸ್ಕೇಪ್ ಆಗಿದ್ದರು.

ಏರ್ ಟೆಲ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಹರ್ಷ ಮತ್ತು ಚೇತನ್, ಜನರನ್ನು ಮೋಸ ಮಾಡಲು ಇವರು ಮಾಡಿಕೊಳ್ತಿದ್ದ ಪ್ಲಾನ್ ಭಯಾನಕವಾಗಿತ್ತು.  ಸಿಮ್ ಖರೀದಿಸಲು ಬರುವವರ ಬಳಿ ಒಂದಕ್ಕಿಂತಿ ಹೆಚ್ಚು ಫಾರ್ಮ್ ಗೆ ಸಹಿ ಮಾಡಿಸಿಕೊಳ್ಳುತ್ತಿದ್ದರು, ಒಂದಕ್ಕಿಂತ ಹೆಚ್ಚು ಫೋಟೊ ಮತ್ತು ಒಂದಕ್ಕಿಂತ ಹೆಚ್ಚು ಬೆರಳು ಮುದ್ರೆ ಪಡೆದುಕೊಳ್ಳುತ್ತಿದ್ದರು. ಒಂದು ಸಿಮ್ ಕಾರ್ಡ್ ಗ್ರಾಹಕರಿಗೆ ನೀಡಿ, ಉಳಿದ ಸಿಮ್ ಕಾರ್ಡ್ ಸೈಬರ್ ವಂಚಕರಿಗೆ ಕೊಡುತ್ತಿದ್ದರು. ಈಶಾನ್ಯ ವಿಭಾಗ ಸಿಇಎನ್ ಪೊಲೀಸರ ಕಾರ್ಯಾಚರಣೆಯಿಂದ ಸದ್ಯ ಬಂಧಿತರಿಂದ ೭ ಲಕ್ಷ ನಗದು,೧೨೦ ಗ್ರಾಂ ಒಡವೆಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಅನ್ಯ ಧರ್ಮದ ಯುವತಿಯನ್ನ ಮದುವೆಯಾಗಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೋರ್ವನ ಬರ್ಬರ ಕೊಲೆ

ಇದನ್ನೂ ಓದಿ: ದಾಂಡೇಲಿ ಪ್ರವಾಸಕ್ಕೆ ಬಂದಿದ್ದ ಛತ್ತಿಸಗಢದ ವೈದ್ಯಕೀಯ ವಿದ್ಯಾರ್ಥಿನಿ, ಸೈಕ್ಲಿಂಗ್ ಮಾಡುವಾಗ ಆಯತಪ್ಪಿ ಬಿದ್ದು ಸಾವು

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್