AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ, ಜ್ಯುವೆಲ್ಲರಿಗೆ ಕನ್ನ ಕೊರೆದು 2 ಕೆಜಿ ಚಿನ್ನಾಭರಣ ಕಳವು

ಹೆಂಡತಿ ಗಾರ್ಮೆಂಟ್ಸ್​ನಲ್ಲಿ ಕೆಲಸಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಮೂಲದ ಕುಟುಂಬದ ತಂದೆ ಹಾಗೂ ಮಗಳು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಬ್ಬಗೋಡಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ, ಜ್ಯುವೆಲ್ಲರಿಗೆ ಕನ್ನ ಕೊರೆದು 2 ಕೆಜಿ ಚಿನ್ನಾಭರಣ ಕಳವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 23, 2022 | 10:56 PM

Share

ಬೆಂಗಳೂರು: ಜ್ಯುವೆಲ್ಲರಿ ಅಂಗಡಿಗೆ ಕನ್ನ ಕೊರೆದು 2 ಕೆಜಿ ಚಿನ್ನಾಭರಣ ಕಳವು ಮಾಡಿದ ಘಟನೆ ಬೆಂಗಳೂರಿನ ಹೆಣ್ಣೂರು ಬಳಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ. ಶ್ರೀರಾಘವೇಂದ್ರ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಿನ್ನೆ ರಾತ್ರಿ ಕಳ್ಳತನ ಕೃತ್ಯ ನಡೆಸಲಾಗಿದೆ. ಬಳಿಕ, ಕಳ್ಳರು ಚಿನ್ನದಂಗಡಿಯ ಸಿಸಿಟಿವಿ ಡಿವಿಆರ್ ಹೊತ್ತೊಯ್ದಿದ್ದಾರೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಆರ್ಥಿಕ ಸಂಕಷ್ಟ ಹಿನ್ನೆಲೆ ಮಗಳನ್ನ ಹತ್ಯೆಗೈದು ತಂದೆ ಆತ್ಮಹತ್ಯೆ

ಆರ್ಥಿಕ ಸಂಕಷ್ಟ ಹಿನ್ನೆಲೆ ಮಗಳನ್ನ ಹತ್ಯೆಗೈದು ತಂದೆ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಘಟನೆ ನಡೆದಿದೆ. ಚಾರ್ಜರ್​ ವೈರ್​ನಿಂದ ಕುತ್ತಿಗೆ ಬಿಗಿದು ಸಮೀಕ್ಷಾ (7) ಹತ್ಯೆ ನಡೆಸಲಾಗಿದೆ. ಮಗಳನ್ನ ಹತ್ಯೆಗೈದು ವಿಜಯಕುಮಾರ್ (39) ನೇಣಿಗೆ ಶರಣಾಗಿದ್ದಾರೆ. ಹೆಂಡತಿ ಗಾರ್ಮೆಂಟ್ಸ್​ನಲ್ಲಿ ಕೆಲಸಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಮೂಲದ ಕುಟುಂಬದ ತಂದೆ ಹಾಗೂ ಮಗಳು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಬ್ಬಗೋಡಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಎಸ್​ಎಸ್​ಎಲ್​ಸಿ ಪೂರ್ವ ಸಿದ್ದತಾ ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರದಲ್ಲಿ ಎಸ್​ಎಸ್​ಎಲ್​ಸಿ ಪೂರ್ವ ಸಿದ್ದತಾ ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಗರದ 1ನೇ ವಾರ್ಡನಲ್ಲಿ ಘಟನೆ ನಡೆದಿದೆ. ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಬೇಬಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಬೇಬಿ, ನಿನ್ನೆ ಪರೀಕ್ಷೆಗೆ ಹಾಜರಾಗಿರಲಿಲ್ಲ.

ಇಂದು ಪರೀಕ್ಷೆಗೆ ಹಾಜರಾಗುವಂತೆ ಶಿಕ್ಷಕರು ಮನವಿ ಮಾಡಿದ್ದರು. ಮನವಿ ಮಾಡಿ ಬೇಬಿ ಸಹಪಾಠಿಗಳನ್ನು ವಿದ್ಯಾರ್ಥಿನಿಯ ಮನೆಗೆ ಕಳುಹಿಸಿದ್ರು. ಶಾಲೆ ಹಾಗೂ ಪರೀಕ್ಷೆಗೆ ಹೋಗಲು ಇಷ್ಟವಿಲ್ಲವೆಂದು ಆಕೆ ಹಠ ಹಿಡಿದಿದ್ದರು. ತಾಯಿಯ ಜೊತೆ ಹಠ ಮಾಡಿದ್ದ ಬೇಬಿ, ನಂತರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತರ ಅಪರಾಧ ಸುದ್ದಿಗಳು

ಬೆಂಗಳೂರು ಗೃಹ ಸಚಿವ ಆರಗ ಜ್ಞಾನೇಂದ್ರ ಬಳಸುವ ಸರ್ಕಾರಿ ಕಾರ್​ಗೆ ಇನ್ಶೂರೆನ್ಸ್ ಲ್ಯಾಪ್ಸ್ ಆಗಿದೆ. KA 01 GB 6444 ಸಂಖ್ಯೆಯ ಸರ್ಕಾರಿ ಕಾರಿನ ಇನ್ಶೂರೆನ್ಸ್​ ಜ.5ರ 2021ರಲ್ಲಿ ಲ್ಯಾಪ್ಸ್ ಆಗಿದೆ ಎಂದು ತಿಳಿದುಬಂದಿದೆ.

ಬಾಗಲಕೋಟೆಯ ಹುನಗುಂದ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ಜಗದೀಶ್​ಗೌಡ ಬಳಗೌಡರ ಹಾಗೂ ಸಹೋದರರ ಬಣವೆಗಳು ಬೆಂಕಿಗಾಹುತಿ ಆದ ಘಟನೆ ನಡೆದಿದೆ. ಸಾವಿರ ರೂಪಾಯಿ ಮೌಲ್ಯದ ಬಣವೆ ಬೆಂಕಿಗಾಹುತಿ ಆಗಿದೆ.

ಹಾಸನದ ಮಾರೇನಹಳ್ಳಿಯಲ್ಲಿ ಜಮೀನಿನಲ್ಲಿ ಕೆಲಸ ಮಾಡುವಾಗ ವಿದ್ಯುತ್​ ತಂತಿ ತುಂಡಾಗಿ ಮೈಮೇಲೆ ಬಿದ್ದು ವಿದ್ಯುತ್​ ಪ್ರವಹಿಸಿ ಶಶಿಕುಮಾರ್ (32) ಸಾವನ್ನಪ್ಪಿದ ಘಟನೆ ನಡೆದಿದೆ. ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Crime Updates: ತಲಾ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಬಿಬಿಎಂಪಿ ಸಿಬ್ಬಂದಿ, ಬೆಸ್ಕಾಂ ಅಧಿಕಾರಿ ಎಸಿಬಿ ಬಲೆಗೆ

ಇದನ್ನೂ ಓದಿ: Crime News: ಪತಿಯಿಂದ ಪತ್ನಿ, ಆತ್ತೆಯ ಕೊಚ್ಚಿ ಕೊಲೆ – ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸಿನಿಮಾದಲ್ಲಿ ನಟಿಸುವ ಆಸೆ, ವಂಚನೆ

Published On - 10:55 pm, Wed, 23 February 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?