ಡಿಜಿಪಿ ಅಲೋಕ್ ಮೋಹನ್​ಗೆ ಸಿಟಿ ರವಿ ದೂರು: ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆರೋಪ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 31, 2024 | 2:56 PM

ವಿಧಾನ ಪರಿಷತ್ ಸದಸ್ಯ ಸಿಟಿ ರವಿಯನ್ನು ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ಪೊಲೀಸರು ತಮ್ಮನ್ನು ಅಕ್ರಮವಾಗಿ ಬಂಧಿಸಿ ಅಲೆದಾಡಿಸಿದ್ದಾರೆಂದು ಆರೋಪಿಸಿ ಡಿಜಿಪಿ ಅಲೋಕ್ ಮೋಹನ್​ಗೆ ದೂರು ನೀಡಿದ್ದಾರೆ. ಬೆಳಗಾವಿ ಪೊಲೀಸ್ ಕಮಿಷನರ್ ಮತ್ತು ಎಸ್ಪಿ ವಿರುದ್ಧವೂ ದೂರಿನಲ್ಲಿ ಆರೋಪಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಕೂಡ ಆರೋಪ ಮಾಡಲಾಗಿದೆ.

ಡಿಜಿಪಿ ಅಲೋಕ್ ಮೋಹನ್​ಗೆ ಸಿಟಿ ರವಿ ದೂರು: ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆರೋಪ
ಡಿಜಿಪಿ ಅಲೋಕ್ ಮೋಹನ್​ಗೆ ಸಿಟಿ ರವಿ ದೂರು: ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆರೋಪ
Follow us on

ಬೆಂಗಳೂರು, ಡಿಸೆಂಬರ್​ 31: ಡಿ. 19 ರಂದು ರಾತ್ರಿ ಅಕ್ರಮವಾಗಿ ಬಂಧಿಸಿ ಅಲೆದಾಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಪಿ ಅಲೋಕ್ ಮೋಹನ್​ಗೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ (CT Ravi) 8 ಪುಟಗಳ ದೂರು ನೀಡಿದ್ದಾರೆ. ಇಂದು ನಗರದ ಡಿಜಿಪಿ ಕಚೇರಿಯಲ್ಲಿ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​, ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಯಡಾ ಮಾರ್ಟಿನ್ ಮತ್ತು ಬೆಳಗಾವಿ ಎಸ್​ಪಿ ಭೀಮಾಶಂಕರ್ ಗುಳೇದ್ ವಿರುದ್ಧ ಆರೋಪ ಮಾಡಿದ್ದಾರೆ.

ತಮ್ಮನ್ನು ಎತ್ತಿ ಪಶುವಿನ ರೀತಿ ಕಿಡ್ನ್ಯಾಪ್ ಮಾಡಿದ್ದಾರೆಂದು ಬೆಳಗಾವಿ ಪೊಲೀಸ್​ ಕಮಿಷನರ್​, ಎಸ್​ಪಿ ವಿರುದ್ಧ ಸಿ.ಟಿ.ರವಿ ಆರೋಪ ಮಾಡಿದ್ದಾರೆ. ಇಡೀ ಸನ್ನಿವೇಶ ಫೇಕ್ ಎನ್​​ಕೌಂಟರ್ ರೀತಿ ಇತ್ತು. ಲೈಸೆನ್ಸ್ಡ್ ಸುಪಾರಿ ಕಿಲ್ಲರ್​​ಗಳ‌ ರೀತಿ ಇತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರಿಗೆ ಸಿಟಿ ರವಿ ದೂರು: ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯ, ಸೂಕ್ತ ಭದ್ರತೆಗೆ ಮನವಿ

ಈ ಬಗ್ಗೆ ಟ್ವೀಟ್ ಮಾಡಿರುವ ಸಿಟಿ ರವಿ, ನನ್ನನ್ನು ಅಕ್ರಮವಾಗಿ ಬಂಧಿಸಿ, ದೂರುಕೊಟ್ಟ ಬಳಿಕವೂ ಎಫ್​ಐ ಆರ್ ಹಾಕದೆ ನನ್ನ ಮೇಲೆ ದೌರ್ಜನ್ಯವೆಸಗಿ, ಕೆಲವು ಪ್ರಭಾವಿ ವ್ಯಕ್ತಿಗಳ ನಿದರ್ಶನದಂತೆ ರಾತ್ರಿ ಇಡೀ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡಿಸಿ, ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾಡಿದ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಬಿಜೆಪಿ ನಿಯೋಗದೊಂದಿಗೆ ತೆರಳಿ ದೂರು ನೀಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಸಿ.ಟಿ.ರವಿ ಟ್ವೀಟ್​

ಇನ್ನು ಪ್ರಕರಣ ಸಂಬಂಧ ಬಿಜೆಪಿ ನಿಯೋಗ ಈ ಹಿಂದೆ ರಾಜ್ಯಪಾಲರಿಗೆ ದೂರು ನೀಡಿತ್ತು. ಹೀಗಾಗಿ ನಿನ್ನೆ ಸಿ.ಟಿ ರವಿಗೆ ಬುಲಾವ್ ನೀಡಿದ್ದ ರಾಜ್ಯಪಾಲರು ಪ್ರಕರಣದ ಸಂಪೂರ್ಣ ವಿವರ ಪಡೆದುಕೊಂಡಿದ್ದರು. ಸಿ.ಟಿ ರವಿ ಕೂಡಾ 8 ಪುಟಗಳ ದೂರು ನೀಡಿದ್ದರು. ಈ ದೂರಿನಲ್ಲಿ ಡಿ.ಕೆ ಶಿವಕುಮಾರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.