AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಡಲ್ ಥೆರಪಿ ಟ್ರೆಂಡ್: ಇಲ್ಲಿ ಅಪ್ಪಿಕೊಳ್ಳುತ್ತಾರೆ, ಕೈ ಹಿಡಿಯುತ್ತಾರೆ, ಗಂಟೆಗೆ 5,000 ರೂ.

ಬೆಂಗಳೂರಿನಂತಹ ನಗರಗಳಲ್ಲಿ ಹೆಚ್ಚುತ್ತಿರುವ ಒಂಟಿತನ, ಕೆಲಸದ ಒತ್ತಡ ಮತ್ತು ಟ್ರಾಫಿಕ್ ಸಮಸ್ಯೆಗಳ ನಡುವೆ 'ಕಡಲ್ ಥೆರಪಿ' ಅಥವಾ ವೃತ್ತಿಪರ ಆಲಿಂಗನ ಚಿಕಿತ್ಸೆ ಜನಪ್ರಿಯವಾಗುತ್ತಿದೆ. ಇದು ಲೈಂಗಿಕೇತರ ಸ್ಪರ್ಶ ಚಿಕಿತ್ಸೆಯಾಗಿದ್ದು, ಆಕ್ಸಿಟೋಸಿನ್ ಹಾರ್ಮೋನ್ ಬಿಡುಗಡೆ ಮಾಡಿ ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ. ಆದರೂ ಇದು ತಾತ್ಕಾಲಿಕ ಪರಿಹಾರವಾಗಿದ್ದು, ಕುಟುಂಬ ಮತ್ತು ಸ್ನೇಹಿತರೊಂದಿಗೆ ಭಾವನೆಗಳನ್ನು ಹಂಚಿಕೊಳ್ಳುವುದು ಉತ್ತಮ ಮಾರ್ಗ.

ಬೆಂಗಳೂರಿನಲ್ಲಿ ಕಡಲ್ ಥೆರಪಿ ಟ್ರೆಂಡ್: ಇಲ್ಲಿ ಅಪ್ಪಿಕೊಳ್ಳುತ್ತಾರೆ, ಕೈ ಹಿಡಿಯುತ್ತಾರೆ, ಗಂಟೆಗೆ 5,000 ರೂ.
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 18, 2026 | 10:28 AM

Share

ಬೆಂಗಳೂರು, ಫೆ.18: ಜೀವನದಲ್ಲಿ ತುಂಬಾ ಸೋತು, ಕೆಲಸದ ಒತ್ತಡ, ಮತ್ತೊಂದು ಕಡೆ ಮಾನಸಿಕ ನೆಮ್ಮದಿ ಇಲ್ಲದಾಗ ಒಂಟಿತನ ಕಾಡುವುದು ಸಹಜ, ಆದರೆ ಅದರಿಂದ ಹೊರಗೆ ಬರುಲು ತುಂಬಾ ಸಮಯ ತೆಗೆದುಕೊಳ್ಳುತ್ತೇವೆ. ಅದರಲ್ಲೂ ಬೆಂಗಳೂರಿಗರೇ ಈ ಎಲ್ಲ ತೊಂದರೆಗಳ ನಡುವೆ ಟ್ರಾಫಿಕ್​​​​​​ ಗೋಳು ಕೂಡ ಮಾನಸಿಕ ಒತ್ತಡವಾಗಿದೆ. ಅದಕ್ಕಾಗಿ ಇಂದಿನ ಯಾಂತ್ರಿಕ ಜೀವನದಲ್ಲಿ ಜನರು ಎದುರಿಸುತ್ತಿರುವ ಒಂಟಿತನ ಮತ್ತು ಒತ್ತಡವನ್ನು ನಿವಾರಿಸಲು ‘ಕಡಲ್ ಥೆರಪಿ’ ಅಥವಾ ವೃತ್ತಿಪರ ಆಲಿಂಗನ ಚಿಕಿತ್ಸೆ (Professional Snuggling) ಜನಪ್ರಿಯವಾಗುತ್ತಿದೆ. ಬೆಂಗಳೂರಿನಂತಹ ನಗರಗಳಲ್ಲಿ 32-35 ವರ್ಷ ವಯಸ್ಸಿನ ಜನರು ಹೆಚ್ಚಾಗಿ ಈ ಸೇವೆಯನ್ನು ಬಳಸುತ್ತಿದ್ದಾರೆ .

ಕಡಲ್ ಥೆರಪಿ ಎಂದರೇನು?

ಇದು ಸಂಪೂರ್ಣವಾಗಿ ಲೈಂಗಿಕೇತರ (Non-sexual), ಸ್ನೇಹಪೂರ್ವಕ ಸ್ಪರ್ಶ ಚಿಕಿತ್ಸೆಯಾಗಿದೆ. ಇದರಲ್ಲಿ ತರಬೇತಿ ಪಡೆದ ಥೆರಪಿಸ್ಟ್‌ಗಳು ಗ್ರಾಹಕರ ಜೊತೆ ಸಮಯ ಕಳೆಯುತ್ತಾರೆ. ಅವರು ಗ್ರಾಹಕರ ಕೈ ಹಿಡಿಯುವುದು, ಪಕ್ಕದಲ್ಲಿ ಕುಳಿತು ಹರಟೆ ಹೊಡೆಯುವುದು ಅಥವಾ ಆತ್ಮೀಯವಾಗಿ ಆಲಿಂಗಿಸಿಕೊಳ್ಳುವ ಮೂಲಕ ಅವರ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತಾರೆ.

ಭಾರತದಲ್ಲಿ ಈ ಟ್ರೆಂಡ್ ಹೇಗಿದೆ?

ವಿದೇಶಗಳಲ್ಲಿ ಮೊದಲೇ ಜನಪ್ರಿಯವಾಗಿದ್ದ ಈ ಚಿಕಿತ್ಸೆ ಈಗ ಭಾರತದ ಬೆಂಗಳೂರು, ದೆಹಲಿ ಮತ್ತು ಮುಂಬೈನಂತಹ ನಗರಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಈ ಸೇವೆಯನ್ನು ಪಡೆಯಲು ಗಂಟೆಗೆ ಅಥವಾ 3-4 ಗಂಟೆಗಳ ಅವಧಿಗೆ ಸುಮಾರು 5,000 ರೂಪಾಯಿಗಳವರೆಗೆ ದರ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಿಂದ 60 ದಶಲಕ್ಷ ಗುಲಾಬಿ ರಫ್ತು: ಹೂವಿನ ರಫ್ತಿನಲ್ಲಿ ದಾಖಲೆ

ಹೇಗೆ ಕೆಲಸ ಮಾಡುತ್ತದೆ?

ಚಿಕಿತ್ಸೆಯ ಮೊದಲು ಇದರಲ್ಲಿ ಭಾಗಿಯಾಗುವ ಗ್ರಾಹಕ ನಿಯಮಗಳಿಗೆ ಒಪ್ಪಿಗೆ ನೀಡಬೇಕು. ಚಿಕಿತ್ಸೆಯ ಸಮಯದಲ್ಲಿ ಪೂರ್ಣವಾಗಿ ಬಟ್ಟೆ ಧರಿಸಿರಬೇಕು. ಮುದ್ದು ಮಾಡುವುದು ಅಥವಾ ಲೈಂಗಿಕ ಸ್ಪರ್ಶಕ್ಕೆ ಇಲ್ಲಿ ಅವಕಾಶವಿಲ್ಲ.

ಮಾನವ ಸ್ಪರ್ಶದಿಂದ ದೇಹದಲ್ಲಿ ‘ಆಕ್ಸಿಟೋಸಿನ್’ (Oxytocin) ಎಂಬ ಹಾರ್ಮೋನ್ ಬಿಡುಗಡೆಯಾಗುತ್ತದೆ. ಇದನ್ನು ‘ಫೀಲ್ ಗುಡ್’ ಹಾರ್ಮೋನ್ ಎನ್ನಲಾಗುತ್ತದೆ. ಇದು ಒತ್ತಡವನ್ನು ಕಡಿಮೆ ಮಾಡಿ ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ.

ಮುನ್ನೆಚ್ಚರಿಕೆಗಳು:

ಈ ಸೇವೆಯನ್ನು ಒದಗಿಸುವವರ ಹಿನ್ನೆಲೆಯನ್ನು ಸರಿಯಾಗಿ ಪರಿಶೀಲಿಸಬೇಕು.

ನಕಲಿ ವೆಬ್‌ಸೈಟ್‌ಗಳ ಬಗ್ಗೆ ಎಚ್ಚರಿಕೆ ಇರಬೇಕು.

ಇದು ಕೇವಲ ತಾತ್ಕಾಲಿಕ ಪರಿಹಾರವಾಗಿದ್ದು, ಕುಟುಂಬ ಮತ್ತು ಸ್ನೇಹಿತರೊಂದಿಗೆ ಭಾವನೆಗಳನ್ನು ಹಂಚಿಕೊಳ್ಳುವುದೇ ಅತ್ಯುತ್ತಮ ಮಾರ್ಗ ಎಂದು ತಜ್ಞರು ಸಲಹೆ ನೀಡುತ್ತಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:07 am, Wed, 18 February 26

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ