ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿ ವಂಚನೆ; ಸಿಐಡಿ ಸೈಬರ್ ಕ್ರೈಂ ಪೊಲೀಸರಿಂದ ಆರೋಪಿ ಬಂಧನ
ಕಂಪನಿಯ ಕ್ರಿಪ್ಟೋ ಕರೆನ್ಸಿಯ ಪಾಸ್‌ವರ್ಡ್ ಬದಲಿಸಿ ರೂಪಾಯಿಗೆ ಕನ್ವರ್ಟ್ ಮಾಡಿ ಬಳಿಕ ಸ್ನೇಹಿತರ ಖಾತೆಗಳಿಗೆ ವರ್ಗಾವಣೆ ಮಾಡಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು(CID Cybercrime Police)ಬಂಧಿಸಿದ್ದಾರೆ. ಬಂಧಿತನಿಂದ 2 ಮೊಬೈಲ್, ಎರಡು ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಲಾಗಿದೆ.
ಬೆಂಗಳೂರು, ಸೆ.10: ಕ್ರಿಪ್ಟೋ ಕರೆನ್ಸಿ(Cryptocurrency) ವರ್ಗಾಯಿಸಿ ವಂಚನೆ ಮಾಡಿದ್ದ ಆರೋಪಿ ಶುಭಾಂಗ್ ಜೈನ್(26) ಎಂಬಾತನನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು(CID Cybercrime Police)ಬಂಧಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಆರೋಪಿ ಶುಭಾಂಗ್ ಜೈನ್, ಕಂಪನಿಯ ಕ್ರಿಪ್ಟೋ ಕರೆನ್ಸಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಪಾಸ್‌ವರ್ಡ್ ಬದಲಿಸಿ ರೂಪಾಯಿಗೆ ಕನ್ವರ್ಟ್ ಮಾಡಿ ಬಳಿಕ ಸ್ನೇಹಿತರ ಖಾತೆಗಳಿಗೆ ವರ್ಗಾವಣೆ ಮಾಡಿ ವಂಚಿಸಿದ್ದ.
ಈ ಕುರಿತು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ನಂತರ ವಂಚನೆ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ಬಳಿಕ ನಿರಂತರ ತನಿಖೆ ನಡೆಸಿದ ಅಧಿಕಾರಿಗಳು, ಇದೀಗ ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇನ್ನು ಬಂಧಿತನಿಂದ 2 ಮೊಬೈಲ್, ಎರಡು ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ:BitCoin Value: ಯಾಕಿಷ್ಟು ಬೇಡಿಕೆ ಪಡೆಯುತ್ತಿದೆ ಬಿಟ್ಕಾಯಿನ್? ಕ್ರಿಪ್ಟೋಕರೆನ್ಸಿಯ ದಾಖಲೆ ನೋಡಿ..
ಮೂವರು ಅಂತರಾಜ್ಯ ಕಳ್ಳರ ಬಂಧನ
ಗದಗ: ಮೂವರು ಅಂತರಾಜ್ಯ ಕಳ್ಳರನ್ನ ಲಕ್ಷ್ಮೇಶ್ವರ, ಶಿರಹಟ್ಟಿ ಪೊಲೀಸರು ಬಂಧಿಸಿದ್ದಾರೆ. ರಾಣೆಬೆನ್ನೂರು ಮೂಲದ ಪ್ರಸಾದ್, ಪ್ರದೀಪ್, ಶ್ರೀಕಾಂತ್ ಬಂಧಿತ ಆರೋಪಿಗಳು. ಜೂನ್ ಹಾಗೂ ಆಗಸ್ಟ್ ತಿಂಗಳಲ್ಲಿ ಶಿರಹಟ್ಟಿ, ಲಕ್ಷ್ಮೇಶ್ವರ ವ್ಯಾಪ್ತಿಯ ದೇವಸ್ಥಾನದಲ್ಲಿ ಹುಂಡಿ ಕಳವು ಹಾಗೂ ಸರಗಳ್ಳತನ ಮಾಡಿದ್ದ ಗ್ಯಾಂಗ್ ಇದಾಗಿದ್ದು, ಇವರಿಂದ 44.22 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ, ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ