AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CV Raman Nagar Election Results: ಸಿವಿ ರಾಮನ್​ ನಗರ ವಿಧಾನಸಭಾ ಕ್ಷೇತ್ರದ ಎಲೆಕ್ಷನ್​ 2023 ರಿಸಲ್ಟ್: ಐದನೇ ಬಾರಿ ಗೆದ್ದ ಬಿಜೆಪಿಯ ಬಿಜೆಪಿಯ ಎಸ್. ರಘು

CV Raman Nagar Assembly Election Result 2023 Live Counting Updates: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿಯ ಎಸ್. ರಘು, ಇದೀಗ ಐದನೇ ಬಾರಿ ಮರು ಆಯ್ಕೆಯಾಗಿದ್ದಾರೆ.

CV Raman Nagar Election Results: ಸಿವಿ ರಾಮನ್​ ನಗರ ವಿಧಾನಸಭಾ ಕ್ಷೇತ್ರದ ಎಲೆಕ್ಷನ್​ 2023 ರಿಸಲ್ಟ್: ಐದನೇ ಬಾರಿ ಗೆದ್ದ ಬಿಜೆಪಿಯ ಬಿಜೆಪಿಯ ಎಸ್. ರಘು
ಮೋಹನ್ ದಾಸರಿ (ಆಮ್‌ ಆದ್ಮಿ ಪಾರ್ಟಿ), ಎಸ್. ರಘು (ಬಿಜೆಪಿ), ಎಸ್. ಆನಂದ್ ಕುಮಾರ್ (ಕಾಂಗ್ರೆಸ್)
ಸಾಧು ಶ್ರೀನಾಥ್​
| Updated By: Ganapathi Sharma|

Updated on:May 13, 2023 | 10:46 PM

Share

CV Raman Nagar Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections 2023) ಫಲಿತಾಂಶ ಪ್ರಕಟಗೊಂಡಿದೆ. ಮೇ 10 ರಂದು ನಡೆದ ಚುನಾವಣೆಯಲ್ಲಿ ಸಿ.ವಿ. ರಾಮನ್ ನಗರ ಕ್ಷೇತ್ರದಲ್ಲಿ (CV Raman Nagar Assembly Elections 2023) ಶೇ. 47 ರಷ್ಟು ಮತದಾನವಾಗಿತ್ತು. ಯಾವ್ಯಾವ ವಾರ್ಡ್‌ಗಳಿವೆ? ಇಂದಿರಾ ನಗರ, ಬೆನ್ನಿಗಾನಹಳ್ಳಿ, ಸಿ.ವಿ. ರಾಮನ್ ನಗರ, ನ್ಯೂ ತಿಪ್ಪಸಂದ್ರ, ಸುದ್ದಗುಂಟೆಪಾಳ್ಯ, ಹೊಯ್ಸಳ ನಗರ, ಸರ್ವಜ್ಞನಗರ, ಜೀವನ್‌ ಬಿಮಾ ನಗರ, ಕೋನೇನ ಅಗ್ರಹಾರ ವಾರ್ಡ್‌ಗಳು ಈ ಕ್ಷೇತ್ರದ ವ್ಯಾಪ್ತಿಗೆ ಒಳಪಡಲಿವೆ. ಮೀಸಲು ಕ್ಷೇತ್ರವಾಗಿರುವ ಇಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ, ಉರ್ದು ಸೇರಿ ಹಲವು ಭಾಷೆಯ ಜನರಿದ್ದಾರೆ, ಎಲ್ಲ ಕ್ಷೇತ್ರಗಳಂತೆಯೇ ಇಲ್ಲಿ ಕುಡಿಯುವ ನೀರು, ಒಳಚರಂಡಿ, ತ್ಯಾಜ್ಯ ವಿಲೇವಾರಿ, ರಸ್ತೆ ಗುಂಡಿ ಮತ್ತಿತರ ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸಲು ಜನಪ್ರತಿನಿಧಿಗಳು ಕ್ರಮ ಕೈಗೊಳ್ಳುತ್ತಿಲ್ಲಎಂಬುದು ಅಲ್ಲಿನ ನಿವಾಸಿಗಳ ಅಳಲು.

ಬಹುಭಾಷೆ ಮತ್ತು ಬಹುಸಂಸ್ಕೃತಿಗಳ ಆಗರವೆಂಬ ಖ್ಯಾತಿ ಹೊತ್ತಿರುವ ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಶಾಂತಿನಗರದಲ್ಲಿ ಒಂದು ಬಾರಿ ಮತ್ತು ಈ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿಯ ಎಸ್. ರಘು, ಇದೀಗ ಐದನೇ ಬಾರಿ ಮರು ಆಯ್ಕೆಯಾಗಿದ್ದಾರೆ. ಅವರಿಗೆ ಕಾಂಗ್ರೆಸ್ ಪಕ್ಷದ ಎಸ್. ಆನಂದ್ ಕುಮಾರ್ ಪ್ರತಿಸ್ಪರ್ಧಿಯಾಗಿದ್ದಾರೆ. ವಿಭಾಗದ ಹಿರಿಯ ಕೆಪಿಸಿಸಿ ಪರಿಶಿಷ್ಟ ನಾಯಕರಾಗಿ ಗುರುತಿಸಿಕೊಂಡಿರುವ ಅವರು, ಯಲಹಂಕ ಭಾಗದಲ್ಲಿ ಹೆಚ್ಚು ಚಿರಪರಿಚಿತರು. ಮೂಲತಃ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿದ್ದ ಅವರು ಕಾಂಗ್ರೆಸ್ ಪಕ್ಷದ ಹಳೆಯ ಹುಲಿ.

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ರಘು ಅವರಿಗೆ ಪ್ರಬಲ ಸ್ಪರ್ಧೆಯೊಡ್ಡಿದ್ದ ಮಾಜಿ ಮೇಯರ್ ಸಂಪತ್‌ ರಾಜ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯತೆ ಇತ್ತು. ಆ ಬಗ್ಗೆ ಪಕ್ಷದ ಹಿರಿಯ ನಾಯಕರು ಭರವಸೆ ನೀಡಿದ್ದರಿಂದ ಅವರೂ ಕ್ಷೇತ್ರದಲ್ಲಿ ಸ್ವಲ್ಪ ಮಟ್ಟಿಗೆ ಓಡಾಡಿಕೊಂಡು ಗುರುತಿಸಿಕೊಂಡಿದ್ದರು. ಆದರೆ, ಅವರು ಜೆಡಿಎಸ್‌ ವರಿಷ್ಠ ಎಚ್‌.ಡಿ. ಕುಮಾರಸ್ವಾಮಿ ಜತೆ ನಡೆಸಿದ್ದ ದೂರವಾಣಿ ಸಂಭಾಷಣೆಯ ಆಡಿಯೊ ಹೊರಬಿದ್ದು, ಅದು ಕಾಂಗ್ರೆಸ್ ಅಂಗಳ ತಲುಪಿದ್ದರಿಂದ ಟಿಕೆಟ್ ಕೈ ತಪ್ಪುವಂತಾಯಿತು. ಹಾಗಾಗಿ, ಕಾಂಗ್ರೆಸ್, ಆನಂದ್‌ ಕುಮಾರ್‌ ಅವರನ್ನು ಕಣಕ್ಕಿಳಿಸಿದೆ. ಹೊಯ್ಸಳ ನಗರ ವಾರ್ಡ್‌ನ ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದ ಆನಂದ್‌ ಕುಮಾರ್, ನಂತರ ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದು, ಕ್ಷೇತ್ರಕ್ಕೆ ಹೊಸಬರೇನಲ್ಲ.

2008ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ನಂತರ ಹೊಸದಾಗಿ ರಚನೆಯಾದ ಸಿ.ವಿ. ರಾಮನ್‌ ನಗರ ಕ್ಷೇತ್ರದಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿರುವ ಎಸ್.ರಘು ತಮ್ಮದೇ ಆದ ವರ್ಚಸ್ಸು ಬೆಳೆಸಿಕೊಂಡಿದ್ದು, ಅದೇ ಆಧಾರದಲ್ಲಿ ಈ ಬಾರಿಯೂ ಗೆಲುವಿನ ಉಮೇದಿಯಲ್ಲಿದ್ದಾರೆ. ಇಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿಯೇ ಇಲ್ಲ. ಆದರೆ, ಕ್ಷೇತ್ರದಲ್ಲಿ ಆಮ್ ಆದಿ ಪಾರ್ಟಿಯಿಂದ ಸ್ಪರ್ಧಿಸಿರುವ ಮೋಹನ್ ದಾಸರಿ ಅವರು ಒಂದಷ್ಟು ಮತಗಳನ್ನು ಸೆಳೆಯುವ ಸಾಧ್ಯತೆ ಇದೆ. ಒಟ್ಟು 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 4:00 am, Sat, 13 May 23

ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!