AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಂತರ ರೂ. ಅವ್ಯವಹಾರ ಆರೋಪ; ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳ ದಾಳಿ

ವಾಲ್ಮೀಕಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಇದೀಗ ಭೋವಿ ಅಭಿವೃದ್ಧಿ ನಿಗಮ(Bhovi Development Corporation)ದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನಲೆ ಇಂದು(ಮಂಗಳವಾರ) ವಿಶ್ವೇಶ್ವರಯ್ಯ ಟವರ್‌ನಲ್ಲಿರುವ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೋಟ್ಯಂತರ ರೂ. ಅವ್ಯವಹಾರ ಆರೋಪ; ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳ ದಾಳಿ
ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳ ದಾಳಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Aug 13, 2024 | 10:03 PM

Share

ಬೆಂಗಳೂರು, ಆ.13: ಭೋವಿ ಅಭಿವೃದ್ಧಿ ನಿಗಮ(Bhovi Development Corporation)ದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಇಂದು(ಮಂಗಳವಾರ) ವಿಶ್ವೇಶ್ವರಯ್ಯ ಟವರ್‌ನಲ್ಲಿರುವ ನಿಗಮದ ಕಚೇರಿ ಮೇಲೆ ಸಿಐಡಿ(CID) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸತತ 3 ಗಂಟೆ ಕಾಲ ದಾಖಲೆಗಳನ್ನು ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಕೆಲ ಮಹತ್ವದ ಕಡತಗಳನ್ನು ವಶಕ್ಕೆ ಪಡೆದು ಕೊಂಡೊಯ್ದಿದ್ದಾರೆ.

 ಏನು ಹಗರಣ?

2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ‘ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾ., ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಕೆಲ ದಿನಗಳ ಹಿಂದೆಯಷ್ಟೇ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪನನ್ನ ಬಂಧಿಸಿದ್ದರು.

ಇದನ್ನೂ ಓದಿ:ಬಿಜೆಪಿ ಅವಧಿಯಲ್ಲಿನ 21 ಹಗರಣ ಪಟ್ಟಿ ಬಿಚ್ಚಿಟ್ಟ ಸಿದ್ದರಾಮಯ್ಯ: ಯಾವುವು? ಇಲ್ಲಿದೆ ನೋಡಿ

ಭೋವಿ ನಿಗಮದ ಅವ್ಯವಹಾರದಲ್ಲಿ ಶ್ರೀನಿವಾಸ ಪೂಜಾರಿ ಹೆಸರು ಪ್ರಸ್ತಾಪ ಮಾಡಿದ್ದ ಸಿದ್ದರಾಮಯ್ಯ

ಇತ್ತೀಚೆಗೆ ವಿಧಾನಸಭೆಯಲ್ಲಿ ಸಿಎಂ (Siddaramaiah) ಮಾತನಾಡುವ ವೇಳೆ ಬೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರನ್ನು ಸಿದ್ದರಾಮಯ್ಯ ಉಲ್ಲೇಖಿಸಿದ್ದರು. ಇದರಿಂದ ರೊಚ್ಚಿಗೆದಿದ್ದ ಶ್ರೀನಿವಾಸ ಪೂಜಾರಿ, ‘ಸಿದ್ದರಾಮಯ್ಯಗೆ ಪತ್ರ ಬರೆದು ಅವ್ಯವಹಾರ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು. ಒಂದು ವೇಳೆ ಸಿಬಿಐ ತನಿಖೆಗೆ ಒಪ್ಪಿಸಲು ವಿಳಂಬ ಮಾಡಿದರೆ ವಿಧಾನಸೌಧದಲ್ಲಿ ಗಾಂಧಿ ಪ್ರತಿಮೆ ಎದುರು ಧರಣಿ ಸತ್ಯಾಗ್ರಹ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 pm, Tue, 13 August 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ