ಬೆಂಗಳೂರು: ಪಿಒಪಿ ಗಣೇಶ ಮೂರ್ತಿ ಮಾರಾಟಕ್ಕೆ ಅವಕಾಶ ನೀಡುವಂತೆ ಗ್ರಾಹಕರಿಂದ ಪ್ರತಿಭಟನೆ

ಗಣೇಶ ಹಬ್ಬಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ ಇದೆ. ಈಗಲೇ ಗಣೇಶನ ವಿಗ್ರಹಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಗ್ರಾಹಕರು ಮುಂಗಡವಾಗಿ ಕಾಯ್ದಿರಿಸುತ್ತಿದ್ದಾರೆ. ಈ ಪೈಕಿ ಕೆಲವರು ಪಿಒಪಿ ಗಣೇಶ ಮೂರ್ತಿಗಾಗಿ ಬೇಡಿಕೆ ಇಡುತ್ತಿದ್ದ, ಮಾರಾಟಕ್ಕೆ ಅವಕಾಶ ನೀಡುವಂತೆ ಗ್ರಾಹಕರು ಬೆಂಗಳೂರಿನ ಕುಂಬಳಗೋಡಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು: ಪಿಒಪಿ ಗಣೇಶ ಮೂರ್ತಿ ಮಾರಾಟಕ್ಕೆ ಅವಕಾಶ ನೀಡುವಂತೆ ಗ್ರಾಹಕರಿಂದ ಪ್ರತಿಭಟನೆ
ಪಿಒಪಿ ಗಣೇಶ ವಿಗ್ರಹಗಳ ಮಾರಾಟಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ಕುಂಬಳಗೋಡಿನಲ್ಲಿ ಪ್ರತಿಭಟನೆ
Follow us
Poornima Agali Nagaraj
| Updated By: Digi Tech Desk

Updated on:Sep 12, 2023 | 10:47 AM

ಬೆಂಗಳೂರು, ಆಗಸ್ಟ್ 20: ಗಣೇಶ ಚತುರ್ಥಿ (Ganesha Chaturthi) ಹಬ್ಬಕ್ಕೆ 28 ದಿವಸಗಳಷ್ಟೇ ಬಾಕಿ ಇರುವಾಗಲೇ ಗಣಪನ ವಿಗ್ರಹಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ಒಂದಷ್ಟು ಮಂದಿ ಪರಿಸರ ಸ್ನೇಹಿ ವಿಗ್ರಹಕ್ಕಾಗಿ ಮೊರೆ ಹೋಗುತ್ತಿದ್ದು, ಇನ್ನೊಂದಷ್ಟು ಮಂದಿ ಪಿಒಪಿ ಗಣೇಶನ ವಿಗ್ರಹಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಪಿಒಪಿ ಗಣೇಶ ವಿಗ್ರಹಗಳ (POP Ganesha Idol) ಮಾರಾಟಕ್ಕೆ ನಿಷೇಧ ಹೇರಿದ ಹಿನ್ನೆಲೆ ಆಕ್ರೋಶಗೊಂಡಿರುವ ಗ್ರಾಹಕರು ನಗರದ ಕುಂಬಳಗೋಡಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇಂದು ಭಾನುವಾರ ರಜಾ ದಿನ ಆಗಿದ್ದರಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾಕಷ್ಟು ಗ್ರಾಹಕರು ಪಿಒಪಿ ಗಣೇಶ ಮೂರ್ತಿಯನ್ನು ಮುಂಗಡವಾಗಿ ಕಾಯ್ದಿರಿಸಲು ಗೋಡೌನ್​ ಬಳಿ ಆಗಮಿಸಿದ್ದಾರೆ. ಆದರೆ, ಪಿಒಪಿ ಗಣೇಶ ವಿಗ್ರಹಗಳನ್ನು ಮರಾಟ ಮಾಡಬಾರದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯು ನಿನ್ನೆಯೇ ಕುಂಬಳಗೋಡಿನ ಗಣಪತಿ ಗೋಡೌನ್ ಮುಚ್ಚಿಸಿದ್ದರು. ಇದರಿಂದ ಆಕ್ರೋಶಗೊಂಡ ಗ್ರಾಹಕರು, ಪಿಒಪಿ ಗಣೇಶ ಮೂರ್ತಿ ಮಾರಾಟಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ಗೋಡೌನ್ ಮುಂದೆ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: Vibhuvana Sankashti Chaturthi 2023: ವಿಭುವನ ಸಂಕಷ್ಟ ಚತುರ್ಥಿ ಯಾವಾಗ? ಸಮಯ, ಆಚರಣೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಮಹಾರಾಷ್ಟ್ರದ ಬಾಂಬೆಯಲ್ಲಿ ಪಿಒಪಿ ಗಣೇಶ ವಿಗ್ರಹಗಳನ್ನು ಮಾರಲು ಅವಕಾಶ ನೀಡಲಾಗಿದೆ. ಅಲ್ಲಿಂದಲೇ 25 ಸಾವಿರಕ್ಕೂ ಹೆಚ್ಚು ಗಣೇಶ ಮೂರ್ತಿಗಳು ಬರುತ್ತಿವೆ. ಈ ವಿಗ್ರಹಗಳು ಒಂದು ವಾರದಲ್ಲಿ ಬೆಂಗಳೂರಿಗೆ ಬರುತ್ತವೆ. ಅವುಗಳನ್ನ ಮಾಲಿನ್ಯ ನಿಯಂತ್ರಣ ಮಂಡಳಿಗೆ ತಡೆಯಲು ಆಗುತ್ತಾ? ಒಂದು ವೇಳೆ ಆ ವಿಗ್ರಹಗಳನ್ನು ತಡೆಯಲು ಅವಕಾಶ ನೀಡದಿದ್ದರೆ ನಾವು ಕೂಡ ಬಾಂಬೆಯಿಂದಲೇ ಮೂರ್ತಿಗಳನ್ನು ತರುತ್ತೇವೆ ಅಂತ ಗ್ರಾಹಕರು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Sun, 20 August 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ