AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸ್ ಆಯುಕ್ತರನ್ನೂ ಬಿಡದ ಸೈಬರ್ ವಂಚಕರು: ಕಮಿಷನರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕೆ ಡಿಮ್ಯಾಂಡ್

ಸೈಬರ್ ವಂಚಕರು ಜನಸಾಮಾನ್ಯರನ್ನು ವಂಚಿಸುವುದು ಬಿಡಿ, ಇದೀಗ ಬೆಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲೇ ನಕಲಿ ಫೇಸ್​​ಬುಕ್ ಖಾತೆ ತೆರೆದು ಹಣಕ್ಕಾಗಿ ಡಿಮ್ಯಾಂಡ್ ಮಾಡಿದ ಬಗ್ಗೆ ವರದಿಯಾಗಿದೆ. ಈ ಸಂಬಂಧ ಇದೀಗ ಬೆಂಗಳೂರು ನಗರ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣ್ಯರ ಹೆಸರಿನಲ್ಲಿ ಸಾಮಾಜಿಕ ಮಾಧ್ಯಮ ಖಾತೆಗಳು ಕಾಣಿಸಿದರೆ ಪರಿಶೀಲಿಸದೆ ನಂಬದಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತರನ್ನೂ ಬಿಡದ ಸೈಬರ್ ವಂಚಕರು: ಕಮಿಷನರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕೆ ಡಿಮ್ಯಾಂಡ್
ಸಾಂದರ್ಭಿಕ ಚಿತ್ರImage Credit source: TV9 Network
Shivaprasad B
| Edited By: |

Updated on: Feb 16, 2026 | 11:23 AM

Share

ಬೆಂಗಳೂರು, ಫೆಬ್ರವರಿ 16: ಬೆಂಗಳೂರು (Bangalore) ನಗರ ಪೊಲೀಸ್ ಆಯುಕ್ತರ ಹೆಸರನ್ನೇ ಬಳಸಿಕೊಂಡು ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಜನರನ್ನು ಮೋಸಗೊಳಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಸೀಮಂತ್ ಕುಮಾರ್ ಸಿಂಗ್ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ, ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು ಪೋಸ್ಟ್ ಮಾಡಿ ಜನರ ವಿಶ್ವಾಸ ಗಳಿಸಲು ವಂಚಕರು ಪ್ರಯತ್ನಿಸಿದ್ದಾರೆ.

ಪೊಲೀಸ್ ಆಯುಕ್ತರೇ ಪೋಸ್ಟ್ ಮಾಡುತ್ತಿದ್ದಾರೆಂದು ನಂಬಿದ ಕೆಲವರು ಆ ಖಾತೆಗೆ ಪ್ರತಿಕ್ರಿಯೆ ನೀಡಿದ್ದು, ಬಳಿಕ ಖಾಸಗಿ ಸಂದೇಶಗಳ ಮೂಲಕ ಹಣ ಕೇಳುವ ಯತ್ನ ನಡೆದಿದೆ ಎನ್ನಲಾಗಿದೆ. ಮೊದಲಿಗೆ ನಂಬಿಕೆ ಮೂಡಿಸಿ ನಂತರ ಹಣ ದೋಚುವ ಉದ್ದೇಶದಿಂದಲೇ ಈ ಖಾತೆ ಸೃಷ್ಟಿಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ರೀತಿಯ ವಂಚನೆ ಇದೇ ಮೊದಲಲ್ಲ. ಈ ಹಿಂದೆ ಕೂಡ ಅಲೋಕ್ ಕುಮಾರ್ ಹಾಗೂ ಭೀಮಾಶಂಕರ ಅವರ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ತೆರೆಯಲಾಗಿತ್ತು. ಇದೀಗ ಮತ್ತೊಮ್ಮೆ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಗಿರಿನಗರ ಬ್ಯಾಂಕ್​ನಲ್ಲಿಟ್ಟಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣಕ್ಕೆ ಕನ್ನ! ಅಸಿಸ್ಟೆಂಟ್ ಮ್ಯಾನೇಜರ್​ನಿಂದಲೇ ನಡೀತು ಕಳ್ಳತನ

ಈ ಕುರಿತು ಬೆಂಗಳೂರು ನಗರ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಕಲಿ ಖಾತೆಗಳನ್ನು ಸೃಷ್ಟಿಸಿದವರ ಪತ್ತೆಗೆ ತನಿಖೆ ಆರಂಭಿಸಲಾಗಿದೆ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಗಣ್ಯರ ಹೆಸರಿನ ಖಾತೆಗಳನ್ನು ಕಂಡಕೂಡಲೇ ನಂಬುವ ಮೊದಲು ಪರಿಶೀಲನೆ ನಡೆಸಿ ಪೂರ್ವಾಪರ ತಿಳಿದುಕೊಳ್ಳಬೇಕು. ಸಂಶಯಾಸ್ಪದ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ