One8 Commune Pub: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್​ಐಆರ್, ಕಾರಣವೇನು?

| Updated By: ಆಯೇಷಾ ಬಾನು

Updated on: Jul 09, 2024 | 9:18 AM

ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲಿಕತ್ವದ ಒನ್ 8 ಕಮ್ಯೂನ್ ಪಬ್​​ ಮೇಲೆ ಕಬ್ಬನ್​ಪಾರ್ಕ್​ ಠಾಣೆಯಲ್ಲಿ FIR ದಾಖಲಾಗಿದೆ. ಒನ್ 8 ಕಮ್ಯೂನ್ ಒಂದೇ ಅಲ್ಲದೆ, ಚರ್ಚ್ ಸ್ಟ್ರೀಟ್‌ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ ಆ್ಯಂಡ್ ರೆಸ್ಟೋರೆಂಟ್ ಮೇಲೂ ಪ್ರಕರಣ ದಾಖಲಾಗಿದೆ.

One8 Commune Pub: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್​ಐಆರ್, ಕಾರಣವೇನು?
ಒನ್ 8 ಕಮ್ಯೂನ್ ಪಬ್
Follow us on

ಬೆಂಗಳೂರು, ಜುಲೈ.09: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಮಾಲೀಕತ್ವದ ಪಬ್ ಮೇಲೆ ಎಫ್​ಐಆರ್ ದಾಖಲಾಗಿದೆ. ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್​​ (One8 Commune Pub) ಮೇಲೆ ಕಬ್ಬನ್​ಪಾರ್ಕ್​ ಠಾಣೆಯಲ್ಲಿ FIR ದಾಖಲಾಗಿದೆ.

ಸರ್ಕಾರ ನಿಗದಿಪಡಿಸಿರುವ ನಿಯಮವನ್ನು ಗಾಳಿಗೆ ತೂರಿ ತಡರಾತ್ರಿ ವರೆಗೂ ಪಬ್ ತೆರೆದು ಪಾರ್ಟಿಗೆ ಅನುವು ಮಾಡಿಕೊಟ್ಟ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6ರ ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ, ರಾತ್ರಿ 1.20ರವರೆಗೂ ಪಬ್ ಓಪನ್ ಮಾಡಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್, ಚರ್ಚ್ ಸ್ಟ್ರೀಟ್‌ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ ಆ್ಯಂಡ್ ರೆಸ್ಟೋರೆಂಟ್ ವ್ಯವಸ್ಥಾಪಕರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕರ್ನಾಟಕದ 27 ವೈದ್ಯಕೀಯ ಕಾಲೇಜುಗಳಲ್ಲಿಲ್ಲ ಮೂಲಸೌಕರ್ಯ: ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಬಿತ್ತು ಭಾರಿ ದಂಡ

ಇನ್ನು ಪಬ್ ಓಪನ್ ಆಗಿದ್ದ ಬಗ್ಗೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಪಬ್​​ನಲ್ಲಿ ಗ್ರಾಹಕರು ಇದ್ದರು. ನಿಯಮ ಉಲ್ಲಂಘಿಸಿ ರಾತ್ರಿ ಅವಧಿಗೂ ಮೀರಿ ಪಬ್ ಓಪನ್​​​ ಮಾಡಿದ ಹಿನ್ನೆಲೆ ಎಫ್​ಐಆರ್ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ‌ ಶೇಖರ್ ಹೆಚ್.ಟಿ. ಪ್ರತಿಕ್ರಿಯೆ ನೀಡಿದ್ದು ಸರ್ಕಾರ ನಿಗದಿ ಪಡಿಸಿದ ಅವಧಿ ಉಲ್ಲಂಘಿಸಿ ಗ್ರಾಹಕರಿಗೆ ಅವಕಾಶ ಮಾಡಿಕೊಡುತ್ತಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಒನ್ 8 ಕಮ್ಯೂನ್ ಮಾತ್ರವಲ್ಲದೆ ಅವಧಿ ಮೀರಿ ವಹಿವಾಟು ನಡೆಸುತ್ತಿದ್ದ ಕೇಂದ್ರ ವಿಭಾಗದ ಇನ್ನೂ ಕೆಲ ರೆಸ್ಟೋರೆಂಟ್ ಹಾಗೂ ಪಬ್ ಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ