ದುಬೈನಿಂದ ಬೆಂಗಳೂರಿಗೆ ಬಂದವನಿಂದ 40 ಐಪೋನ್, 5 ಆ್ಯಪಲ್ ವಾಚ್ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಬೆಂಗಳೂರು ಅಂತರರಾಷ್ಟ್ರೀಯ ವಿಮಾನದಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರಿಂದ ಕಸ್ಟಮ್ಸ್ ಅಧಿಕಾರಿಗಳು ಚಿನ್ನ, ಮಾದಕ ವಸ್ತು ಇತ್ಯಾದಿಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಆಗಾಗ ವರದಿಯಾಗುತ್ತಿರುತ್ತದೆ. ಅಪರೂಪದ ಪ್ರಕರಣವೊಂದರಲ್ಲಿ ದುಬೈಯಿಂದ ಬಂದ ಪ್ರಯಾಣಿಕರೊಬ್ಬರ ಬ್ಯಾಗ್​​ನಿಂದ 40 ಐಪೋನ್, 5 ಆ್ಯಪಲ್ ವಾಚ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ದುಬೈನಿಂದ ಬೆಂಗಳೂರಿಗೆ ಬಂದವನಿಂದ 40 ಐಪೋನ್, 5 ಆ್ಯಪಲ್ ವಾಚ್ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
Follow us
| Updated By: ಗಣಪತಿ ಶರ್ಮ

Updated on: Jul 24, 2024 | 12:07 PM

ಬೆಂಗಳೂರು, ಜುಲೈ 24: ಬೆಂಗಳೂರು ಅಂತರರಾಷ್ಟ್ರೀಯ ವಿಮಾನದಲ್ಲಿ ಸಾಮಾನ್ಯವಾಗಿ ಚಿನ್ನ ಕಳ್ಳಸಾಗಣೆ ಪ್ರಕರಣಗಳು ಆಗಾಗ ವರದಿಯಾಗುತ್ತಿರುತ್ತವೆ. ಅಕ್ರಮವಾಗಿ ಚಿನ್ನ, ಮಾದಕ ವಸ್ತು ಸಾಗಿಸುತ್ತಿದ್ದವರನ್ನು ಕಸ್ಟಮ್ಸ್ ಅಧಿಕಾರಿಗಳು ಹೆಡೆಮುರಿ ಕಟ್ಟುತ್ತಾರೆ. ಆದರೆ ಈ ಬಾರಿ ದುಬೈಯಿಂದ ಬಂದ ವ್ಯಕ್ತಿಯೊಬ್ಬರ ಬ್ಯಾಗ್​​ನಲ್ಲಿ ಬರೋಬ್ಬರಿ 40 ಐಫೋನ್ ಹಾಗೂ 5 ಆ್ಯಪಲ್ ವಾಚ್​ಗಳು ದೊರೆತಿವೆ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ.

ದುಬೈಯಿಂದ ಬಂದ ಪ್ರಯಾಣಿಕ ಕ್ಯಾಬಿನ್ ಬ್ಯಾಗ್​​​ನಲ್ಲಿ ಐಫೋನ್ ಮತ್ತು ಆ್ಯಪಲ್ ವಾಚ್​​​ಗಳನ್ನು ಅಡಗಿಟ್ಟಿಸಿಕೊಂಡು ಬಂದಿದ್ದರು. ಅಕ್ರಮವಾಗಿ ದುಬೈನಿಂದ ಐಪೋನ್​​ಗಳನ್ನ ತಂದು ಇಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡಲು ಯತ್ನಿಸಿದ್ದರೆಂದು ಆರೋಪಿಸಲಾಗಿದೆ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿವೆ.

8 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ

2016 ರಿಂದ ನಾಪತ್ತೆಯಾಗಿದ್ದ ರೌಡಿ ಶೀಟರ್​​​ನನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯೋಹಾನ ಅಲಿಯಾಸ್ ಪಾಪ ಬಂಧಿತ ರೌಡಿ ಶೀಟರ್ ಆಗಿದ್ದು, ಮೂರು ಪೊಲೀಸ್ ಠಾಣೆಯಲ್ಲಿ ಈತನ ಹೆಸರು ಚಂದ್ರಾಲೇಔಟ್, ಅನ್ನಪೂರ್ಣೇಶ್ವರಿ ನಗರ, ಬಾಗಲುಗುಂಟೆ ಠಾಣೆಗಳ ರೌಡಿ ಶೀಟರ್ ಪಟ್ಟಿಯಲ್ಲಿದೆ. ಆರೋಪಿ ವಿರುದ್ಧ ನಗರದಲ್ಲಿ ಹಲವಾರು ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ: ಬೆಂಗಳೂರು: ಮಾನ್ಸೂನ್​ನಲ್ಲಿ ಮಕ್ಕಳನ್ನು ಕಾಡುತ್ತಿದೆ ಗುಲಾಬಿ ಕಣ್ಣಿನ ಸೋಂಕು, ವೈದ್ಯರ ಸಲಹೆ ಇಲ್ಲಿದೆ

ಯೋಹಾನ ಅಲಿಯಾಸ್ ಪಾಪ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ 1 ದರೋಡೆಗೆ ಸಿದ್ಧತೆ ಪ್ರಕರಣ, ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ 1 ರಾಬರಿ ಪ್ರಕರಣ, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ 1 ಕೊಲೆ ಪ್ರಕರಣ, ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ 1 ಕೊಲೆ ಪ್ರಕರಣ, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ 1 ಕೊಲೆ ಯತ್ನ ಪ್ರಕರಣ ದಾಖಲಾಗಿದ್ದವು.

ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಯತ್ನ ಹಾಗೂ ದರೋಡೆಗೆ ಸಿದ್ಧತೆ ಪ್ರಕರಣ, ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ರಾಬರಿ ಪ್ರಕರಣ ಸೇರಿದಂತೆ ಒಟ್ಟು 9 ಪ್ರಕರಣಗಳು ಈತನ ವಿರುದ್ಧ ದಾಖಲಾಗಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?