AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕೈಕೊಟ್ಟ ನಮ್ಮ ಮೆಟ್ರೋ: ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ರೈಲು

ಮಂಗಳವಾರ ಮೆಟ್ರೋ ರೈಲಿನಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿ ಸಾರ್ವಜನಿಕರು ತೊಂದರೆ ಅನುಭವಿಸಿದ್ದರು, ಇದೀಗ ಇಂದು ಮತ್ತೆ ಅದೇ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿತ್ತು. ಹೀಗಾಗಿ ಪ್ರಯಾಣಿಕರು ಪರದಾಡಿದರು. ಸದ್ಯ ಬಿಎಂಆರ್​ಸಿಎಲ್​ ಸಿಬ್ಬಂದಿ ಸಮಸ್ಯೆ ಸರಿಪಡಿಸಿದ್ದು, ನಮ್ಮ ಮೆಟ್ರೋ ಸಂಚಾರ ಪುನಾರಂಭಗೊಂಡಿದೆ.

ಮತ್ತೆ ಕೈಕೊಟ್ಟ ನಮ್ಮ ಮೆಟ್ರೋ: ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ರೈಲು
ನಮ್ಮ ಮೆಟ್ರೋImage Credit source: tv9 kannada
ಪ್ರದೀಪ್​ ಚಿಕ್ಕಾಟಿ
| Edited By: |

Updated on:Jun 25, 2026 | 9:17 PM

Share

ಮುಖ್ಯಾಂಶಗಳು

  • ತಾಂತ್ರಿಕ ಸಮಸ್ಯೆಯಿಂದ ಮತ್ತೆ ಕೆಟ್ಟುನಿಂತಿದ್ದ ನಮ್ಮ ಮೆಟ್ರೋ ರೈಲು
  • ಕಬ್ಬನ್​ಪಾರ್ಕ್ ನಿಲ್ದಾಣದಲ್ಲಿ ಘಟನೆ
  • ಮೆಟ್ರೋ ಸಂಚಾರ ಪುನಾರಂಭವಾಗಿದ್ದರಿಂದ ಪ್ರಯಾಣಿಕರು ನಿರಾಳ

ಬೆಂಗಳೂರು, ಜೂನ್​​ 25: ನಿನ್ನೆ ಪೀಕ್ ಅವರ್​​ನಲ್ಲೇ ನಮ್ಮ ಮೆಟ್ರೊ (Namma Metro) ರೈಲು ಇದ್ದಕ್ಕಿದ್ದಂತೆ ಕೆಟ್ಟು ನಿಂತು ಬಿಟ್ಟಿತ್ತು. ಪ್ರಯಾಣ ಮಾಡುತ್ತಿದ್ದ ಸಾವಿರಾರು ಪ್ರಯಾಣಿಕರಲ್ಲಿ ಆತಂಕ ಮನೆ ಮಾಡಿತ್ತು. ಇದೀಗ ನಮ್ಮ ಮೆಟ್ರೊ ರೈಲು ಮತ್ತೆ ಕೈ ಕೊಟ್ಟಿದೆ. ಬಾಗಿಲು ಲಾಕ್ ಆಗದೇ ರೈಲು ನಿಂತಲ್ಲೇ ನಿಂತ್ತಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತಾಗಿದೆ.

ಆಗಿದ್ದೇನು?

ಬೆಂಗಳೂರಿನ ಜೀವನಾಡಿ ನಮ್ಮ ಮೆಟ್ರೋ ರೈಲಿನಲ್ಲಿ ಮತ್ತೊಮ್ಮೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೆಲಕಾಲ ಪರದಾಡುವಂತಾಯಿತು. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಬಾಗಿಲು ಲಾಕ್ ಆಗದ ಕಾರಣ, ಮೆಟ್ರೋ ರೈಲು ನಿಂತಲ್ಲೇ ನಿಂತಿತ್ತು. ಈ ಘಟನೆಯಿಂದಾಗಿ ಮೆಟ್ರೋ ಇಲ್ಲದೆ ಪ್ರಯಾಣಿಕರು ನಿಲ್ದಾಣದ ಹೊರಗಡೆ ಕೆಲಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮೆಟ್ರೋ ಸಂಚಾರ ಪುನಾರಂಭ

ಘಟನೆ ನಡೆದ ತಕ್ಷಣ ಬಿಎಂಆರ್‌ಸಿಎಲ್ ಸಿಬ್ಬಂದಿ ಹಾಗೂ ಮೆಟ್ರೋ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಬಾಗಿಲು ಲಾಕ್ ಆಗದಿರುವ ಸಮಸ್ಯೆಯನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದರು. ಸಿಬ್ಬಂದಿ ಕಾರ್ಯಚರಣೆ ಬಳಿಕ ಸದ್ಯ ಡೋರ್ ಲಾಕ್ ಸಮಸ್ಯೆಯನ್ನು ಯಶಸ್ವಿಯಾಗಿ ಸರಿಪಡಿಸಲಾಗಿದ್ದು, ವೈಟ್​ಫೀಲ್ಡ್-ಚಲ್ಲಘಟ್ಟ ನೇರಳೆ ಮಾರ್ಗದಲ್ಲಿ ಸಂಚಾರ ಪುನಾರಂಭವಾಗಿದೆ.

ಇದನ್ನೂ ಓದಿ: ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದರಿಂದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದ್ದು, ಸ್ಥಗಿತಗೊಂಡಿದ್ದ ನಮ್ಮ ಮೆಟ್ರೋ ಸಂಚಾರ ಇದೀಗ ಯಥಾಸ್ಥಿತಿಗೆ ಮರಳಿದೆ.

ತಾತ್ಕಾಲಿಕ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದ ಬಿಎಂಆರ್‌ಸಿಎಲ್

ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ರೈಲಿನ ಒಂದು ಬಾಗಿಲು ಸರಿಯಾಗಿ ಮುಚ್ಚದ ಕಾರಣ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ತಾತ್ಕಾಲಿಕ ವಿಳಂಬವಾಗಿದೆ. ಸುರಕ್ಷತಾ ಕ್ರಮಗಳನ್ನು ಪೂರ್ಣಗೊಳಿಸಲು ಸುಮಾರು 17 ನಿಮಿಷಗಳ ಸಮಯ ತೆಗೆದುಕೊಂಡಿದೆ. ಹೀಗಾಗಿ ಐದು ಮೆಟ್ರೋ ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ. ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ತಾಂತ್ರಿಕ ದೋಷವನ್ನು ತ್ವರಿತವಾಗಿ ಸರಿಪಡಿಸಿವೆ. ನೇರಳೆ ಮಾರ್ಗದ ಮೆಟ್ರೋ ಸಂಚಾರ ಇದೀಗ ಸಂಪೂರ್ಣವಾಗಿ ಸಹಜ ಸ್ಥಿತಿಗೆ ಮರಳಿದೆ ಎಂದು ಬಿಎಂಆರ್‌ಸಿಎಲ್​​ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:49 pm, Thu, 25 June 26

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!