ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವಂತೆ ಸಿಎಂ ಬೊಮ್ಮಾಯಿಗೆ ಸಿ.ಟಿ.ರವಿ ಮನವಿ

ಟ್ವೀಟ್ ಮೂಲಕ ಮನವಿ ಮಾಡಿದ ಸಿ.ಟಿ.ರವಿ, ಇಂದಿರಾ ಕ್ಯಾಂಟೀನ್ ಹೆಸರನ್ನು ‘ಅನ್ನಪೂರ್ಣೇಶ್ವರಿ’ ಕ್ಯಾಂಟೀನ್ ಎಂದು ಬದಲಿಸಲು ತಿಳಿಸಿದ್ದಾರೆ. ಶೀಘ್ರದಲ್ಲೇ ಕ್ಯಾಂಟೀನ್ ಹೆಸರನ್ನು ಮರುನಾಮಕರಣ ಮಾಡುವಂತೆ ಆಗ್ರಹಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವಂತೆ ಸಿಎಂ ಬೊಮ್ಮಾಯಿಗೆ ಸಿ.ಟಿ.ರವಿ ಮನವಿ
ಸಿಟಿ ರವಿ
Follow us
TV9 Web
| Updated By: sandhya thejappa

Updated on: Aug 07, 2021 | 12:41 PM

ಬೆಂಗಳೂರು: ಬಡವರ ಹಸಿವು ನೀಗಿಸಲು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ (Indira Canteen) ತೆರೆಯಲಾಗಿತ್ತು. ಈ ಕ್ಯಾಂಟೀನ್ ಬಡವರಿಗೆ, ನಿರ್ಗತಕರಿಗೆ ಬಹಳಷ್ಟು ಪ್ರಯೋಜನವಾಗುತ್ತಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹೆಸರನ್ನು ಕ್ಯಾಂಟೀನ್​ಗೆ ಇಡಲಾಗಿದೆ. ಆದರೆ ಈ ಹೆಸರನ್ನು ಬದಲಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T Ravi) ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ (Basavaraj Bommai) ಮನವಿ ಮಾಡಿದ್ದಾರೆ.

ಟ್ವೀಟ್ ಮೂಲಕ ಮನವಿ ಮಾಡಿದ ಸಿ.ಟಿ.ರವಿ, ಇಂದಿರಾ ಕ್ಯಾಂಟೀನ್ ಹೆಸರನ್ನು ‘ಅನ್ನಪೂರ್ಣೇಶ್ವರಿ’ ಕ್ಯಾಂಟೀನ್ ಎಂದು ಬದಲಿಸಲು ತಿಳಿಸಿದ್ದಾರೆ. ಶೀಘ್ರದಲ್ಲೇ ಕ್ಯಾಂಟೀನ್ ಹೆಸರನ್ನು ಮರುನಾಮಕರಣ ಮಾಡುವಂತೆ ಆಗ್ರಹಿಸಿದ್ದಾರೆ.

ಗಂಭೀರ ಆರೋಪ ಮಾಡಿದ್ದ ಸಿ.ಟಿ.ರವಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಅವ್ಯವಹಾರ ನಡೆಯುತ್ತಿದೆ. ಒಂದು ಕ್ಯಾಂಟೀನ್​ಗೆ ಒಂದು ಕೋಟಿ ಖರ್ಚು ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಮೂಲಕ ಕಾಂಗ್ರೆಸ್​ನವರು ಕೊಳ್ಳೆ‌ಹೊಡೆದಿದ್ದಾರೆ ಎಂದು ಸಚಿವ ಸಿ.ಟಿ.ರವಿ ಈ ಹಿಂದೆ ಗಂಭೀರ ಆರೋಪ ಮಾಡಿದ್ದರು. ಕಾಂಗ್ರೆಸ್ ದುಡ್ಡಿನಲ್ಲಿ ಇಂದಿರಾ ಕ್ಯಾಂಟೀನ್ ನಡೆಸಿದರೆ ಯಾವ ಹೆಸರನ್ನಾದರೂ ಇಟ್ಟುಕೊಳ್ಳಲಿ. ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಹೆಸರಿಡಲಿ. ಆದರೆ ಇಂದಿರಾ ಕ್ಯಾಂಟೀನ್​ಗೆ ಸರ್ಕಾರದ ಹಣ ಖರ್ಚಾಗುತ್ತಿದೆ. ಇಂದಿರಾ ಕ್ಯಾಂಟೀನ್ ಉಸ್ತುವಾರಿ ಯಾರ ಬೀಗರಿಗೆ ಕೊಟ್ಟಿದ್ದಾರೆ, ಆ ಬೀಗರು ಎಷ್ಟು ಹಣ ಲೂಟಿ ಮಾಡಿದ್ದಾರೆ ಅಂತ ಗೊತ್ತಿದೆ ಎಂದು ಕಿಡಿಕಾರಿದ್ದರು.

2019ರಲ್ಲೇ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವಂತೆ ಸಿ.ಟಿ.ರವಿ ಆಗ್ರಹಿಸಿದ್ದರು. ಇಂದಿರಾ ಕ್ಯಾಂಟೀನ್​ಗೆ ಸರ್ಕಾರದ ಹಣ ಖರ್ಚಾಗುತ್ತಿದೆ. ಹಾಗಾಗಿ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಅಂತ ಹೆಸರಿಡಲಿ ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ

Karnataka Cabinet: 29 ಸಚಿವರಿಗೆ ಖಾತೆ ಹಂಚಿಕೆ; ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ತನ್ನಲ್ಲಿಯೇ ಉಳಿಸಿಕೊಂಡ ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಅನಗತ್ಯವಾಗಿ ಹೊರಗೆ ಬಂದ್ರೆ ಕಠಿಣ ಕ್ರಮ; ಕಮಲ್ ಪಂತ್ ವಾರ್ನಿಂಗ್

(CT Ravi has appealed to CM Bommai to change the name of Indira Canteen)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ