ಕಾಂಗ್ರೆಸ್-ಬಿಜೆಪಿ ಕಿತ್ತಾಟಕ್ಕೆ ಕೋಟ್ಯಾಂತರ ರೂಪಾಯಿ ಪೋಲು; ಪಾಳುಬಿದ್ದ ಪುನೀತ್ ರಾಜ್​ಕುಮಾರ್ ‌ಮಲ್ಟಿ ಸೆಷ್ಪಾಲಿಟಿ ಆಸ್ಪತ್ರೆ

Puneeth Rajkumar Multispeciality Hospital: ಅದು ಕರ್ನಾಟಕ ರತ್ನ ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಲೋಕಾರ್ಪಣೆ ಮಾಡಿದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ. ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ರು. ಆದರೆ ಒಂದು ವರ್ಷವಾದ್ರು ಈ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಮಾತ್ರ ಸಿಗ್ತಿಲ್ಲ. ಕಾರಣ ಬಿಜೆಪಿ V/S ಕಾಂಗ್ರೆಸ್ ಕಿತ್ತಾಟ ಎಂಬ ಆರೋಪ ಕೇಳಿ ಬಂದಿದೆ.

ಕಾಂಗ್ರೆಸ್-ಬಿಜೆಪಿ ಕಿತ್ತಾಟಕ್ಕೆ ಕೋಟ್ಯಾಂತರ ರೂಪಾಯಿ ಪೋಲು; ಪಾಳುಬಿದ್ದ ಪುನೀತ್ ರಾಜ್​ಕುಮಾರ್ ‌ಮಲ್ಟಿ ಸೆಷ್ಪಾಲಿಟಿ ಆಸ್ಪತ್ರೆ
ಪುನೀತ್ ರಾಜ್​ಕುಮಾರ್ ‌ಮಲ್ಟಿ ಸೆಷ್ಪಾಲಿಟಿ ಆಸ್ಪತ್ರೆ
Follow us
Kiran Surya
| Updated By: ಆಯೇಷಾ ಬಾನು

Updated on: Jun 03, 2024 | 8:02 AM

ಬೆಂಗಳೂರು, ಜೂನ್.03: ಪುನೀತ್ ರಾಜ್ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (Puneeth Rajkumar Multispeciality Hospital) ಹೆಸರಿಗಷ್ಟೇ ಆಸ್ಪತ್ರೆಯಾಗಿ ಉಳಿದಿದೆ. ಲೋಕಾರ್ಪಣೆಯಾಗಿ ಒಂದು ವರ್ಷ ಕಳೆದರೂ ಆಸ್ಪತ್ರೆ ಮಾತ್ರ ಇನ್ನೂ ಓಪನ್ ಆಗಿಲ್ಲ. ಬಡ ರೋಗಿಗಳಿಗೆ ಚಿಕಿತ್ಸೆಯೂ ಸಿಗ್ತಿಲ್ಲ. ಬಿಬಿಎಂಪಿಯಿಂದ (BBMP) ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ನಾಯಂಡಹಳ್ಳಿ ವಾರ್ಡ್ ನ ಪಂತರಪಾಳ್ಯದಲ್ಲಿ ಸುಮಾರು ಅಂದಾಜು 50 ಕೋಟಿ ರೂಪಾಯಿ ವೆಚ್ಚದಲ್ಲಿ ಡಾ. ಪುನೀತ್ ರಾಜ್ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿಲಾಗಿದೆ.

2023 ಮಾರ್ಚ್​ನಲ್ಲಿ ಅಂದಿನ ಸಿಎಂ ಬಸವರಾಜ್ ಬೊಮ್ಮಯಿ ಮತ್ತು ಅಂದಿನ ಗೋವಿಂದ ರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ, ವಸತಿ ಸಚಿವ ವಿ.ಸೋಮಣ್ಣ, ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ ಕುಮಾರ್ ಅವರು ಈ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿದ್ದರು. ಸದ್ಯ ಆಸ್ಪತ್ರೆಯಲ್ಲಿ ಎಸಿ ಫಿಟ್ಟಿಂಗ್ ಕೆಲಸದಿಂದ ಹೊರಭಾಗದಲ್ಲಿ ಆಸ್ಪತ್ರೆಯ ಮೇಲ್ಬಾಗದ ಗೋಡೆಗಳಲ್ಲಿ ಸಂಪೂರ್ಣ ಬಿರುಕು ಬಿಟ್ಟಿದೆ. ಕೂಡಲೇ ಆಸ್ಪತ್ರೆ ಓಪನ್ ಮಾಡಿ ಬಡ ರೋಗಿಗಳಿಗೆ ಸಹಾಯ ಮಾಡಿ ಎಂದು ಪುನೀತ್ ಅಭಿಮಾನಿ ಮುನಿಯಪ್ಪ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮುಂಗಾರು ಮಳೆ ಆರ್ಭಟಕ್ಕೆ ಬೆಂಗಳೂರು ತತ್ತರ; ವರುಣನಿಂದ ಸೃಷ್ಟಿಯಾದ ಅವಾಂತರಗಳು ಒಂದಾ ಎರಡಾ

ಇನ್ನೂ ಆಸ್ಪತ್ರೆಯ ಸುತ್ತಮುತ್ತ ಕಸದ ವಾಸನೆ ಹರಡುತ್ತಿದೆ. ರಾತ್ರಿಯಾದ್ರೆ ಸಾಕು ಅಕ್ರಮದ ಅಡ್ಡೆ ಆಗ್ತಿದೆ ಅನ್ನೋ ಆರೋಪವಿದೆ‌‌. ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತರಾತುರಿಯಲ್ಲಿ ಈ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿತ್ತು. ಸದ್ಯ ಕಾಂಗ್ರೆಸ್ ಸರ್ಕಾರ ಕಾಮಗಾರಿ ತಡೆ ಹಿಡಿದಿರುವ ಆರೋಪದಿಂದ ಇನ್ನೂ ಆರರಿಂದ ಏಳು ತಿಂಗಳು ಕಾಮಗಾರಿ ಪೂರ್ಣವಾಗೊಲ್ಲ ಅಂತ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಟ್ನಲ್ಲಿ ಪುನೀತ್ ರಾಜ್​ಕುಮಾರ್ ಮಲ್ಟಿ ಆಸ್ಪತ್ರೆಯ ಕ್ರೆಡಿಟ್ ತೆಗೆದುಕೊಳ್ಳಲು ಬಿಜೆಪಿ ಮತ್ತು ‌ಕಾಂಗ್ರೆಸ್ ಈ ಆಸ್ಪತ್ರೆಯನ್ನು ಓಪನ್ ಮಾಡ್ತಿಲ್ಲ ಅನ್ನೋ ಮಾತುಗಳನ್ನು ಸ್ಥಳೀಯ ನಿವಾಸಿಗಳು ಹೇಳ್ತಿದ್ದು ಕೂಡಲೇ ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕಿದೆ‌. ಇಲ್ಲಾಂದ್ರೆ ಇಷ್ಟು ದೊಡ್ಡ ಆಸ್ಪತ್ರೆ ಪಾಳುಬಿದ್ದ ಕಟ್ಟಡವಾಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ ಆಸ್ಪತ್ರೆ ಯಾವ ಬಡ ರೋಗಿಗೂ ಅನುಕೂಲಕ್ಕೆ ಬರುವುದಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್